AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವಾರಕ್ಕೆ ‘ಧುರಂಧರ್ 2’ ಸಾವಿರ ಕೋಟಿ ಕಲೆಕ್ಷನ್; ಆದರೂ ಮುರಿಯೋಕೆ ಆಗಿಲ್ಲ ಒಂದು ದಾಖಲೆ

ಒಂದು ವಾರಕ್ಕೆ 'ಧುರಂಧರ್ 2' ಸಿನಿಮಾ ಸಾವಿರ ಕೋಟಿ ಗಳಿಸಿ ಭರ್ಜರಿ ಯಶಸ್ಸು ಕಂಡಿದೆ. ರಣವೀರ್ ಸಿಂಗ್ ನಟನೆಯ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿದರೂ, 'ಪುಷ್ಪ 2' ಸೃಷ್ಟಿಸಿದ ಅತಿ ವೇಗದ ಸಾವಿರ ಕೋಟಿ ಗಳಿಕೆಯ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ. ಎರಡನೇ ಅತಿ ವೇಗದ ಚಿತ್ರವಾಗಿ ಹೊರಹೊಮ್ಮಿದ 'ಧುರಂಧರ್ 2'ನ ಮುಂದಿನ ಗಳಿಕೆ ಕುರಿತು ಕುತೂಹಲ ಮೂಡಿಸಿದೆ.

ಒಂದೇ ವಾರಕ್ಕೆ ‘ಧುರಂಧರ್ 2’ ಸಾವಿರ ಕೋಟಿ ಕಲೆಕ್ಷನ್; ಆದರೂ ಮುರಿಯೋಕೆ ಆಗಿಲ್ಲ ಒಂದು ದಾಖಲೆ
ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Mar 26, 2026 | 7:02 AM

Share

ಒಂದು ವಾರಕ್ಕೆ ನೂರು ಕೋಟಿ ರೂಪಾಯಿ ಗಳಿಕೆ ಆದರೆ ದೊಡ್ಡದು ಎನ್ನುವ ಪರಿಸ್ಥಿತಿ ಈಗ ಇದೆ. ಯಾರೂ ಸಿನಿಮಾ ನೋಡಲು ಥಿಯೇಟರ್​​ಗೆ ಬರುತ್ತಿಲ್ಲ ಎಂಬ ಆರೋಪ ಜೋರಾಗಿರುವ ಈ ಸಂದರ್ಭದಲ್ಲಿ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ (Dhurandhar 2) ಒಂದೇ ವಾರಕ್ಕೆ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದರೂ ಅತಿ ವೇಗದಲ್ಲಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಸಿನಿಮಾ ಎಂಬ ದಾಖಲೆಯನ್ನು ಮುರಿಯೋಕೆ ಸಾಧ್ಯವಾಗಿಲ್ಲ.

‘ಧುರಂಧರ್ 2’ ಚಿತ್ರ ಅಬ್ಬರಿಸುತ್ತಿದೆ. ಮೊದಲ ವಾರದಲ್ಲಿ ಈ ಚಿತ್ರ ಎಲ್ಲ ಕಡೆಗಳಲ್ಲೂ ಉತ್ತಮ ಪ್ರದರ್ಶನ ಕಾಣುತ್ತಿದೆ. ಹಿಂದಿ ಮಾತ್ರವಲ್ಲದೆ, ತೆಲುಗು ಭಾಷೆಯಲ್ಲೂ ಚಿತ್ರ ಉತ್ತಮ ರೀತಿಯಲ್ಲಿ ಗಳಿಕೆ ಮಾಡುತ್ತಿದೆ. ಇದರಿಂದ ಸಿನಿಮಾ ಒಂದು ವಾರಕ್ಕೆ 1,006 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಅತಿ ವೇಗದಲ್ಲಿ ಗಳಿಕೆ ಮಾಡಿದ ಎರಡನೇ ಸಿನಿಮಾ ಆಗಿ ಇದು ಹೊರಹೊಮ್ಮಿದೆ.

ಅತಿ ವೇಗದಲ್ಲಿ ಸಾವಿರ ಕ್ಲಬ್ ಸೇರಿದ ದಾಖಲೆ ‘ಪುಷ್ಪ 2’ ಬಳಿ ಇದೆ. ಈ ಚಿತ್ರ ಏಳು ದಿನಗಳಲ್ಲಿ ಬರೋಬ್ಬರಿ 1067 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಅಲ್ಲು ಅರ್ಜುನ್ ಸಿನಿಮಾ ಮಾಡಿದ ದಾಖಲೆಯನ್ನು ಮುರಿಯಲು ‘ಪುಷ್ಪ 2’ ಬಳಿ ಇನ್ನೂ ಸಾಧ್ಯವಾಗಿಲ್ಲ. ಒಟ್ಟಾರೆ ಗಳಿಕೆ ವಿಷಯದಲ್ಲಿ ‘ಧುರಂಧರ್ 2’ ಚಿತ್ರವು ‘ಪುಷ್ಪ 2’ ಚಿತ್ರದ ದಾಖಲೆಯನ್ನು ಮುರಿಯುತ್ತದೆಯೇ ಎಂಬುದು ಸದ್ಯದ ಕುತೂಹಲ.

ಇದನ್ನೂ ಓದಿ: ‘ಧುರಂಧರ್ 2’ ಅಬ್ಬರಕ್ಕೆ ಹೆದರಿದ ಅಕ್ಷಯ್ ಕುಮಾರ್? ‘ಭೂತ್ ಬಂಗ್ಲ’ ಬಿಡುಗಡೆ ಮುಂದೂಡಿಕೆ ಸಾಧ್ಯತೆ

‘ಧುರಂಧರ್ 2’ ಸಿನಿಮಾ ಬುಧವಾರ (ಮಾರ್ಚ್ 25) 47 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರದ ಹೆಚ್ಚುಗಾರಿಕೆ. ವಾರದ ದಿನವೂ ಸಿನಿಮಾ ಅಬ್ಬರಿಸುತ್ತಿರುವುದು ವಿಶೇಷ. ಈ ವಾರಾಂತ್ಯದಲ್ಲಿ ಸಿನಿಮಾ ಪ್ರತಿ ದಿನ 100 ಕೋಟಿ ರೂಪಾಯಿ ಗಳಿಕೆ ಮಾಡುವ ನಿರೀಕ್ಷೆ ಇದೆ. ವೀಕೆಂಡ್ ಶೋಗಳು ಈಗಲೇ ಹೌಸ್​​​ಪುಲ್ ಪ್ರದರ್ಶನ ಕಾಣುತ್ತಾ ಇವೆ. ರಣವೀರ್ ಸಿಂಗ್ ಅವರು ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ದುರ್ಗಾ ಪೂಜೆ ವೇಳೆ ಕಣ್ಣೀರಿಟ್ಟ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ
ದುರ್ಗಾ ಪೂಜೆ ವೇಳೆ ಕಣ್ಣೀರಿಟ್ಟ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ
ಕಿತ್ತೂರು ಉತ್ಸವ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ
ಕಿತ್ತೂರು ಉತ್ಸವ ಸಂದರ್ಭದಲ್ಲೇ ರಾಣಿ ಚನ್ನಮ್ಮನ ಮೂರ್ತಿಗೆ ಹಾನಿ
ಮಂಜನ ಆ ವರ್ತನೆಯಿಂದ ನನಗೆ ತುಂಬ ನೋವಾಯಿತು: ಬಿಗ್ ಬಾಸ್ ಕಾವ್ಯಾ ಗೌಡ
ಮಂಜನ ಆ ವರ್ತನೆಯಿಂದ ನನಗೆ ತುಂಬ ನೋವಾಯಿತು: ಬಿಗ್ ಬಾಸ್ ಕಾವ್ಯಾ ಗೌಡ
ಸಚಿವ ಶಿವಲಿಂಗೇಗೌಡರ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ
ಸಚಿವ ಶಿವಲಿಂಗೇಗೌಡರ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ
ನನ್ನ ಡಾಕ್ಟರ್​ ಸಿದ್ದರಾಮಯ್ಯ ಅಂತ ಕರೀಬೇಡಿ: ಮಾಜಿ ಸಿಎಂ ನಗೆ ಚಟಾಕಿ
ನನ್ನ ಡಾಕ್ಟರ್​ ಸಿದ್ದರಾಮಯ್ಯ ಅಂತ ಕರೀಬೇಡಿ: ಮಾಜಿ ಸಿಎಂ ನಗೆ ಚಟಾಕಿ
ಬೆಸ್ಟ್ ದಸರಾ ರೀಲ್ಸ್​​​​ಗೆ​​​ ಬಹುಮಾನ ಘೋಷಿಸಿದ ಸಿಎಂ: ಮಿಸ್ ಮಾಡ್ಕೋಬೇಡಿ
ಬೆಸ್ಟ್ ದಸರಾ ರೀಲ್ಸ್​​​​ಗೆ​​​ ಬಹುಮಾನ ಘೋಷಿಸಿದ ಸಿಎಂ: ಮಿಸ್ ಮಾಡ್ಕೋಬೇಡಿ
‘ಬಿಗ್ ಬಾಸ್ ಮನೆಯಲ್ಲಿ ನಮ್ಮ ಲೆಕ್ಕಾಚಾರ ನಡೆಯಲ್ಲ’: ಕಾವ್ಯಾ ಗೌಡ ಎಲಿಮಿನೇಟ್
‘ಬಿಗ್ ಬಾಸ್ ಮನೆಯಲ್ಲಿ ನಮ್ಮ ಲೆಕ್ಕಾಚಾರ ನಡೆಯಲ್ಲ’: ಕಾವ್ಯಾ ಗೌಡ ಎಲಿಮಿನೇಟ್
ಮುಗ್ಧ ಕಂದಮ್ಮಗಳ ದೊಡ್ಡ ಮನಸ್ಸಿಗೆ ಪ್ರಶಂಸೆ
ಮುಗ್ಧ ಕಂದಮ್ಮಗಳ ದೊಡ್ಡ ಮನಸ್ಸಿಗೆ ಪ್ರಶಂಸೆ
ಸ್ಟಿಂಗ್ ಆಪರೇಷನ್​ ಕೇಸ್ ತನಿಖೆಗೆ ಹಿಂಜರಿಯುವ ಪೊಲೀಸರನ್ನು ವಜಾ ಮಾಡ್ಬೇಕು
ಸ್ಟಿಂಗ್ ಆಪರೇಷನ್​ ಕೇಸ್ ತನಿಖೆಗೆ ಹಿಂಜರಿಯುವ ಪೊಲೀಸರನ್ನು ವಜಾ ಮಾಡ್ಬೇಕು
ಇಕ್ಕಟ್ಟಿನಲ್ಲಿ ಗಗನ್; ಸೌಂದರ್ಯಾ-ತಾಂಡವ್ ಪೈಕಿ ಯಾರು ನಾಮಿನೇಟ್?
ಇಕ್ಕಟ್ಟಿನಲ್ಲಿ ಗಗನ್; ಸೌಂದರ್ಯಾ-ತಾಂಡವ್ ಪೈಕಿ ಯಾರು ನಾಮಿನೇಟ್?