AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​​ ತಲೆಗೇರಿತೇ ‘ಧುರಂಧರ್ 2’ ಯಶಸ್ಸು? ನಡೆದುಕೊಂಡ ರೀತಿಗೆ ಶುರುವಾಗಿದೆ ಚರ್ಚೆ

ರಣವೀರ್ ಸಿಂಗ್‌ಗೆ 'ಧುರಂಧರ್ 2' ಯಶಸ್ಸು ತಲೆಗೇರಿದೆ ಎಂಬ ಚರ್ಚೆ ಶುರುವಾಗಿದೆ. ಅನಂತ್ ಅಂಬಾನಿ ಪಾರ್ಟಿಯಲ್ಲಿ ಶಾರುಖ್ ಖಾನ್ ಅವರನ್ನು ರಣವೀರ್ ನಿರ್ಲಕ್ಷಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಈ ಘಟನೆ ರಣವೀರ್ ವರ್ತನೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ, ಇನ್ನೊಂದು ಪಾರ್ಟಿಯಲ್ಲಿ ಶಾರುಖ್ ಮತ್ತು ರಣವೀರ್ ಒಟ್ಟಾಗಿ ಕಾಣಿಸಿಕೊಂಡಿದ್ದು, ವಿವಾದಕ್ಕೆ ಬೇರೆ ಆಯಾಮ ನೀಡಿದೆ.

ರಣವೀರ್​​ ತಲೆಗೇರಿತೇ ‘ಧುರಂಧರ್ 2’ ಯಶಸ್ಸು? ನಡೆದುಕೊಂಡ ರೀತಿಗೆ ಶುರುವಾಗಿದೆ ಚರ್ಚೆ
ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on:Apr 10, 2026 | 2:51 PM

Share

ರಣವೀರ್ ಸಿಂಗ್ ಅವರು ಚಿತ್ರರಂಗದ ಹಿನ್ನೆಲೆ ಹೊಂದಿದ್ದರೂ ಅವರು ಸಾಕಷ್ಟು ಏರಿಳಿತ ಅನುಭವಿಸಬೇಕಾಯಿತು. ಅವರನ್ನು ಅನೇಕರು ನಿರ್ಲಕ್ಷಿಸಿದ್ದರು. ಈಗ ‘ಧುರಂಧರ್’ ಹಾಗೂ ‘ಧುರಂಧರ್ 2’ ಮೂಲಕ ಎಲ್ಲರಿಗೂ ಅವರು ಉತ್ತರ ನೀಡಿದ್ದಾರೆ. ಈ ಸಂದರ್ಭದಲ್ಲಿ ಒಂದು ವಿಡಿಯೋ ವೈರಲ್ ಆಗಿದೆ. ಬಾಲಿವುಡ್​ ಸೂಪರ್​ ಸ್ಟಾರ್ ಶಾರುಖ್ ಖಾನ್ (Shahr Rukh Khan) ಅವರನ್ನು ರಣವೀರ್ ಸಿಂಗ್ ಸಂಪೂರ್ಣವಾಗಿ ನಿರ್ಲಕ್ಷಿಸಿದರೇ ಎನ್ನುವ ಪ್ರಶ್ನೆ ಮೂಡಿದೆ. ರಣವೀರ್​​ಗೆ ಯಶಸ್ಸು ತಲೆಗೇರಿದೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಅನಂತ್ ಅಂಬಾನಿ ಗುಜರಾತ್​​ನ ಜಾಮ್​​ನಗರದಲ್ಲಿ ಅದ್ದೂರಿ ಬರ್ತ್​​ಡೇ ಪಾರ್ಟಿ ಆಯೋಜನೆ ಮಾಡಿದ್ದರು. ಇದಕ್ಕೆ ಸಲ್ಮಾನ್ ಖಾನ್, ಶಾರುಖ್ ಖಾನ್, ರಣವೀರ್ ಸಿಂಗ್ ಸೇರಿದಂತೆ ಅನೇಕರು ಆಗಮಿಸಿದ್ದರು. ಎಲ್ಲರೂ ಭರ್ಜರಿಯಾಗಿ ಪಾರ್ಟಿ ಮಾಡಿದ್ದಾರೆ. ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಪಾರ್ಟಿಯ ಹೈಲೈಟ್ ಎಂದರೆ ಅದು ರಣವೀರ್ ಸಿಂಗ್ ಆಗಿದ್ದರು.

‘ಧುರಂಧರ್ 2’ ಸಕ್ಸಸ್ ಬಳಿಕ ಬಾಲಿವುಡ್ ಸೆಲೆಬ್ರಿಟಿಗಳಿಗೆ ರಣವೀರ್ ಸಿಂಗ್ ಅವರು ಕಾಣಿಸಿದ್ದು ಈಗಲೇ. ಅವರನ್ನು ಎಲ್ಲರೂ ಬಂದು ಮಾತನಾಡಿಸುತ್ತಿದ್ದರು. ಈಗ ವೈರಲ್ ಆಗಿರೋ ವಿಡಿಯೋದಲ್ಲೂ ರಣವೀರ್ ಸಿಂಗ್ ಸುತ್ತಲೂ ಅತಿಥಿಗಳು ನಿಂತಿದ್ದರು. ಅನಂತ್ ಅಂಬಾನಿ ಕೂಡ ಇದ್ದರು. ಆಗ ಶಾರುಖ್ ಖಾನ್ ರಣವೀರ್ ಹೆಗಲ ಮೇಲೆ ಕೈ ಹಾಕಿದರು. ಆ ಬಳಿಕ ಕೆನ್ನೆಯನ್ನು ಮುಟ್ಟಿದರು. ಅವರು ಅನಂತ್ ಕಡೆ ಹೋದರು. ಆದರೆ ರಣವೀರ್ ಅದನ್ನು ನಿರ್ಲಕ್ಷಿಸಿದರು ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ‘ಶಾರುಖ್ ಖಾನ್ ಅವರನ್ನು ರಣವೀರ್ ಗಮನಕ್ಕೆ ತೆಗೆದುಕೊಳ್ಳಲಿಲ್ಲ’ ಎಂದು ಅನೇಕರು ಹೇಳಿದರು. ಇನ್ನೂ ಕೆಲವರು ‘ಇದೊಂದು ಕ್ಲಿಪ್ ನೋಡಿ ನೋಡಿ ನೀವು ಎಲ್ಲವನ್ನೂ ಹೇಗೆ ನಿರ್ಧರಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ರಣವೀರ್ ಸಿಂಗ್ ಕೆನ್ನೆ ಮುಟ್ಟಿ ಮಾತಾಡಿಸಿದ ಶಾರುಖ್ ಖಾನ್; ವಿಡಿಯೋ ವೈರಲ್

ಖ್ಯಾತ ಉದ್ಯಮಿ ಮೋಹಿತ್ ಕಾಂಬೋಜ್ ಅವರ ಪುತ್ರಿ ಮಿಷ್ಕಾ ಕಾಂಬೋಜ್ ಅವರ ಅದ್ದೂರಿ ಹುಟ್ಟುಹಬ್ಬದ ಪಾರ್ಟಿ ಮುಂಬೈನಲ್ಲಿ ಇತ್ತೀಚೆಗೆ ನಡೆದಿತ್ತು. ಈ ವೇಳೆ ಶಾರುಖ್ ಹಾಗೂ ರಣವೀರ್ ಒಟ್ಟಾಗಿ ಪಾರ್ಟಿ ಮಾಡಿದ್ದರು. ಹೀಗಾಗಿ, ಸಲ್ಲುನ ನಿರ್ಲಕ್ಷಿಸಿದರು ಎಂಬುದರಲ್ಲಿ ಅರ್ಥವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:51 pm, Fri, 10 April 26

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ