‘ಧುರಂಧರ್ 2’ ಬಳಿಕ ರಣವೀರ್ ಸಿಂಗ್ ಮುಂದಿನ ಸಿನಿಮಾ ಇದೇ ನೋಡಿ

ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ 'ಪ್ರಳಯ್' ಸಿನಿಮಾ ಸ್ಥಗಿತಗೊಂಡಿದೆ ಎಂಬ ವದಂತಿಗಳು ಸುಳ್ಳು ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ. ₹300 ಕೋಟಿ ಬಜೆಟ್‌ನಲ್ಲಿ ಸಿದ್ಧವಾಗುತ್ತಿರುವ ಈ ಭಾರತದ ಅತಿ ದುಬಾರಿ ಜಾಂಬಿ ಚಿತ್ರ ಆಗಸ್ಟ್ 2026ಕ್ಕೆ ಶೂಟಿಂಗ್ ಆರಂಭಿಸಲಿದೆ. ಪ್ರೀ-ಪ್ರೊಡಕ್ಷನ್ ಕಾರ್ಯ ಭರದಿಂದ ಸಾಗಿದ್ದು, ರಣವೀರ್ ವಿಶೇಷ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2027ಕ್ಕೆ ಬಿಡುಗಡೆ ನಿರೀಕ್ಷೆ.

‘ಧುರಂಧರ್ 2’ ಬಳಿಕ ರಣವೀರ್ ಸಿಂಗ್ ಮುಂದಿನ ಸಿನಿಮಾ ಇದೇ ನೋಡಿ
ರಣವೀರ್
Image Credit source: Ranveer Singh Instagram

Updated on: Apr 30, 2026 | 1:05 PM

‘ಧುರಂಧರ್’ ಹಾಗೂ ‘ಧುರಂದರ್ 2’ ಯಶಸ್ಸಿನ ಬಳಿಕ ರಣವೀರ್ ಸಿಂಗ್ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಮೂಡಿದೆ. ಅವರ ನಟನೆಯ ‘ಡಾನ್ 3’ ಸಿನಿಮಾ ಸೆಟ್ಟೇರುವುದು ಅನುಮಾನ ಎಂದು ಹೇಳಲಾಗುತ್ತಾ ಇದೆ. ಅವರ ‘ಪ್ರಳಯ್’ ಚಿತ್ರದ ಬಗ್ಗೆಯೂ ನಿರೀಕ್ಷೆ ಮೂಡಿದೆ. ಈ ಸಿನಿಮಾ ಹಲವು ಅಡೆತಡೆಗಳನ್ನು ಎದುರಿಸುತ್ತಿದೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಈ ಎಲ್ಲಾ ಊಹಾಪೋಹಗಳಿಗೆ ಬ್ರೇಕ್ ಬಿದ್ದಿದೆ. ಈ ಸಿನಿಮಾ ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್ 2026ರಲ್ಲಿ ಶೂಟಿಂಗ್ ಆರಂಭಿಸಲಿದೆ ಎಂಬ ಹೊಸ ಮಾಹಿತಿ ಹೊರಬಿದ್ದಿದೆ.

‘ಧುರಂಧರ್’ ಫ್ರಾಂಚೈಸಿಯ ಯಶಸ್ಸಿನ ನಂತರ ರಣವೀರ್ ಸಿಂಗ್ ಯಾವ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎನ್ನುವ ಕುತೂಹಲ ಇತ್ತು. ಹೀಗಿರುವಾಗಲೇ ಅವರು ನಿರ್ದೇಶಕ ಜೈ ಮೆಹ್ತಾ ಅವರ ‘ಪ್ರಳಯ್’ ಸಿನಿಮಾದಲ್ಲಿ ನಟಿಸೋ ಮಾಹಿತಿ ಹೊರ ಬಿತ್ತು. ಆದರೆ, ನಿರ್ದೇಶಕ ಹಾಗೂ ರಣವೀರ್ ಸಿಂಗ್ ಮಧ್ಯೆ ಸೃಜನಾತ್ಮಕ ಭಿನ್ನಾಭಿಪ್ರಾಯಗಳಿವೆ ಎಂದು ಹೇಳಲಾಗುತ್ತಿದೆ. ಇದರಿಂದ ಸಿನಿಮಾ ಸ್ಥಗಿತಗೊಂಡಿದೆ ಎಂಬ ವರದಿಗಳು ಹರಿದಾಡಿದ್ದವು. ಆದರೆ ಈ ಸುದ್ದಿಯನ್ನು ಚಿತ್ರತಂಡದ ಆಪ್ತ ಮೂಲಗಳು ನಿರಾಕರಿಸಿವೆ. ‘ಪ್ರಳಯ್’ ಚಿತ್ರದ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸುಳ್ಳು ಎಂದು ಹೇಳಲಾಗಿದೆ. ರಣವೀರ್ ಮತ್ತು ಜೈ ನಿರಂತರವಾಗಿ ಸ್ಕ್ರಿಪ್ಟ್ ಚರ್ಚೆ ನಡೆಸಿ ಅದನ್ನು ಫೈನಲ್ ಮಾಡಿದ್ದಾರೆ. ಸಿನಿಮಾ ಈಗಾಗಲೇ ಪ್ರೀ-ಪ್ರೊಡಕ್ಷನ್ ಹಂತಕ್ಕೆ ತಲುಪಿದೆಎಂದು ಮೂಲಗಳು ತಿಳಿಸಿವೆ.

‘ಪ್ರಳಯ್’ ಭಾರತೀಯ ಚಿತ್ರರಂಗದಲ್ಲಿ ಸಿದ್ಧವಾಗಲಿರುವ ದುಬಾರಿ ಜಾಂಬಿ ಶೈಲಿಯ ಸಿನಿಮಾ ಆಗಲಿದೆ. ಹಿಂದಿ ಚಿತ್ರರಂಗದಲ್ಲಿ ಈ ಮಟ್ಟದ ಬೃಹತ್ ಜಾಂಬಿ ಸಿನಿಮಾ ಇದುವರೆಗೆ ಬಂದಿಲ್ಲ. ಈ ಚಿತ್ರವು ಸುಮಾರು 300 ಕೋಟಿ ರೂಪಾಯಿಗಳ ಭಾರಿ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದ್ದು, ಬಾಲಿವುಡ್‌ನ ಅತ್ಯಂತ ದುಬಾರಿ ಸಿನಿಮಾಗಳ ಪಟ್ಟಿಗೆ ಸೇರಲಿದೆ.

ಇದನ್ನೂ ಓದಿ: ಮತ್ತೆ ಒಂದಾದ ‘ಧುರಂಧರ್’ ಜೋಡಿ; ಆದಿತ್ಯ ಧಾರ್ ಹೊಸ ಚಿತ್ರಕ್ಕೆ ರಣವೀರ್ ಹೀರೋ

ನಿರ್ದೇಶಕ ಜೈ ಮೆಹ್ತಾ ಮತ್ತು ‘ಲೂಟೇರೆ’ ಖ್ಯಾತಿಯ ವಿಶಾಲ್ ಕಪೂರ್ ಈ ಸಿನಿಮಾಗೆ ಚಿತ್ರಕಥೆ ಬರೆದಿದ್ದಾರೆ. ಈ ಚಿತ್ರಕ್ಕಾಗಿ ರಣವೀರ್ ಸಿಂಗ್ ವಿಶೇಷ ಲುಕ್​​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. 2027ಕ್ಕೆ ಸಿನಿಮಾ ತೆರೆಗೆ ಬರಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us