AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಹಾಡಿನ ವಿವಾದ: ಕ್ಷಮೆ ಕೇಳಿ, 50 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲು ಮುಂದಾದ ಬಾದ್​ಶಾ

ಅಶ್ಲೀಲ ಹಾಡು ಮಾಡಿದ್ದಕ್ಕೆ ಗಾಯಕ ಬಾದ್​ಶಾ ಅವರು ಮಹಿಳಾ ಆಯೋಗದ ಎದುರು ಕ್ಷಮೆ ಕೇಳಿದ್ದಾರೆ. ‘ಇನ್ನು ಮುಂದೆ ಇಂತಹ ಯಾವುದೇ ಅಸಭ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ’ ಎಂದು ಅವರು ಆಯೋಗಕ್ಕೆ ತಿಳಿಸಿದ್ದಾರೆ. 50 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವುದಾಗಿ ಅವರು ಹೇಳಿದ್ದಾರೆ.

ಅಶ್ಲೀಲ ಹಾಡಿನ ವಿವಾದ: ಕ್ಷಮೆ ಕೇಳಿ, 50 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಲು ಮುಂದಾದ ಬಾದ್​ಶಾ
Badshah
ಮದನ್​ ಕುಮಾರ್​
|

Updated on: Apr 07, 2026 | 10:04 PM

Share

ವಿಭಿನ್ನ ರ‍್ಯಾಪ್ ಹಾಡುಗಳ ಮೂಲಕ ಜನಪ್ರಿಯರಾದ ಗಾಯಕ ಬಾದ್‌ಶಾ ಅವರು ಇತ್ತೀಚೆಗೆ ‘ಟಟೀರಿ’ (Tateeree) ಹಾಡಿನಿಂದ ದೊಡ್ಡ ವಿವಾದ ಮಾಡಿಕೊಂಡಿದ್ದರು. ಆ ಹಾಡಿನಲ್ಲಿ ಅಶ್ಲೀಲತೆ ಇದೆ ಎಂಬ ಕಾರಣಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ, ಆ ಹಾಡನ್ನು ಡಿಲೀಟ್ ಮಾಡಿಸಲಾಗಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಂದೆ ಹಾಜರಾದ ಬಾದ್​ಶಾ (Badshah) ಅವರು ಕ್ಷಮೆಯಾಚಿಸಿದ್ದಾರೆ. ಹಾಡಿನಲ್ಲಿರುವ ಅಶ್ಲೀಲತೆ ಮತ್ತು ಅಸಭ್ಯ ಸಾಹಿತ್ಯದ ಕುರಿತು ಆಯೋಗವು ನೀಡಿದ್ದ ಸಮನ್ಸ್‌ಗೆ ಪ್ರತಿಕ್ರಿಯೆಯಾಗಿ ಅವರು ಈ ಕ್ರಮ ಕೈಗೊಂಡಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾಗಿದ್ದ ‘ಟಟೀರಿ’ ಎಂಬ ಹರಿಯಾಣ್ವಿ ಹಾಡಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಮತ್ತು ಅಸಭ್ಯ ಸಾಹಿತ್ಯವಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ, ರಾಷ್ಟ್ರೀಯ ಮಹಿಳಾ ಆಯೋಗವು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಬಾದ್‌ಶಾ ಮತ್ತು ಹಾಡಿನ ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿತ್ತು.

ಆಯೋಗದ ಅಧ್ಯಕ್ಷೆ ವಿಜಯಾ ರಾಹತ್ಕರ್ ಅವರ ನೇತೃತ್ವದಲ್ಲಿ ನಡೆದ ವಿಚಾರಣೆಯಲ್ಲಿ ಬಾದ್‌ಶಾ ಅವರೊಂದಿಗೆ ನಿರ್ದೇಶಕರುಗಳಾದ ಜೋಬನ್ ಸಂಧು, ಮಹಾವೀರ್ ಸಿಂಗ್ ಮತ್ತು ನಿರ್ಮಾಪಕ ಹಿತೇನ್ ಹಾಜರಿದ್ದರು. ಹಾಡಿನ ಸಾಹಿತ್ಯ ಮತ್ತು ಡ್ಯಾನ್ಸ್ ಮಹಿಳೆಯರ ಘನತೆ, ಗೌರವಕ್ಕೆ ಧಕ್ಕೆ ತಂದಿದೆ ಎಂದು ಅಧ್ಯಕ್ಷೆ ರಾಹತ್ಕರ್ ಈ ವೇಳೆ ತೀವ್ರ ಕಳವಳ ವ್ಯಕ್ತಪಡಿಸಿದರು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಅವರು ತಂಡಕ್ಕೆ ಸೂಚಿಸಿದರು.

ತಮ್ಮ ತಪ್ಪಿನ ಅರಿವಾದ ಮೇಲೆ ಬಾದ್‌ಶಾ ಅವರು ಮಹಿಳಾ ಆಯೋಗದ ಮುಂದೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸಿದರು. ಕೇವಲ ಕ್ಷಮೆ ಕೇಳಿದ್ದು ಮಾತ್ರವಲ್ಲದೆ, ಸಮಾಜಕ್ಕೆ ಸಕಾರಾತ್ಮಕ ಸಂದೇಶ ನೀಡಲು ಕೆಲವು ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದ ವರ್ಗದ 50 ಹೆಣ್ಣುಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವ ಜವಾಬ್ದಾರಿಯನ್ನು ಬಾದ್‌ಶಾ ವಹಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: ‘ಕೆಡಿ’ ಹಾಡಿಗಿಂತಲೂ ಅಶ್ಲೀಲ ಸಾಹಿತ್ಯ: ‘ವಾಲ್ಯೂಮ್ 1’ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ

ಮುಂದಿನ ನಾಲ್ಕು ತಿಂಗಳೊಳಗೆ ಮಹಿಳಾ ಸಬಲೀಕರಣದ ಕುರಿತಾದ ವಿಶೇಷ ಮತ್ತು ಸಕಾರಾತ್ಮಕ ಹಾಡೊಂದನ್ನು ರಚಿಸಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ವಿವಾದಿತ ‘ಟಟೀರಿ’ ಹಾಡನ್ನು ಈಗಾಗಲೇ ಎಲ್ಲಾ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಮಹಿಳೆಯರ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುವುದಾಗಿ ಲಿಖಿತವಾಗಿ ಭರವಸೆ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!