AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಖಾನ್​ ಜೊತೆ ತೆರೆ ಹಂಚಿಕೊಂಡ ರಶ್ಮಿಕಾ ಮಂದಣ್ಣ; ಸಿಕ್ತು ಸೂಪರ್​ ಅವಕಾಶ

Rashmika Mandanna: ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅವರು ಅಲ್ಲಿನ ಸ್ಟಾರ್​ ಹೀರೋಗಳ ಜೊತೆ ತೆರೆ ಹಂಚಿಕೊಂಡಿದ್ದಾರೆ.

ಶಾರುಖ್​ ಖಾನ್​ ಜೊತೆ ತೆರೆ ಹಂಚಿಕೊಂಡ ರಶ್ಮಿಕಾ ಮಂದಣ್ಣ; ಸಿಕ್ತು ಸೂಪರ್​ ಅವಕಾಶ
ರಶ್ಮಿಕಾ ಮಂದಣ್ಣ, ಶಾರುಖ್​ ಖಾನ್​
ಮದನ್​ ಕುಮಾರ್​
|

Updated on:Aug 05, 2023 | 11:21 AM

Share

ನಟ ಶಾರುಖ್​ ಖಾನ್​ ಅವರು ‘ಜವಾನ್​’ (Jawan) ಸಿನಿಮಾದ ಬಿಡುಗಡೆಗೆ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಅವರು ಈಗ ಯಶಸ್ಸಿನ ಟ್ರ್ಯಾಕ್​ನಲ್ಲಿ ಇದ್ದಾರೆ. ‘ಪಠಾಣ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಅವರಿಗೆ ಇದ್ದ ಬೇಡಿಕೆ ಹೆಚ್ಚಾಗಿದೆ. ಅವರ ಜೊತೆ ಸಿನಿಮಾ ಮಾಡಬೇಕು ಎಂದು ಅನೇಕ ನಿರ್ಮಾಪಕರು ಕಾಯುತ್ತಿದ್ದಾರೆ. ಶಾರುಖ್​ ಖಾನ್​ (Shah Rukh Khan) ಜೊತೆ ತೆರೆ ಹಂಚಿಕೊಳ್ಳಬೇಕು ಎಂಬುದು ಬಹುತೇಕ ಎಲ್ಲ ನಟಿಯರ ಆಸೆ ಆಗಿರುತ್ತದೆ. ಈಗ ರಶ್ಮಿಕಾ ಮಂದಣ್ಣ ಅವರಿಗೆ ಅಂಥ ಅವಕಾಶ ಸಿಕ್ಕಿದೆ. ಆದರೆ ಇದು ಸಿನಿಮಾದಲ್ಲಿ ಅಲ್ಲ. ಬದಲಿಗೆ, ಜಾಹೀರಾತಿನಲ್ಲಿ ಶಾರುಖ್​ ಖಾನ್​ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ಸ್ಕ್ರೀನ್​ ಶೇರ್​ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇದು ರಶ್ಮಿಕಾ ಅಭಿಮಾನಿಗಳಿಗೆ ಖುಷಿ ನೀಡಿದೆ.

ಯಶ್​ ರಾಜ್​ ಸ್ಟುಡಿಯೋದಲ್ಲಿ ಈ ಜಾಹೀರಾತಿನ ಶೂಟಿಂಗ್​ ನಡೆದಿದೆ. ರಶ್ಮಿಕಾ ಮಂದಣ್ಣ ಮತ್ತು ಶಾರುಖ್​ ಖಾನ್​ ಅವರು ಜೊತೆಯಾಗಿ ಇದರಲ್ಲಿ ನಟಿಸಿದ್ದಾರೆ. ಶೀಘ್ರದಲ್ಲೇ ಈ ಜಾಹೀರಾತು ಬಿತ್ತರ ಆಗಲಿದೆ. ಈ ಹಿಂದೆ ರಶ್ಮಿಕಾ ಮಂದಣ್ಣ ಅವರು ವಿಕ್ಕಿ ಕೌಶಲ್​ ಜೊತೆ ಒಂದು ಜಾಹೀರಾತಿನಲ್ಲಿ ನಟಿಸಿದ್ದರು. ಅದರ ಕಾನ್ಸೆಪ್ಟ್​ ಆಕ್ಷೇಪಾರ್ಹವಾಗಿದೆ ಎಂದು ನೆಟ್ಟಿಗರು ತಕರಾರು ತೆಗೆದಿದ್ದರು. ಈಗ ಶಾರುಖ್​ ಜೊತೆ ರಶ್ಮಿಕಾ ನಟಿಸಿದ ಜಾಹೀರಾತು ಹೇಗಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: Jawan Prevue: ಅಮ್ಮ-ಮಗನ ಪಾತ್ರದಲ್ಲಿ ದೀಪಿಕಾ ಪಡುಕೋಣೆ-ಶಾರುಖ್​ ಖಾನ್​? ಭಾರಿ ಟ್ವಿಸ್ಟ್​ ನಿರೀಕ್ಷೆಯಲ್ಲಿ ಫ್ಯಾನ್ಸ್​

ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅವರು ಅಲ್ಲಿನ ಸ್ಟಾರ್​ ಹೀರೋಗಳ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಮಿತಾಭ್​ ಬಚ್ಚನ್​ ಜೊತೆ ‘ಗುಡ್​ ಬೈ’ ಚಿತ್ರದಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು. ‘ಮಿಷನ್​ ಮಜ್ನು’ ಚಿತ್ರದಲ್ಲಿ ಸಿದ್ದಾರ್ಥ್​ ಮಲ್ಹೋತ್ರಾಗೆ ಜೋಡಿಯಾಗಿದ್ದ ರಶ್ಮಿಕಾ ಅವರು, ‘ಅನಿಮಲ್​’ ಸಿನಿಮಾದಲ್ಲಿ ರಣಬೀರ್​ ಕಪೂರ್​ ಜೊತೆ ನಟಿಸಿದ್ದಾರೆ. ಆ ಸಿನಿಮಾ ಡಿಸೆಂಬರ್​ 1ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Jawan Movie Song: ಸಾವಿರ ಹುಡುಗಿಯರ ಜೊತೆ ಶಾರುಖ್​ ಖಾನ್​ ಡ್ಯಾನ್ಸ್​; 15 ಕೋಟಿ ರೂ. ಬಜೆಟ್​ನಲ್ಲಿ ‘ಜವಾನ್​’ ಸಾಂಗ್​

ಶಾರುಖ್​ ಖಾನ್​ ನಟನೆಯ ‘ಜವಾನ್​’ ಸಿನಿಮಾ ಸೆಪ್ಟೆಂಬರ್​ 7ರಂದು ಬಿಡುಗಡೆ ಆಗಲಿದೆ. ಆ ಸಿನಿಮಾ ಮೇಲೆ ಅಭಿಮಾನಿಗಳ ಸಖತ್​ ಭರವಸೆ ಇದೆ. ನಯನತಾರಾ, ವಿಜಯ್​ ಸೇತುಪತಿ, ದೀಪಿಕಾ ಪಡುಕೋಣೆ ಮುಂತಾದ ಘಟಾನುಘಟಿಗಳು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪ್ರಿವ್ಯೂ ವಿಡಿಯೋ ನೋಡಿ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ‘ಜವಾನ್​’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಮೂಲಕ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:15 am, Sat, 5 August 23

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಯತೀಂದ್ರ ಹಸ್ತಕ್ಷೇಪ ವಿಚಾರ ಸದನದಲ್ಲಿ ಚರ್ಚೆ: ಕೆಜೆ ಜಾರ್ಜ್ ಹೇಳಿದ್ದೇನು?
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
‘ಟಾಕ್ಸಿಕ್’ ವಿಷಯದಲ್ಲಿ ಯಶ್ ಬೆಂಬಲಕ್ಕೆ ನಿಂತ ಮಹಿಳಾ ನಿರ್ದೇಶಕಿ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
400 ಕೋಟಿ ದರೋಡೆ ಪ್ರಕರಣಕ್ಕೆ ಸಿಗುತ್ತಾ ಮತ್ತೊಂದು ಟ್ವಿಸ್ಟ್?
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಮೊದಲ ಎಸೆತಗಳಲ್ಲೇ ವಿಶ್ವ ದಾಖಲೆ ಬರೆದ ಮ್ಯಾಟ್ ಹೆನ್ರಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ