ಮತ್ತೊಂದು ಬಾಲಿವುಡ್ ಸಿನಿಮಾ ಪ್ರಾರಂಭಿಸಿದ ರಶ್ಮಿಕಾ ಮಂದಣ್ಣ, ಹೀರೋ ಯಾರು?

Rashmika Mandanna: ನಟಿ ರಶ್ಮಿಕಾ ಮಂದಣ್ಣ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟರೊಟ್ಟಿಗೆ ನಟಿಸಲಿದ್ದಾರೆ. ಈಗಾಗಲೇ ಅಮಿತಾಬ್ ಬಚ್ಚನ್, ರಣ್​ಬೀರ್ ಕಪೂರ್ ಜೊತೆ ನಟಿಸಿದ್ದಾರೆ ರಶ್ಮಿಕಾ.

ಮತ್ತೊಂದು ಬಾಲಿವುಡ್ ಸಿನಿಮಾ ಪ್ರಾರಂಭಿಸಿದ ರಶ್ಮಿಕಾ ಮಂದಣ್ಣ, ಹೀರೋ ಯಾರು?
ರಶ್ಮಿಕಾ ಮಂದಣ್ಣ
Follow us
ಮಂಜುನಾಥ ಸಿ.
|

Updated on: May 20, 2023 | 10:10 PM

ಕನ್ನಡದ ಕಿರಿಕ್ ಪಾರ್ಟಿ (Kirik Party) ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ರಶ್ಮಿಕಾ ಮಂದಣ್ಣ (Rashmika Mandanna) ಅತ್ಯಂತ ಕಡಿಮೆ ಅವಧಿಯಲ್ಲಿಯೇ ಎತ್ತರೆತ್ತರಕ್ಕೆ ಏರುತ್ತಿದ್ದಾರೆ. ಕಿರಿಕ್ ಪಾರ್ಟಿ ಬಳಿಕ ಬಹು ಬೇಗ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ರಶ್ಮಿಕಾ ಅಲ್ಲಿ ಬಹುಬೇಗನೆ ಜನಪ್ರಿಯತೆ ಗಳಿಸಿ ತಮಿಳಿಗೂ ಕಾಲಿಟ್ಟರು. ಬಳಿಕ ಬಾಲಿವುಡ್​ಗೂ (Bollywood) ಪದಾರ್ಪಣೆ ಮಾಡಿದ ರಶ್ಮಿಕಾ ಅಲ್ಲಿ ಅಮಿತಾಬ್ ಬಚ್ಚನ್ ಜೊತೆ ನಟಿಸಿದ್ದಲ್ಲದೆ ಇನ್ನೂ ಕೆಲವು ಸೂಪರ್ ಸ್ಟಾರ್​ಗಳೊಟ್ಟಿಗೆ ನಟಿಸುತ್ತಿದ್ದಾರೆ. ಈಗಾಗಲೇ ಎರಡು ಬಾಲಿವುಡ್ ಸಿನಿಮಾದಲ್ಲಿ ತೊಡಗಿಸಿಕೊಂಡಿರುವ ರಶ್ಮಿಕಾ, ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದು ಶೀಘ್ರವೇ ಚಿತ್ರೀಕರಣ ಆರಂಭಿಸಲಿದ್ದಾರೆ.

ಪ್ರಸ್ತುತ ರಣಬೀರ್ ಕಪೂರ್ ಜೊತೆಗೆ ಅನಿಮಲ್ ಸಿನಿಮಾದಲ್ಲಿ ನಟಿಸುತ್ತಿರುವ ರಶ್ಮಿಕಾ ಮಂದಣ್ಣ ಇದೀಗ ಶಾಹಿದ್ ಕಪೂರ್ ಜೊತೆ ಹೊಸ ಸಿನಿಮಾದಲ್ಲಿ ನಟಿಸಲು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಸಿನಿಮಾದ ಚಿತ್ರೀಕರಣ ಆಗಸ್ಟ್ 1 ರಿಂದ ಆರಂಭಗೊಳ್ಳಲಿದೆ. ಈ ನಡುವೆ ಟೈಗರ್ ಶ್ರಾಫ್​ ಜೊತೆಗೆ ಸಿನಿಮಾ ಒಂದರಲ್ಲಿ ರಶ್ಮಿಕಾ ನಟಿಸಲಿದ್ದಾರೆ.

ಶಾಹಿದ್ ಕಪೂರ್ ಹಾಗೂ ರಶ್ಮಿಕಾ ಜಂಟಿಯಾಗಿ ನಟಿಸುತ್ತಿರುವ ಈ ಸಿನಿಮಾ ಕಾಮಿಡಿ ಸಿನಿಮಾ ಆಗಿದ್ದು, ಸಿನಿಮಾವನ್ನು ಅನೀಸ್ ಬಾಜ್ಮಿ ನಿರ್ದೇಶನ ಮಾಡುತ್ತಿದ್ದಾರೆ. ಆಗಸ್ಟ್​ನಲ್ಲಿ ಪ್ರಾರಂಭವಾಗುವ ಚಿತ್ರೀಕರಣ ಡಿಸೆಂಬರ್ ವರೆಗೂ ನಡೆಯಲಿದೆಯಂತೆ. ಸಿನಿಮಾದಲ್ಲಿ ಕಾಮಿಡಿ ಜೊತೆಗೆ ಆಕ್ಷನ್ ಸಹ ಇರಲಿದೆ. ಅನೀಸ್ ಬಾಜ್ಮಿ ಈ ಹಿಂದೆ, ಹಲ್​ಚಲ್, ನೋ ಎಂಟ್ರಿ, ವೆಲ್​ಕಮ್ ಅಂಥಹಾ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ಈ ಸಿನಿಮಾದಲ್ಲಿ ಶಾಹಿದ್ ಕಪೂರ್ ಅವರದ್ದು ಎರಡು ಶೇಡ್​ಗಳಿರುವ ಪಾತ್ರವಂತೆ. ರಶ್ಮಿಕಾ ಸಹ ಬಹಳ ಭಿನ್ನ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದಲ್ಲಿ ಶಾಹಿದ್ ಹಾಗೂ ರಶ್ಮಿಕಾ ಸೇರಿದಂತೆ ಇನ್ನೂ ಹಲವು ಪ್ರತಿಭಾವಂತ ನಟರಿರಲಿದ್ದಾರೆ. ರಶ್ಮಿಕಾ ಪ್ರಸ್ತುತ ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದು ಆ ಸಿನಿಮಾಗಳು ಮುಗಿದ ಬಳಿಕ ಹೊಸ ಸಿನಿಮಾ ಪ್ರಾರಂಭವಾಗಲಿದೆ.

ರಶ್ಮಿಕಾ ಮಂದಣ್ಣ ನಟಿಸಿರುವ ತೆಲುಗಿನ ಪುಷ್ಪ 2 ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಹಿಂದಿಯಲ್ಲಿ ರಣ್​ಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾದಲ್ಲಿ ನಟಿಸಿದ್ದು ಆ ಸಿನಿಮಾ ಸಹ ಬಿಡುಗಡೆಗೆ ರೆಡಿಯಾಗಿದೆ. ಟೈಗರ್ ಶ್ರಾಫ್ ಜೊತೆಗಿನ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಜೊತೆಗೆ ತೆಲುಗಿನಲ್ಲಿ ಎರಡು ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇನ್ನು ಶಾಹಿದ್ ಕಪೂರ್ ಸಹ ಬಹಳ ಬ್ಯುಸಿಯಾಗಿದ್ದಾರೆ. ಶಾಹಿದ್ ನಟಿಸಿರುವ ಫರ್ಜಿ ಕೆಲ ತಿಂಗಳ ಹಿಂದಷ್ಟೆ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ. ಇದೀಗ ಬ್ಲಡಿ ಡ್ಯಾಡಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ