AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಐಷಾರಾಮಿ ಬಂಗಲೆ ಹೊಂದಿದ್ದಾರೆ ದಕ್ಷಿಣದ ಈ ಸೆಲೆಬ್ರಿಟಿಗಳು

ದಕ್ಷಿಣ ಭಾರತದ ಹಲವು ಸೆಲೆಬ್ರಿಟಿಗಳು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಾಲಿನಲ್ಲಿ ರಶ್ಮಿಕಾ ಮಂದಣ್ಣ, ಜೂನಿಯರ್​ ಎನ್​ಟಿಆರ್, ಪ್ರಭಾಸ್ ಸೇರಿ ಅನೇಕ ಸ್ಟಾರ್​ಗಳಿದ್ದಾರೆ. ಕೆಲವು ದಕ್ಷಿಣದ ಸ್ಟಾರ್​ಗಳು ಮುಂಬೈನಲ್ಲಿ ಮನೆ ಖರೀದಿಸಿದ್ದಾರೆ. ಮುಂಬೈ ತೆರಳಿದಾಗ ಉಳಿದಿಕೊಳ್ಳೋಕೆ ಈ ಮನೆಯನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಮುಂಬೈನಲ್ಲಿ ಐಷಾರಾಮಿ ಬಂಗಲೆ ಹೊಂದಿದ್ದಾರೆ ದಕ್ಷಿಣದ ಈ ಸೆಲೆಬ್ರಿಟಿಗಳು
ಮುಂಬೈನಲ್ಲಿ ಐಷಾರಾಮಿ ಬಂಗಲೆ ಹೊಂದಿದ್ದಾರೆ ದಕ್ಷಿಣದ ಈ ಸೆಲೆಬ್ರಿಟಿಗಳು
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 10, 2024 | 9:35 AM

Share

ದಕ್ಷಿಣ ಭಾರತದ ಅನೇಕ ಸೆಲೆಬ್ರಿಟಿಗಳು ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಾಲಿನಲ್ಲಿ ರಶ್ಮಿಕಾ ಮಂದಣ್ಣ, ಜೂನಿಯರ್​ ಎನ್​ಟಿಆರ್, ಪ್ರಭಾಸ್ (Prabhas) ಸೇರಿ ಅನೇಕ ಸ್ಟಾರ್​ಗಳಿದ್ದಾರೆ. ಕನ್ನಡದ ನಟ ಯಶ್ ಕೂಡ ಬಾಲಿವುಡ್ ಕದ ತಟ್ಟಲಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಕೆಲವು ದಕ್ಷಿಣದ ಸ್ಟಾರ್​ಗಳು ಮುಂಬೈನಲ್ಲಿ ಮನೆ ಖರೀದಿಸಿದ್ದಾರೆ. ಕೆಲವರು ಹೂಡಿಕೆ ಎಂದು ಇದನ್ನು ಖರೀದಿ ಮಾಡಿದರೆ ಇನ್ನೂ ಕೆಲವರು ಮುಂಬೈ ತೆರಳಿದಾಗ ಉಳಿದಿಕೊಳ್ಳೋಕೆ ಈ ಮನೆಯನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಅಲ್ಲು ಅರ್ಜುನ್

ನಟ ಅಲ್ಲು ಅರ್ಜುನ್ ಅವರು ‘ಪುಷ್ಪ’ ಚಿತ್ರದಿಂದ ಬಾಲಿವುಡ್​ನಲ್ಲಿ ಗುರುತಿಸಿಕೊಂಡರು. ಅವರ ನಟನೆಯ ‘ಪುಷ್ಪ 2’ ಚಿತ್ರ ಹಿಂದಿಯಲ್ಲೂ ಬಿಡುಗಡೆ ಆಗುತ್ತಿದೆ. ಅವರು ಮುಂಬೈನಲ್ಲಿ ಮನೆ ಖರೀದಿಸಿದ್ದಾರೆ. ಮುಂಬೈಗೆ ತೆರಳಿದಾಗ ಇದೇ ಮನೆಯಲ್ಲಿ ಉಳಿದುಕೊಳ್ಳುತ್ತಾರೆ.

ಸೂರ್ಯ

ನಟ ಸೂರ್ಯ ಹಾಗೂ ಅವರ ಪತ್ನಿ ಜ್ಯೋತಿಕಾ ಮುಂಬೈನಲ್ಲಿ ಅಪಾರ್ಟ್​ಮೆಂಟ್ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿರೋದು ಅವರ ಮಕ್ಕಳು. ಇವರ ಮಕ್ಕಳು ಮುಂಬೈನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಅವರಿಗೆ ಉಳಿದುಕೊಳ್ಳೋಕೆ ಈ ಮನೆಯನ್ನು ಖರೀದಿ ಮಾಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ನಟಿ ಜ್ಯೋತಿಕಾ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ಅವರು ಕೂಡ ಇಲ್ಲಿಯೇ ವಾಸವಾಗಿದ್ದಾರೆ.

ರಾಮ್ ಚರಣ್

ನಟ ರಾಮ್ ಚರಣ್ ಅವರು ಮುಂಬೈನಲ್ಲಿ ಲಕ್ಷುರಿ ಮನೆ ಹೊಂದಿದ್ದಾರೆ. ಈ ಮನೆಯ ಫೋಟೋಗಳು ವೈರಲ್ ಆಗಿತ್ತು. ರಿಯಲ್ ಎಸ್ಟೇಟ್​ ಮೇಲೆ ಹೂಡಿಕೆ ಮಾಡಬೇಕು ಎನ್ನುವ ಕಾರಣಕ್ಕೆ ಅವರು ಈ ಮನೆ ಖರೀದಿ ಮಾಡಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ಅವರು ಬಾಲಿವುಡ್​ಗೆ ಕಾಲಿಡೋ ಆಲೋಚನೆಯಲ್ಲೂ ಇದ್ದಾರೆ.

ತಮನ್ನಾ ಭಾಟಿಯಾ

ನಟಿ ತಮನ್ನಾ ಭಾಟಿಯಾ ದಕ್ಷಿಣ ಭಾರತ ಹಾಗೂ ಬಾಲಿವುಡ್ ಎರಡರಲ್ಲೂ ಬ್ಯುಸಿ ಇದ್ದಾರೆ. ಅವರು ವಿಜಯ್ ವರ್ಮಾ ಜೊತೆ ಡೇಟಿಂಗ್ ಮಾಡುತ್ತಿದ್ದು ಶೀಘ್ರವೇ ಮದುವೆ ಆಗೋ ಸಾಧ್ಯತೆ ಇದೆ. ಅವರು ಮುಂಬೈನಲ್ಲಿ ಲಕ್ಷುರಿ ಮನೆ ಹೊಂದಿದ್ದಾರೆ. ಮನೆಯಲ್ಲಿರುವ ಸಂದರ್ಭದ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ.

ಪೂಜಾ ಹೆಗ್ಡೆ

ನಟಿ ಪೂಜಾ ಹೆಗ್ಡೆ ಅವರಿಗೆ ಹಿಂದಿ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ಹಲವು ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಮುಂಬೈನಲ್ಲಿ ಮನೆ ಹೊಂದಿದ್ದಾರೆ. ಸಿನಿಮಾ ಕೆಲಸಕ್ಕಾಗಿ ಮುಂಬೈ ತೆರಳಿದಾಗ ಇಲ್ಲಿಯೇ ಉಳಿದುಕೊಳ್ಳುತ್ತಾರೆ.

ಇದನ್ನೂ ಓದಿ: ರಾಮ್ ಗೋಪಾಲ್ ವರ್ಮಾ ಜೊತೆ ರಶ್ಮಿಕಾ ಮಂದಣ್ಣ? ಗಮನವಿಟ್ಟು ನೋಡಿ

ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರು ದಕ್ಷಿಣ ಭಾರತದ ಜೊತೆಗೆ ಹಿಂದಿಯಲ್ಲೂ ಬ್ಯುಸಿ ಇದ್ದಾರೆ. ಅವರು ಅಲ್ಲಿ ಒಂದು ಮನೆ ಕೊಂಡುಕೊಂಡಿದ್ದಾರೆ. ಕೇವಲ ಮುಂಬೈ ಮಾತ್ರವಲ್ಲದೆ ಬೆಂಗಳೂರು ಹಾಗೂ ಹೈದರಾಬಾದ್​ನಲ್ಲೂ ಅವರ ನಿವಾಸ ಇದೆ.

ಕಾಜಲ್ ಅಗರ್​ವಾಲ್

ನಟಿ ಕಾಜಲ್ ಅಗರ್​ವಾಲ್ ಅವರು ಸದ್ಯ ಮಗನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಮದುವೆ ಬಳಿಕ ಅವರು ಮುಂಬೈನಲ್ಲಿ ಸೆಟಲ್ ಆಗಿದ್ದಾರೆ. ಅವರು ಮುಂಬೈನಲ್ಲಿ ಸುಂದರ ಮನೆ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್