Animal Twitter Review: ಹೇಗಿದೆ ರಶ್ಮಿಕಾ-ರಣಬೀರ್​ ನಟನೆಯ ‘ಅನಿಮಲ್​’ ಸಿನಿಮಾ? ಇಲ್ಲಿದೆ ಟ್ವಿಟರ್​ ವಿಮರ್ಶೆ

ಬಹುನಿರೀಕ್ಷಿತ ‘ಅನಿಮಲ್​’ ಸಿನಿಮಾಗೆ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ. ವಿಶ್ವಾದ್ಯಂತ ರಿಲೀಸ್​ ಆಗಿರುವ ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರು ಎರಡು ಡಿಫರೆಂಟ್​ ಶೇಡ್​ ಇರುವ ಪಾತ್ರವನ್ನು ನಿಭಾಯಿಸಿದ್ದಾರೆ. ಮೊದಲ ದಿನ ಮೊದಲ ಶೋ ನೋಡಿದ ಪ್ರೇಕ್ಷಕರು ಟ್ವಿಟರ್​​ನಲ್ಲಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ.

Animal Twitter Review: ಹೇಗಿದೆ ರಶ್ಮಿಕಾ-ರಣಬೀರ್​ ನಟನೆಯ ‘ಅನಿಮಲ್​’ ಸಿನಿಮಾ? ಇಲ್ಲಿದೆ ಟ್ವಿಟರ್​ ವಿಮರ್ಶೆ
ರಣಬೀರ್ ಕಪೂರ್​

Updated on: Dec 01, 2023 | 11:17 AM

ಸಂದೀಪ್​ ರೆಡ್ಡಿ ವಂಗಾ ಅವರು ನಿರ್ದೇಶನ ಮಾಡಿರುವ ‘ಅನಿಮಲ್​’ ಸಿನಿಮಾ (Animal Movie) ಇಂದು (ಡಿ.1) ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಬಾಬಿ ಡಿಯೋಲ್​, ಅನಿಲ್​ ಕಪೂರ್​ ಮುಂತಾದವರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಸಿನಿಮಾವನ್ನು ಫಸ್ಟ್​ ಡೇ ಫಸ್ಟ್​ ಶೋ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಸಿನಿಮಾ ಹೇಗಿದೆ ಎಂದು ಸೋಶಿಯಲ್​ ಮೀಡಿಯಾ ಮೂಲಕ ಅಭಿಪ್ರಾಯ ತಿಳಿಸುತ್ತಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಅನಿಮಲ್​’ ರಿಲೀಸ್​ ಆಗಿದೆ. ಈ ಸಿನಿಮಾದ ಟ್ವಿಟರ್​ ವಿಮರ್ಶೆ (Animal Movie Twitter Review) ಇಲ್ಲಿದೆ..

‘ಅನಿಮಲ್​’ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ದೃಶ್ಯಗಳು ಇವೆ. ಮಾಸ್​ ಪ್ರೇಕ್ಷಕರಿಗೆ ಇದು ಇಷ್ಟ ಆಗಿದೆ. ರಣಬೀರ್​ ಕಪೂರ್​ ಅವರು ಎರಡು ಶೇಡ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಆ್ಯಕ್ಷನ್​ ಅವತಾರದಲ್ಲಿ ಅವರ ಅಭಿನಯಕ್ಕೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕೆಲವು ನೆಟ್ಟಿಗರು ಈ ಸಿನಿಮಾಗೆ 5ಕ್ಕೆ 5 ಸ್ಟಾರ್​ ನೀಡಿದ್ದಾರೆ. ಈ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಲಿದೆ ಎಂದು ಅನೇಕರು ಗ್ಯಾರಂಟಿ ನೀಡುತ್ತಿದ್ದಾರೆ.

ವಿಶೇಷ ಏನೆಂದರೆ, ‘ಅನಿಮಲ್​’ ಸಿನಿಮಾದ ಅವಧಿ ಬರೋಬ್ಬರಿ 3 ಗಂಟೆ 21 ನಿಮಿಷ. ಸಾಮಾನ್ಯವಾಗಿ ಇಷ್ಟು ದೀರ್ಘವಾದ ಸಿನಿಮಾಗಳನ್ನು ನೋಡಲು ತಾಳ್ಮೆ ಬೇಕು. ಹಾಗಿದ್ದರೂ ಕೂಡ ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಸಿನಿಮಾದ ಅವಧಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿಲ್ಲ. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಂತರದ ಶೋಗಳಲ್ಲಿ ಪ್ರೇಕ್ಷಕರಿಂದ ಯಾವ ರೀತಿಯ ಅಭಿಪ್ರಾಯ ಬರಬಹುದು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಬಹುತೇಕ ಎಲ್ಲ ರಾಜ್ಯಗಳಲ್ಲಿ ‘ಅನಿಮಲ್​’ ಸಿನಿಮಾ ಉತ್ತಮ ಓಪನಿಂಗ್ ಪಡೆದುಕೊಂಡಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಎಲ್ಲ ಕಡೆಗಳಲ್ಲೂ ರಣಬೀರ್​ ಕಪೂರ್​ ಅವರಿಗೆ ಅಭಿಮಾನಿಗಳು ಇದ್ದಾರೆ. ಅದೇ ರೀತಿ ರಶ್ಮಿಕಾ ಮಂದಣ್ಣ ಕೂಡ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದಾರೆ. ಈ ಸಿನಿಮಾದಿಂದ ಅವರ ಚಾರ್ಮ್​ ಹೆಚ್ಚಾಗಿದೆ. ಈ ಸಿನಿಮಾ ತುಂಬಾ ರಗಡ್​ ಆಗಿ ಮೂಡಿಬಂದಿದೆ. ರಣಬೀರ್​ ಕಪೂರ್​ ಅವರ ವೃತ್ತಿ ಜೀವನದಲ್ಲಿ ಇದು ಡಿಫರೆಂಟ್​ ಸಿನಿಮಾ ಎಂದು ಫ್ಯಾನ್ಸ್​ ಹೇಳುತ್ತಿದ್ದಾರೆ.

ಇದನ್ನೂ ಓದಿ: Ranbir Kapoor: ‘ರಣಬೀರ್​ ಕಪೂರ್​ ಅವರೇ ಭಾರತದ ಬೆಸ್ಟ್​ ನಟ’: ‘ಅನಿಮಲ್​’ ಹೀರೋಗೆ ಮಹೇಶ್​ ಬಾಬು ಮೆಚ್ಚುಗೆ

‘ಅನಿಮಲ್​’ ಸಿನಿಮಾ ಮೊದಲ ದಿನ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಆಗಿದೆ. ಈ ಚಿತ್ರಕ್ಕೆ ಫಸ್ಟ್​ ಡೇ ಭರ್ಜರಿ ಕಲೆಕ್ಷನ್​ ಆಗಲಿದೆ ಎಂದು ಬಾಕ್ಸ್​ ಆಫೀಸ್​ ವ್ಯವಹಾರ ಬಲ್ಲವರು ಊಹಿಸಿದ್ದಾರೆ. ವಿಶ್ವಾದ್ಯಂತ 100 ಕೋಟಿ ರೂಪಾಯಿ ಕಲೆಕ್ಷನ್​ ಆಗಬಹುದು ಎಂದು ಅಂದಾಜಿಸಲಾಗಿದೆ. ಚಿತ್ರದ ಮೇಕಿಂಗ್​ ಸಖತ್​ ಅದ್ದೂರಿಯಾಗಿದೆ ಎಂದು ಪ್ರೇಕ್ಷಕರು ಹೊಗಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us