AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠಿ ಭಾಷೆ ಕಲಿತ ನಟಿ ರಶ್ಮಿಕಾ ಮಂದಣ್ಣ; ಕಾರಣ ಏನು ಗೊತ್ತಾ?

ಕೊಡಗಿನ ಸುಂದರಿ ರಶ್ಮಿಕಾ ಮಂದಣ್ಣ ಅವರು ಭಾಷೆಗಳ ಗಡಿ ಮೀರಿ ಬೆಳೆಯುತ್ತಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಪಾತ್ರಕ್ಕೆ ತಕ್ಕಂತೆ ಭಾಷೆಗಳನ್ನು ಅವರು ಕಲಿಯುತ್ತಿದ್ದಾರೆ. ಮರಾಠಿ ಭಾಷೆ ಕಲಿಯಲು ರಶ್ಮಿಕಾ ಮಂದಣ್ಣ ಅವರು 4 ವಾರಗಳ ತರಬೇತಿ ಪಡೆದಿದ್ದಾರೆ ಎನ್ನಲಾಗಿದೆ. ಅವರ ಜೊತೆ ವಿಕ್ಕಿ ಕೌಶಲ್​ ಅವರು ಕೂಡ ಮರಾಠಿ ಕಲಿಕೆಯಲ್ಲಿ ನಿರತರಾಗಿದ್ದಾರೆ.

ಮರಾಠಿ ಭಾಷೆ ಕಲಿತ ನಟಿ ರಶ್ಮಿಕಾ ಮಂದಣ್ಣ; ಕಾರಣ ಏನು ಗೊತ್ತಾ?
ರಶ್ಮಿಕಾ ಮಂದಣ್ಣ
ಮದನ್​ ಕುಮಾರ್​
|

Updated on: Aug 06, 2024 | 7:40 PM

Share

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಫೇಮಸ್​ ಆಗಿರುವ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಹತ್ತಾರು ಅವಕಾಶಗಳು ಸಿಗುತ್ತಿವೆ. ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ಬಾಲಿವುಡ್​ನಲ್ಲಿ ರಶ್ಮಿಕಾ ಅವರು ಸಖತ್​ ಶೈನ್​ ಆಗುತ್ತಿದ್ದಾರೆ. ಈಗ ಅವರು ವಿಕ್ಕಿ ಕೌಶಲ್​ ಜೊತೆ ‘ಚವ್ವ’ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಸಲುವಾಗಿ ಮರಾಠಿ ಕಲಿತಿದ್ದಾರೆ ಎಂದು ಸುದ್ದಿಯಾಗಿದೆ. ಇದು ಹಿಂದಿ ಸಿನಿಮಾ. ಹಾಗಿದ್ದರೂ ಕೂಡ ಪಾತ್ರಕ್ಕಾಗಿ ಮರಾಠಿ ಕಲಿಯುವುದು ಅಗತ್ಯವಾಗಿದೆ.

ಛತ್ರಪತಿ ಸಂಭಾಜಿ ಮಹಾರಾಜ್​ ಅವರ ಜೀವನದ ಕಥೆಯನ್ನು ಆಧರಿಸಿ ‘ಚವ್ವ’ ಸಿನಿಮಾ ಮೂಡಿಬರುತ್ತಿದೆ. ಶಿವಾಜಿಯ ಪುತ್ರನಾದ ಸಂಭಾಜಿ ಓರ್ವ ಮರಾಠಿ ವೀರ. ಸಂಭಾಜಿ ಪತ್ನಿ ಎಸುಬಾಯಿ ಪಾತ್ರವನ್ನು ರಶ್ಮಿಕಾ ಮಂದಣ್ಣ ಅವರು ನಿಭಾಯಿಸಲಿದ್ದಾರೆ. ಈ ಚಿತ್ರದ ಹಲವು ಸಂಭಾಷಣೆಗಳು ಮರಾಠಿ ಭಾಷೆಯಲ್ಲಿ ಇರಲಿವೆ. ಹಾಗಾಗಿ ಕಲಾವಿದರು ಮರಾಠಿ ಕಲಿಯುತ್ತಿದ್ದಾರೆ.

‘ಚವ್ವ’ ಸಿನಿಮಾದಲ್ಲಿನ ಪಾತ್ರಕ್ಕೆ ಸ್ವತಃ ರಶ್ಮಿಕಾ ಮಂದಣ್ಣ ಅವರು ಧ್ವನಿ ನೀಡಲಿದ್ದಾರೆ. ಹಾಗಾಗಿ ಅವರು ಮರಾಠಿ ಭಾಷೆಯ ಸಂಭಾಷಣೆಗಳನ್ನು ಸರಿಯಾಗಿ ಉಚ್ಛರಿಸಬೇಕು. ಆದ್ದರಿಂದ 4 ವಾರಗಳ ಕಾಲ ಅವರು ವಿಶೇಷ ತರಬೇತಿ ಪಡೆದುಕೊಂಡು ಮರಾಠಿ ಕಲಿತಿದ್ದಾರೆ ಎಂದು ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ. ಈ ಸಿನಿಮಾಗೆ ಲಕ್ಷ್ಮಣ್​ ಉಟೇಕರ್​ ನಿರ್ದೇಶನ ಮಾಡಲಿದ್ದಾರೆ.

ಇದನ್ನೂ ಓದಿ: ವಯನಾಡ್​ ಭೂಕುಸಿತ: 10 ಲಕ್ಷ ರೂಪಾಯಿ ದೇಣಿಗೆ ನೀಡಿದ ರಶ್ಮಿಕಾ ಮಂದಣ್ಣ

ಸೌತ್​ ಸಿನಿಮಾ ಇಂಡಸ್ಟ್ರಿಯಲ್ಲಿ ಸೂಪರ್​ ಸ್ಟಾರ್​ ಆದ ರಶ್ಮಿಕಾ ಮಂದಣ್ಣ ಅವರನ್ನು ಬಾಲಿವುಡ್​ ಕೂಡ ಕೈ ಬೀಸಿ ಕರೆಯಿತು. ‘ಅನಿಮಲ್​’ ಸಿನಿಮಾದಿಂದ ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿತು. ಹಾಗಾಗಿ ಹಿಂದಿ ಸಿನಿಮಾ ಮಂದಿಗೆ ರಶ್ಮಿಕಾ ಫೇವರಿಟ್​ ಆಗಿದ್ದಾರೆ. ‘ಚವ್ವ’ ಚಿತ್ರದಲ್ಲಿ ವಿಕ್ಕಿ ಕೌಶಲ್​ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಲಿದ್ದಾರೆ.

ಇತ್ತೀಚೆಗೆ ‘ಬ್ಯಾಡ್​ ನ್ಯೂಸ್​’ ಸಿನಿಮಾದ ‘ತೋಬಾ ತೋಬಾ..’ ಹಾಡಿನಿಂದ ವಿಕ್ಕಿ ಕೌಶಲ್​ ಸೆನ್ಸೇಷನ್​ ಸೃಷ್ಟಿಸಿದ್ದಾರೆ. ದಿನದಿಂದ ದಿನಕ್ಕೆ ಅವರ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ ಮೊದಲು ಒಂದು ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಕ್ಕಿ ಕೌಶಲ್​ ಅವರು ತೆರೆ ಹಂಚಿಕೊಂಡಿದ್ದರು. ಆ ಜಾಹೀರಾತು ವಿವಾದ ಸೃಷ್ಟಿ ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!