AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ರೊಮ್ಯಾಂಟಿಕ್​ ಹಾಡುಗಳಲ್ಲಿ ದಕ್ಷಿಣಕ್ಕಿಂತ ಬಾಲಿವುಡ್​ ಬೆಸ್ಟ್​’ ಎಂದ ರಶ್ಮಿಕಾ; ಟ್ರೋಲ್ ಶುರು

Bollywood Vs South Film Industry: ಹಿಂದಿ ಮಂದಿಯನ್ನು ಓಲೈಸುವ ಭರದಲ್ಲಿ ಇಡೀ ದಕ್ಷಿಣ ಭಾರತದ ಚಿತ್ರರಂಗವನ್ನು ರಶ್ಮಿಕಾ ಮಂದಣ್ಣ ಜರಿದಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ.

Rashmika Mandanna: ‘ರೊಮ್ಯಾಂಟಿಕ್​ ಹಾಡುಗಳಲ್ಲಿ ದಕ್ಷಿಣಕ್ಕಿಂತ ಬಾಲಿವುಡ್​ ಬೆಸ್ಟ್​’ ಎಂದ ರಶ್ಮಿಕಾ; ಟ್ರೋಲ್ ಶುರು
ರಶ್ಮಿಕಾ ಮಂದಣ್ಣ
TV9 Web
| Edited By: |

Updated on:Dec 28, 2022 | 9:09 PM

Share

ಕನ್ನಡದ ಪ್ರೇಕ್ಷಕರಿಗೆ ರಶ್ಮಿಕಾ ಮಂದಣ್ಣ (Rashmika Mandanna) ಅವರನ್ನು ಕಂಡರೆ ಅಷ್ಟಕ್ಕಷ್ಟೇ ಎಂಬುದಕ್ಕೆ ಸೋಶಿಯಲ್​ ಮೀಡಿಯಾ ಕಮೆಂಟ್​ಗಳೇ ಸಾಕ್ಷಿ. ಅದರ ಜೊತೆಯಲ್ಲಿ ಈಗ ಅವರು ಇಡೀ ದಕ್ಷಿಣ ಭಾರತದ ಚಿತ್ರರಂಗವನ್ನು ಕೆಣಕುವಂತಹ ಹೇಳಿಕೆ ನೀಡಿದ್ದಾರೆ. ಬಾಲಿವುಡ್​ (Bollywood) ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆಯುತ್ತಿರುವ ರಶ್ಮಿಕಾ ಮಂದಣ್ಣ ಅವರು ಹಿಂದಿ ಮಂದಿಯನ್ನು ಓಲೈಸುವ ಭರದಲ್ಲಿ ಇಡೀ ದಕ್ಷಿಣ ಭಾರತದ ಚಿತ್ರರಂಗವನ್ನು (South Film Industry) ಜರಿದಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ‘ರೊಮ್ಯಾಂಟಿಕ್​ ಸಾಂಗ್ಸ್​ ವಿಚಾರದಲ್ಲಿ ಹಿಂದಿ ಚಿತ್ರರಂಗವೇ ಬೆಸ್ಟ್​’ ಎಂದು ರಶ್ಮಿಕಾ ಹೇಳಿದ್ದಾರೆ. ಇದನ್ನು ಇಟ್ಟುಕೊಂಡು ಅವರನ್ನು ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್​ ಮಾಡಲು ಆರಂಭಿಸಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನಲ್ಲಿ ನಟಿಸಿದ ಮೊದಲ ಸಿನಿಮಾ ‘ಮಿಷನ್​ ಮಜ್ನು’. ಆದರೆ ಕಾರಣಾಂತರಗಳಿಂದ ಅದರ ಬಿಡುಗಡೆ ತಡವಾಯಿತು. ಅದಕ್ಕೂ ಮುನ್ನ ‘ಗುಡ್​ ಬೈ’ ರಿಲೀಸ್​ ಆಯಿತು. ಈಗ ‘ಮಿಷನ್​ ಮಜ್ನು’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. 2023ರ ಜನವರಿ 20ರಂದು ಈ ಚಿತ್ರ ನೇರವಾಗಿ ನೆಟ್​ಫ್ಲಿಕ್ಸ್​ನಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಅದರ ಪ್ರಮೋಷನ್​ ಸಲುವಾಗಿ ಮೊದಲ ಸಾಂಗ್​ ರಿಲೀಸ್​ ಮಾಡಲಾಗಿದೆ.

‘ಮಿಷನ್​ ಮಜ್ನು’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ರೊಮ್ಯಾಂಟಿಕ್​ ಸಾಂಗ್​ಗಳ ಬಗ್ಗೆ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ‘ದಕ್ಷಿಣ ಭಾರತದಲ್ಲಿ ಮಾಸ್​ ಮಸಾಲಾ, ಐಟಂ ಸಾಂಗ್​ಗಳು ಇರುತ್ತವೆ. ಆದರೆ ರೊಮ್ಯಾಂಟಿಕ್​ ಸಾಂಗ್​ ವಿಚಾರದಲ್ಲಿ ಬಾಲಿವುಡ್​ ಬೆಸ್ಟ್​. ಬಾಲಿವುಡ್​ನಲ್ಲಿ ನನ್ನ ಮೊದಲ ರೊಮ್ಯಾಂಟಿಕ್​ ಹಾಡು ಬರುತ್ತಿದೆ. ನೀವೆಲ್ಲ ಕೇಳಬೇಕು ಅಂತ ನಾನು ಸಖತ್​ ಎಗ್ಸೈಟ್​ ಆಗಿದೇನೆ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ ಖಾತೆ ಹ್ಯಾಕ್​ ಆಯ್ತಾ? ಉಲ್ಟಾ ಅಕ್ಷರದ ಅಸಲಿ ವಿಷಯ ಇಲ್ಲಿದೆ..

ಕನ್ನಡದಲ್ಲಿಯೇ ಬೇಕಾದಷ್ಟು ರೊಮ್ಯಾಂಟಿಕ್​ ಹಾಡುಗಳಿವೆ. ದಕ್ಷಿಣ ಭಾರತದಲ್ಲಿ ಇಳೆಯರಾಜ, ಹಂಸಲೇಖ, ರಾಜನ್​-ನಾಗೇಂದ್ರ ಅವರಂತಹ ಮಹಾನ್​ ಸಂಗೀತ ನಿರ್ದೇಶಕರು ಎಲ್ಲ ಕಾಲಕ್ಕೂ ಸಲ್ಲುವಂತಹ ರೊಮ್ಯಾಂಟಿಕ್​ ಹಾಡುಗಳನ್ನು ನೀಡಿದ್ದಾರೆ. ಹಾಗಿದ್ದರೂ ಕೂಡ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ ಮಂದಿಯೇ ಬೆಸ್ಟ್​ ಎಂದು ಹೇಳಿರುವುದು ಸೌತ್​ ಸಿನಿಮಾಪ್ರೇಮಿಗಳ ಕೋಪಕ್ಕೆ ಕಾರಣ ಆಗಿದೆ.

ಇದನ್ನೂ ಓದಿ:Varisu: ಪ್ರಪಂಚದಲ್ಲೇ 2ನೇ ಸ್ಥಾನ ಪಡೆದ ರಶ್ಮಿಕಾ ಮಂದಣ್ಣ ಹೊಸ ಸಾಂಗ್​ ‘ರಂಜಿದಮೆ..’

ಬಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ‘ಗುಡ್​ ಬೈ’ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲಿಲ್ಲ. ಈಗ ‘ಮಿಷನ್​ ಮಜ್ನು’ ಕೂಡ ಕಾನ್ಫಿಡೆನ್ಸ್​ ಇಲ್ಲದೇ ಒಟಿಟಿ ದಾರಿ ಹಿಡಿದಿದೆ. ಈ ಸಿನಿಮಾ ಸದ್ದು ಮಾಡಿದರೆ ಮಾತ್ರ ಅವರಿಗೆ ಹಿಂದಿಯಲ್ಲಿ ಹೆಚ್ಚಿನ ಅವಕಾಶಗಳು ಬರಲಿವೆ. ಇಲ್ಲವಾದರೆ ಅವರ ಬಾಲಿವುಡ್​ ಪಯಣ ಕಷ್ಟವಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:09 pm, Wed, 28 December 22

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ