Rashmika Mandanna: ಅಮಿತಾಭ್ ಬಚ್ಚನ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದಕ್ಕೆ ರಶ್ಮಿಕಾ ಮಂದಣ್ಣ ಹೇಳಿದ್ದೇನು?

Amitabh Bachchan: ಬಾಲಿವುಡ್​ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರೊಂದಿಗೆ ‘ಗುಡ್ ಬೈ’ ಚಿತ್ರದಲ್ಲಿ ಬಣ್ಣ ಹಚ್ಚುತ್ತಿರುವ ರಶ್ಮಿಕಾ ಮಂದಣ್ಣ, ಸೆಟ್​ನಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.

Rashmika Mandanna: ಅಮಿತಾಭ್ ಬಚ್ಚನ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದಕ್ಕೆ ರಶ್ಮಿಕಾ ಮಂದಣ್ಣ ಹೇಳಿದ್ದೇನು?
‘ಗುಡ್ ಬೈ’ ಸೆಟ್​ನಲ್ಲಿ ಅಮಿತಾಭ್ ಜೊತೆಗಿರುವ ಚಿತ್ರ ಹಂಚಿಕೊಂಡಿದ್ದ ರಶ್ಮಿಕಾ ಮಂದಣ್ಣ
Follow us
TV9 Web
| Updated By: shivaprasad.hs

Updated on: Aug 04, 2021 | 6:22 PM

ಕನ್ನಡ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟು, ತೆಲುಗಿನಲ್ಲಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಈಗ ಸಾಲು ಸಾಲು ಬಾಲಿವುಡ್ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಗೊತ್ತೇ ಇದೆ. ಬಾಲಿವುಡ್ ದಿಗ್ಗಜ ಅಮಿತಾಭ್​ ಬಚ್ಚನ್ ಅವರೊಂದಿಗೆ ‘ಗುಡ್​ ಬೈ’ ಚಿತ್ರದಲ್ಲಿ ತೆರೆ ಹಂಚಿಕೊಳ್ಳುತ್ತಿರುವ ರಶ್ಮಿಕಾ, ಬಿಗ್​ಬಿ ಜೊತೆಗಿನ ಶೂಟಿಂಗ್ ಅನುಭವವನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಖಾಸಗಿ ಮನರಂಜನಾ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಅಮಿತಾಭ್ ಜೊತೆ ನಟಿಸಿದ್ದರ ಅನುಭವ ಹಂಚಿಕೊಂಡ ಅವರು, ‘ಅವರೊಂದಿಗಿನ(ಅಮಿತಾಭ್) ಶೂಟಿಂಗ್ ಅದ್ಭುತವಾಗಿತ್ತು’ ಎಂದಿದ್ದಾರೆ.

ನಿರ್ದೇಶಕ ವಿಕಾಸ್ ಬಾಹ್ಲ್ ನಿರ್ದೇಶಿಸುತ್ತಿರುವ ‘ಗುಡ್​ ಬೈ’ ಚಿತ್ರವನ್ನು ಬಾಲಾಜಿ ಮೋಷನ್ ಪಿಚ್ಚರ್ಸ್ ಹಾಗೂ ರಿಲಯನ್ಸ್ ಎಂಟರ್ಟೈನ್ಮೆಂಟ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಅಮಿತಾಭ್ ಬಚ್ಚನ್ ಹಾಗೂ ರಶ್ಮಿಕಾ ಮಂದಣ್ಣ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೊರೊನಾ ಕಾರಣದಿಂದ ನಿಂತಿದ್ದ ಚಿತ್ರೀಕರಣ ಈಗ ಮತ್ತೆ ಪ್ರಾರಂಭವಾಗಿದೆ. ಸೆಟ್​ನಲ್ಲಿನ ವಾತಾವರಣದ ಕುರಿತು ಮಾತನಾಡಿರುವ ರಶ್ಮಿಕಾ ಮಂದಣ್ಣ, ಹಲವು ದಿನಗಳ ಕಾಲ ಚಿತ್ರೀಕರಣದಲ್ಲಿ ಸತತವಾಗಿ ತೊಡಗುವುದರಿಂದ ಉತ್ತಮ ಸಂವಹನ ಸಾಧ್ಯವಾಗುತ್ತದೆ. ಅದರಿಂದಾಗಿ ಉತ್ತಮ ಪ್ರದರ್ಶನವನ್ನೂ ನೀಡಬಹುದು. ನಾವು ಸೆಟ್​ನಲ್ಲಿ ಕಂಫರ್ಟ್​ನಲ್ಲಿದ್ದಾಗ ಉತ್ತಮ ಪ್ರದರ್ಶನವನ್ನು ನೀಡುತ್ತೇವೆ. ಇಂತಹ ವಾತಾವರಣ ನಿರ್ದೇಶಕರಿಗೂ ಸೇರಿದಂತೆ ಸೆಟ್​ನ ಎಲ್ಲರಿಗೂ ಮುದ ನೀಡುತ್ತದೆ ಎಂದು ಗುಡ್ ​ಬೈ ಸೆಟ್ ವಾತಾವರಣವನ್ನು ಶ್ಲಾಘಿಸಿದ್ದಾರೆ ರಶ್ಮಿಕಾ ಮಂದಣ್ಣ.

ಈ ಮೊದಲು ಅಮಿತಾಭ್ ಅವರೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದ ರಶ್ಮಿಕಾ ಮಂದಣ್ಣ:

‘ಗುಡ್ ಬೈ’ ಚಿತ್ರದ ಹೊರತಾಗಿ ರಶ್ಮಿಕಾ ಮಂದಣ್ಣ ಬಾಲಿವುಡ್​ನ ‘ಮಿಷನ್ ಮಜ್ನು’ ಚಿತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಅದರಲ್ಲಿ ಅವರಿಗೆ ತೆರೆಯ ಮೇಲೆ ಸಿದ್ಧಾರ್ಥ್ ಮಲ್ಹೋತ್ರಾ ಜೋಡಿಯಾಗಿ ನಟಿಸಿದ್ದಾರೆ. ತೆಲುಗಿನಲ್ಲಿ ರಶ್ಮಿಕಾ ಮತ್ತು ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಚಿತ್ರವು ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚೆಗಷ್ಟೇ ನಟ ಶರ್ವಾನಂದ್ ಅವರೊಂದಿಗೆ ತೆಲುಗಿನ ‘ಆಡವಲ್ಲು ಮೀಕು ಜೋಹಾರ್ಲು’ ತೆಲುಗು ಚಿತ್ರವೂ ಸೆಟ್ಟೇರಿತ್ತು.

ಇದನ್ನೂ ಓದಿ:

ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ಸೋನು ಸೂದ್​ ವಿಲನ್​? ಫ್ಯಾನ್ಸ್​ ಇದನ್ನು ಸಹಿಸೋದು ಹೇಗೆ?

ರಶ್ಮಿಕಾ ಸಿನಿಮಾದಲ್ಲಿ ಸನ್ನಿ ಲಿಯೋನ್​ಗೆ 50 ಲಕ್ಷ ಸಂಬಳ; ಮಾಜಿ ನೀಲಿ ತಾರೆಗೆ ಏನು ಕೆಲಸ?

(Rashmika Mandanna shares her shooting experience with Amitabh Bachchan in Good Bye set)

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್