ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸದ್ಯ ಶೂಟಿಂಗ್ನಿಂದ ಬ್ರೇಕ್ ಪಡೆದುಕೊಂಡು ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಟನೆಯ ಮೊದಲ ಹಿಂದಿ ಸಿನಿಮಾ ‘ಗುಡ್ಬೈ’ (Goodbye) ರಿಲೀಸ್ಗೆ ರೆಡಿ ಇದೆ. ಇದನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಇದು ಕುಟುಂಬ ಕುಳಿತು ನೋಡುವ ಸಿನಿಮಾ ಎಂಬುದು ಟ್ರೇಲರ್ ಮೂಲಕ ಸಾಬೀತಾಗಿದೆ. ಎಮೋಷನಲ್ ಕಥೆಯನ್ನು ಈ ಚಿತ್ರ ಹೊಂದಿದೆ. ಈ ಸಿನಿಮಾ ರಿಲೀಸ್ಗೂ ಮೊದಲು ಅವರು ಫ್ಯಾಮಿಲಿ ಫೋಟೋ ಹಂಚಿಕೊಂಡಿದ್ದಾರೆ.
‘ಗುಡ್ಬೈ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಅವರು ರಶ್ಮಿಕಾ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನೀನಾ ಗುಪ್ತಾ ಅವರು ರಶ್ಮಿಕಾ ತಾಯಿ ಪಾತ್ರದಲ್ಲಿ ನಟಿಸಿದ್ದಾರೆ. ಕಥಾ ನಾಯಕಿ ತಾರಾಳ ತಾಯಿ ನಿಧನ ಹೊಂದುತ್ತಾಳೆ. ಸದಾ ತಾಯಿಯನ್ನು ಬೈಯ್ಯುತ್ತಾ ಇರುವ ತಾರಾಗೆ ಅಮ್ಮ ಸತ್ತ ನಂತರದಲ್ಲಿ ಅವಳ ನಿಜವಾದ ಮೌಲ್ಯ ತಿಳಿಯುತ್ತದೆ. ಚಿತ್ರದ ಕಥೆ ಸಂಪೂರ್ಣವಾಗಿ ಭಾವನಾತ್ಮಕವಾಗಿದೆ ಎಂಬುದು ಟ್ರೇಲರ್ನಲ್ಲಿ ಗೊತ್ತಾಗಿದೆ. ಸಿನಿಮಾ ಪ್ರಚಾರದ ಭಾಗವಾಗಿ ಅವರು ಕುಟುಂಬದ ಫೋಟೋ ಹಂಚಿಕೊಂಡಿದ್ದಾರೆ.
ರಶ್ಮಿಕಾ, ಅವರ ತಾಯಿ ಸುಮನ್ ಮಂದಣ್ಣ, ತಂದೆ ಮದನ್ ಮಂದಣ್ಣ ಹಾಗೂ ತಂಗಿ ಶಿಮನ್ ಮಂದಣ್ಣ ಈ ಫೋಟೋದಲ್ಲಿ ಇದ್ದಾರೆ. ಈ ಫೋಟೋ ಹಂಚಿಕೊಂಡಿರುವ ರಶ್ಮಿಕಾ ಅವರು, ‘ಇದು ನನ್ನ ರಿಯಲ್ ಕುಟುಂಬ. ನನ್ನ ರೀಲ್ ಕುಟುಂಬವನ್ನು ಮೂರು ದಿನಗಳಲ್ಲಿ ಭೇಟಿ ಮಾಡುತ್ತೀರಿ. ‘ಗುಡ್ಬೈ’ ಕುಟುಂಬ’ ಎಂದು ಬರೆದುಕೊಂಡಿದ್ದಾರೆ ರಶ್ಮಿಕಾ.
ರಶ್ಮಿಕಾ ಮಂದಣ್ಣ ಅವರು ‘ಗುಡ್ಬೈ’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಾಲಿವುಡ್ನಲ್ಲಿ ರಿಲೀಸ್ ಆಗುತ್ತಿರುವ ಅವರ ಮೊದಲ ಸಿನಿಮಾ. ಈ ಚಿತ್ರದಲ್ಲಿ ರಶ್ಮಿಕಾ ನಟನೆಗೆ ಮೆಚ್ಚುಗೆ ಸಿಕ್ಕರೆ ಅವರ ಬೇಡಿಕೆ ಮತ್ತಷ್ಟು ಹೆಚ್ಚಲಿದೆ. ಈಗಾಗಲೇ ರಶ್ಮಿಕಾ ಹಿಂದಿಯಲ್ಲಿ ‘ಮಿಷನ್ ಮಜ್ನು’, ‘ಅನಿಮಲ್’ ಮೊದಲಾದ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.
ಇದನ್ನೂ ಓದಿ: ‘ದೇವರಕೊಂಡ ಜತೆ ಲಿಪ್ ಲಾಕ್ ಮಾಡಿ ಟ್ರೋಲ್ ಆದಾಗ ಹಗಲು-ರಾತ್ರಿ ಕಣ್ಣೀರು ಸುರಿಸಿದ್ದೆ’: ರಶ್ಮಿಕಾ
ರಶ್ಮಿಕಾ ಖ್ಯಾತಿ ಕೇವಲ ಬಾಲಿವುಡ್ಗೆ ಮಾತ್ರ ಸೀಮಿತವಾಗಿಲ್ಲ. ತೆಲುಗಿನಲ್ಲಿ ‘ಪುಷ್ಪ 2’, ತಮಿಳಿನಲ್ಲಿ ದಳಪತಿ ವಿಜಯ್ ನಟನೆಯ ‘ವಾರಿಸು’ ಸಿನಿಮಾ ಕೆಲಸಗಳಲ್ಲಿಯೂ ರಶ್ಮಿಕಾ ಬಣ್ಣ ಹಚ್ಚುತ್ತಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ರಶ್ಮಿಕಾ ಮುಖ್ಯ ಪಾತ್ರದಲ್ಲಿ ಮಿಂಚಿದ್ದರು.