AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ನಟನೆಯ ಹೊಸ ಹಿಂದಿ ಸಿನಿಮಾ ಟ್ರೈಲರ್ ಬಿಡುಗಡೆ

Rashmika Mandanna: ನಟಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್​ನ ಬಲು ಬೇಡಿಕೆಯ ನಟಿ ಮತ್ತು ಇತ್ತೀಚೆಗಿನ ಬಲು ಯಶಸ್ವಿ ನಟಿ. ಇದೀಗ ರಶ್ಮಿಕಾ ಮಂದಣ್ಣ ನಟನೆಯ ಮತ್ತೊಂದು ಬಾಲಿವುಡ್ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ರಶ್ಮಿಕಾ ಮೊದಲ ಬಾರಿಗೆ ಭಿನ್ನವಾದ ಪಾತ್ರದಲ್ಲಿ ನಟಿಸಿದ್ದಾರೆ. ಅಂದಹಾಗೆ ಸಿನಿಮಾ ಯಾವುದು? ಬಿಡುಗಡೆ ಯಾವಾಗ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ...

ರಶ್ಮಿಕಾ ಮಂದಣ್ಣ ನಟನೆಯ ಹೊಸ ಹಿಂದಿ ಸಿನಿಮಾ ಟ್ರೈಲರ್ ಬಿಡುಗಡೆ
Rashmika Mandanna
ಮಂಜುನಾಥ ಸಿ.
|

Updated on:Sep 27, 2025 | 11:30 AM

Share

ರಶ್ಮಿಕಾ ಮಂದಣ್ಣ ಈಗ ತೆಲುಗು, ತಮಿಳು ಹಾಗೂ ಬಾಲಿವುಡ್​​ನ ಬಲು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಒಂದರ ಹಿಂದೆ ಒಂದರಂತೆ ಸತತವಾಗಿ ಮೂರು ಅಲ್ಟ್ರಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ರಶ್ಮಿಕಾ ಮಂದಣ್ಣ ನೀಡಿದ್ದಾರೆ. ಅವರು ನಟಿಸಿರುವ ‘ಪುಷ್ಪ 2’, ‘ಅನಿಮಲ್’ ಮತ್ತು ‘ಛಾವಾ’ ಸಿನಿಮಾಗಳು ಒಂದರ ಬಳಿಕ ಒಂದು ಬಿಡುಗಡೆ 1000 ಕೋಟಿಗೂ ಹೆಚ್ಚು ಹಣವನ್ನು ಗಳಿಕೆ ಮಾಡಿವೆ. ಅದರ ಬಳಿಕ ರಶ್ಮಿಕಾ ನಟಿಸಿದ್ದ ‘ಕುಬೇರ’ ಸಿನಿಮಾ ಸಹ ಬಾಕ್ಸ್ ಆಫೀಸ್​​ನಲ್ಲಿ ದೊಡ್ಡ ಹಿಟ್ ಆಯ್ತು. ರಶ್ಮಿಕಾ ಈಗ ಬಾಲಿವುಡ್​​ನ ಬಲು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ನಟನೆಯ ಮತ್ತೊಂದು ಹಿಂದಿ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ಸಿನಿಮಾದ ಬಿಡುಗಡೆ ದಿನಾಂಕ ಸಹ ಘೋಷಣೆ ಆಗಿದೆ. ರಶ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಒಂದರಲ್ಲಿ ನಟಿಸಿದ್ದು, ಸಿನಿಮಾದ ಹೆಸರು ‘ಥಮ’. ಆಯುಷ್ಮಾನ್ ಖುರಾನಾ ನಾಯಕನಾಗಿ ನಟಿಸಿರುವ ಈ ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಮತ್ತು ಖ್ಯಾತ ನಟ ನವಾಜುದ್ಧೀನ್ ಸಿದ್ಧಿಖಿ ವಿಲನ್ ಆಗಿ ನಟಿಸಿದ್ದಾರೆ.

ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಿನಿಮಾ ಹಾರರ್ ಕಾಮಿಡಿ ಆಗಿದ್ದು ಇದರ ಜೊತೆಗೆ ಪ್ರೇಮಕತೆಯೂ ಇದೆ. ರಶ್ಮಿಕಾ ಮಂದಣ್ಣ ಸಾವಿರಾರು ವರ್ಷಗಳ ಹಿಂದೆ ನಿಧನ ಹೊಂದಿ ಈಗ ಪ್ರೇತವಾಗಿದ್ದಾರೆ, ಅದರಂತೆ ನವಾಜುದ್ಧೀನ್ ಸಿದ್ಧಿಖಿ ಸಹ ಸಾವಿರಾರು ವರ್ಷಗಳ ಹಿಂದೆ ನಿಧನವಾಗಿದ್ದು ಎಲ್ಲೋ ಗುಹೆಯಲ್ಲಿ ಬಂಧಿಯಾಗಿರುತ್ತಾರೆ. ಆಯುಷ್ಮಾನ್ ಖುರಾನಾ ಇಂದಾಗಿ ಇಬ್ಬರಿಗೂ ಬಿಡುಗಡೆ ಸಿಗುತ್ತದೆ. ಆದರೆ ಆಯುಷ್ಮಾನ್ ಖುರಾನಾ ಸಹ ದೆವ್ವವಾಗಿ ಬದಲಾಗುತ್ತಾರೆ. ಇದು ಕತೆ. ಸಿನಿಮಾನಲ್ಲಿ ಆಕ್ಷನ್, ಹಾರರ್ ಜೊತೆಗೆ ಒಳ್ಳೆಯ ಕಾಮಿಡಿ ಸಹ ಇರುವುದು ಟ್ರೈಲರ್​​ನಿಂದ ಗೊತ್ತಾಗುತ್ತಿದೆ.

ಇದನ್ನೂ ಓದಿ:ರಶ್ಮಿಕಾ ಮಂದಣ್ಣ ಬಾಲಿವುಡ್ ಸಿನಿಮಾ ಬಿಡುಗಡೆ ದಿನಾಂಕ ನಿಗದಿ

ರಶ್ಮಿಕಾ ಮಂದಣ್ಣ, ‘ಥಮ’ ಸಿನಿಮಾನಲ್ಲಿ ಅಲ್ಲಲ್ಲಿ ತುಸು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಆಯುಷ್ಮಾನ್ ಖುರಾನಾ ಜೊತೆಗೆ ಲಿಪ್ ಲಾಕ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗ್ಲಾಮರಸ್ ಉಡುಗೆಗಳನ್ನು ಧರಿಸಿದ್ದಾರೆ. ಸಿನಿಮಾನಲ್ಲಿ ಮಲೈಕಾ ಅರೋರಾ ಹಾಗೂ ನೋರಾ ಫತೇಹಿಯ ಹಾಟ್ ಹಾಡುಗಳು ಸಹ ಇವೆ. ಸಿನಿಮಾವನ್ನು ಆದಿತ್ಯ ಸರ್ಪೋಟ್ದಾರ್ ನಿರ್ದೇಶನ ಮಾಡಿದ್ದಾರೆ. ಹಾರರ್ ಸಿನಿಮಾಗಳನ್ನೇ ನಿರ್ಮಿಸುತ್ತಾ ಬರುತ್ತಿರುವ ಮ್ಯಾಡಾಕ್ ಸಂಸ್ಥೆ ಈ ಸಿನಿಮಾದ ನಿರ್ಮಾಣ ಮಾಡಿದೆ. ಸಿನಿಮಾ ಅಕ್ಟೋಬರ್ 21ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:24 am, Sat, 27 September 25

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್