ಸಲ್ಮಾನ್ ಖಾನ್ ಜೊತೆ ನಟಿಸಲು ಭಾರಿ ಸಂಭಾವನೆ ಪಡೆಯಲಿದ್ದಾರೆ ರಶ್ಮಿಕಾ ಮಂದಣ್ಣ
ಸಲ್ಮಾನ್ ಖಾನ್ ಜೊತೆಗೆ ‘ಸಿಖಂಧರ್’ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕಾಗಿ ದೊಡ್ಡ ಮೊತ್ತದ ಸಂಭಾವನೆಯನ್ನೇ ನಟಿ ರಶ್ಮಿಕಾ ಮಂದಣ್ಣ ಪಡೆಯಲಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್ನ ಬೇಡಿಕೆಯ ನಟಿ ಎನಿಸಿಕೊಳ್ಳುತ್ತಿದ್ದಾರೆ. ಹಲವು ವರ್ಷಗಳ ಕಾಲ ಸಿನಿಮಾಗಳಲ್ಲಿಯೂ ನಟಿಸಿಯೂ ಸ್ಟಾರ್ ನಟರೊಟ್ಟಿಗೆ ತೆರೆ ಹಂಚಿಕೊಳ್ಳುವ ಅವಕಾಶ ಸಿಗದ ಹಲವು ನಟಿಯರು ಬಾಲಿವುಡ್ನಲ್ಲಿದ್ದಾರೆ. ಆದರೆ ರಶ್ಮಿಕಾ ಮಂದಣ್ಣಗೆ ಈ ಅವಕಾಶ ಬಹುಬೇಗ ಒಲಿದಿದೆ. ರಶ್ಮಿಕಾ ತಮ್ಮ ಮೊದಲ ಬಾಲಿವುಡ್ ಸಿನಿಮಾದಲ್ಲಿಯೇ ಅಮಿತಾಬ್ ಬಚ್ಚನ್ ಜೊತೆ ನಟಿಸಿದ್ದರು. ಬಳಿಕ ರಣ್ಬೀರ್ ಕಪೂರ್ ಜೊತೆ ನಟಿಸಿ ಬ್ಲಾಕ್ ಬಸ್ಟರ್ ನೀಡಿದರು. ಈಗ ಬಾಲಿವುಡ್ನ ಟಾಪ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಜೊತೆಗೆ ನಟಿಸುತ್ತಿದ್ದಾರೆ.
ಸಲ್ಮಾನ್ ಖಾನ್ ನಟಿಸಲಿರುವ ಮುಂದಿನ ಆಕ್ಷನ್ ಥ್ರಿಲ್ಲರ್ ಸಿನಿಮಾ ‘ಸಿಖಂಧರ್’ನಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಈ ಸಿನಿಮಾವನ್ನು ಭಾರತದ ಟಾಪ್ ನಿರ್ದೇಶಕರಲ್ಲಿ ಒಬ್ಬರಾದ ಎಆರ್ ಮುರುಗದಾಸ್ ನಿರ್ದೇಶನ ಮಾಡಲಿದ್ದಾರೆ. ನಿರ್ಮಾಣ ಮಾಡುತ್ತಿರುವುದು ಬಹುಕೋಟಿ ಬಜೆಟ್ ಸಿನಿಮಾಗಳನ್ನು ನೀಡಿರುವ ಸಾಜಿದ್ ನಾಡಿಯಾವಾಲಾ. ಈ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸಲು ಭಾರಿ ದೊಡ್ಡ ಸಂಭಾವನೆಯನ್ನೇ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ:ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ಬೇಕು ಅಂತ ಹಠ ಹಿಡಿದಿದ್ದಾರಾ ವಿಜಯ್ ದೇವರಕೊಂಡ?
ಸಲ್ಮಾನ್ ಖಾನ್ ಜೊತೆಗಿನ ಸಿನಿಮಾದಲ್ಲಿ ನಟಿಸಲು ರಶ್ಮಿಕಾ ಮಂದಣ್ಣ ಭಾರಿ ಸಂಭಾವನೆಯನ್ನೇ ಪಡೆದಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಪ್ರತಿ ಸಿನಿಮಾಕ್ಕೆ 3-4 ಕೋಟಿ ಹಣ ಪಡೆಯುತ್ತಿದ್ದರು, ಆದರೆ ಸಲ್ಮಾನ್ ಖಾನ್ ನಟನೆಯ ‘ಸಿಖಂದರ್’ ಸಿನಿಮಾಕ್ಕೆ 50% ಹೆಚ್ಚುವರಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ. ಸಲ್ಮಾನ್ ಖಾನ್ ಸಿನಿಮಾಗಳಲ್ಲಿ ನಾಯಕಿಯರಿಗೆ ಹೆಚ್ಚಿನ ಕೆಲಸವಿರುವುದಿಲ್ಲ, ಕೇವಲ ಹಾಡು, ಒಂದೆರಡು ದೃಶ್ಯಗಳಿಗೆ ಮಾತ್ರವೇ ನಾಯಕಿಯರು ಸೀಮಿತವಾಗಿರುತ್ತಾರೆ. ಆದರೆ ‘ಸಿಖಂಧರ್’ ಸಿನಿಮಾವನ್ನು ಮುರುಗದಾಸ್ ನಿರ್ದೇಶಿಸುತ್ತಿದ್ದು, ಅವರ ಸಿನಿಮಾಗಳಲ್ಲಿ ನಾಯಕಿ ಪಾತ್ರಕ್ಕೆ ಹೆಚ್ಚಿನ ಪ್ರಾಶಸ್ತ್ಯವಿರುತ್ತದೆ. ಹಾಗಾಗಿ ರಶ್ಮಿಕಾಗೆ ಈ ಸಿನಿಮಾದಲ್ಲಿ ಪ್ರತಿಭಾ ಪ್ರದರ್ಶನಕ್ಕೆ ಒಳ್ಳೆಯ ಅವಕಾಶ ಸಿಗುವ ಸಾಧ್ಯತೆ ಇದೆ.
ಇನ್ನುಳಿದಂತೆ ರಶ್ಮಿಕಾ ಮಂದಣ್ಣ ಸದ್ಯಕ್ಕೆ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗಿನಲ್ಲಿ ‘ಪುಷ್ಪ 2’, ‘ಗರ್ಲ್ಫ್ರೆಂಡ್’ ವಿಜಯ್ ದೇವರಕೊಂಡ ಜೊತೆಗೆ ಹೊಸ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ತಮಿಳಿನಲ್ಲಿ ಹೊಸದೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಹಿಂದಿಯಲ್ಲಿ ಜಾಕಿ ಶ್ರಾಫ್ ಜೊತೆಗೆ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸಲಿದ್ದಾರೆ. ಈಗ ಸಲ್ಮಾನ್ ಖಾನ್ ಸಿನಿಮಾ ಬಾಚಿಕೊಂಡಿದ್ದಾರೆ.
ಇನ್ನು ಸಲ್ಮಾನ್ ಖಾನ್ ನಟನೆಯ ಈ ಹಿಂದಿನ ಸಿನಿಮಾ ‘ಟೈಗರ್ 3’ ಸಾಧಾರಣ ಯಶಸ್ಸನ್ನಷ್ಟೆ ಕಂಡಿದೆ. ಯಶ್ ರಾಜ್ ಫಿಲಮ್ಸ್ ಜೊತೆಗೆ ಹೊಸದೊಂದು ಸಿನಿಮಾದ ಚರ್ಚೆಯಲ್ಲಿದ್ದಾರೆ ಸಲ್ಮಾನ್ ಖಾನ್. ‘ದಬಂಗ್’ ಸಿನಿಮಾ ಸರಣಿಯ ಹೊಸ ಸಿನಿಮಾದ ಚರ್ಚೆಯೂ ನಡೆಯುತ್ತಿದೆ. ಸುದೀಪ್ ಸಹ ತಾವು ಸಲ್ಮಾನ್ ಖಾನ್ಗೆ ಕತೆ ಹೇಳಿದ್ದಾಗಿ ಹೇಳಿದ್ದರು. ಆದರೆ ಆ ಸಿನಿಮಾ ಎಲ್ಲಿಯವರೆಗೆ ಬಂದಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಈಗ ಮುರುಗದಾಸ್ ಜೊತೆ ‘ಸಿಖಂಧರ್’ ಮಾಡುತ್ತಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ