AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ‘ನನ್ನ ಮತ್ತು ಟೈಗರ್​ ಶ್ರಾಫ್​ ಕುರಿತ ಗಾಸಿ​ಪ್​ ನಿಜ’: ವಿಡಿಯೋ ಸಮೇತ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ

Rashmika Mandanna | Tiger Shroff: ಸದ್ಯಕ್ಕಂತೂ ರಶ್ಮಿಕಾ ಮಂದಣ್ಣ ಸಖತ್​ ಬ್ಯುಸಿ ಆಗಿದ್ದಾರೆ. ಹಲವು ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡಿರುವ ಅವರಿಗೆ ಕೈ ತುಂಬ ಸಂಭಾವನೆ ಸಿಗುತ್ತಿದೆ.

Rashmika Mandanna: ‘ನನ್ನ ಮತ್ತು ಟೈಗರ್​ ಶ್ರಾಫ್​ ಕುರಿತ ಗಾಸಿ​ಪ್​ ನಿಜ’: ವಿಡಿಯೋ ಸಮೇತ ಒಪ್ಪಿಕೊಂಡ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ, ಟೈಗರ್ ಶ್ರಾಫ್
TV9 Web
| Edited By: |

Updated on:Jul 13, 2022 | 11:08 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಬೆಳೆದಿದ್ದಾರೆ. ಅವರ ಬಗ್ಗೆ ದಿನಕ್ಕೊಂದು ಗಾಸಿಪ್ (Gossip)​ ಕೇಳಿಬರುತ್ತಿದೆ. ಎಲ್ಲದಕ್ಕೂ ಅವರು ಪ್ರತಿಕ್ರಿಯೆ ನೀಡೋದಿಲ್ಲ. ಆದರೆ ಕೆಲವು ವಿಚಾರಗಳಿಗೆ ಖಂಡಿತವಾಗಿ ಉತ್ತರ ನೀಡುತ್ತಾರೆ. ರಶ್ಮಿಕಾ ಮಂದಣ್ಣ ಮತ್ತು ನಟ ಟೈಗರ್​ ಶ್ರಾಫ್​ (Tiger Shroff) ಬಗ್ಗೆ ಕೆಲವು ದಿನಗಳಿಂದ ಒಂದು ಗುಸುಗುಸು ಹಬ್ಬಿತ್ತು. ಇಬ್ಬರೂ ಜೊತೆಯಾಗಿ ಕೆಲಸ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆ ಗಾಸಿಪ್​ ನಿಜ ಎಂದು ರಶ್ಮಿಕಾ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ, ತಾವು ಮತ್ತು ಟೈಗರ್​ ಶ್ರಾಫ್​ ಜೊತೆಯಾಗಿ ಇರುವ ಒಂದು ವಿಡಿಯೋವನ್ನು ಅವರು ಶೇರ್​ ಮಾಡಿಕೊಂಡಿದ್ದಾರೆ. ಆ ಮೂಲಕ ಸೂಕ್ತ ಸ್ಪಷ್ಟನೆ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ಟೈಗರ್​ ಶ್ರಾಫ್​ ಅವರು ಒಂದು ಸಿನಿಮಾದಲ್ಲಿ ಜೊತೆಯಾಗಿ ನಟಿಸುತ್ತಾರೆ ಎಂಬ ಸುದ್ದಿ ಹರಡಿತ್ತು. ಆದರೆ ಅದರಲ್ಲೊಂದು ಟ್ವಿಸ್ಟ್​ ಇದೆ. ಸದ್ಯಕ್ಕೆ ಈ ಇವರಿಬ್ಬರು ತೆರೆ ಹಂಚಿಕೊಂಡಿರುವುದು ಯಾವುದೇ ಸಿನಿಮಾಗಾಗಿ ಅಲ್ಲ. ಬದಲಿಗೆ, ಜಾಹೀರಾತಿನಲ್ಲಿ ಜೊತೆಯಾಗಿ ನಟಿಸಿದ್ದಾರೆ. ಈ ವಿಚಾರವನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ರಶ್ಮಿಕಾ ಮಂದಣ್ಣ ಅವರು ಖಚಿತ ಪಡಿಸಿದ್ದಾರೆ.

‘ಗಾಸಿಪ್​ಗಳು ನಿಜವಾಗಿದೆ.. ನಾನು ಮತ್ತು ಟೈಗರ್​ ಶ್ರಾಫ್​ ಈಗ ತಾನೇ ಒಂದು ಜಾಹೀರಾತಿಗಾಗಿ ಶೂಟಿಂಗ್​ ಮುಗಿಸಿದೆವು’ ಎಂದು ರಶ್ಮಿಕಾ ಮಂದಣ್ಣ ಬರೆದುಕೊಂಡಿದ್ದಾರೆ. ‘ಟೈಗರ್​ ಜೊತೆ ಕೆಲಸ ಮಾಡಿದ್ದು ಚೆನ್ನಾಗಿತ್ತು’ ಎಂದು ಕೂಡ ರಶ್ಮಿಕಾ ಹೇಳಿದ್ದಾರೆ. ಇಂಥ ಹಲವಾರು ಜಾಹೀರಾತುಗಳಲ್ಲಿ ಅವರು ನಟಿಸುತ್ತಿದ್ದಾರೆ. ಅನೇಕ ಕಂಪನಿಗಳಿಗೆ ರಾಯಭಾರಿ ಆಗಿರುವ ರಶ್ಮಿಕಾ ಮಂದಣ್ಣ ಅವರಿಗೆ ಅವುಗಳಿಂದ ಕೋಟ್ಯಂತರ ರೂಪಾಯಿ ಸಂಭಾವನೆ ಬರುತ್ತಿದೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಸದ್ಯ ರಶ್ಮಿಕಾ ಮಂದಣ್ಣ ಸಖತ್​ ಬ್ಯುಸಿ ಆಗಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರಿಗೆ ಪ್ಯಾನ್​ ಇಂಡಿಯಾ ಹೀರೋಯಿನ್​ ಪಟ್ಟ ಸಿಕ್ಕಿತು. ಕೆಲವೇ ದಿನಗಳಲ್ಲಿ ‘ಪುಷ್ಪ 2’ ಚಿತ್ರದ ಶೂಟಿಂಗ್​ ಆರಂಭ ಆಗಲಿದೆ. ತಮಿಳಿನಲ್ಲಿ ‘ದಳಪತಿ’ ವಿಜಯ್​ ಜೊತೆಗಿನ ಚಿತ್ರಕ್ಕೂ ಅವರು ನಾಯಕಿ ಆಗಿ​ದ್ದಾರೆ. ಬಾಲಿವುಡ್​ನಲ್ಲಿ ಕೂಡ ಅವರಿಗೆ ಹಲವು ಆಫರ್​ಗಳು ಸಿಗುತ್ತಿವೆ. ‘ಗುಡ್​ಬೈ’, ‘ಮಿಷನ್​ ಮಜ್ನು’ ಮುಂತಾದ ಹಿಂದಿ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವುಗಳ ರಿಲೀಸ್​ಗಾಗಿ ಫ್ಯಾನ್ಸ್​ ಕಾದಿದ್ದಾರೆ.

Published On - 8:06 am, Tue, 12 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್