AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾಗೆ ಖುಲಾಯಿಸಿತು ಅದೃಷ್ಟ, ಬಾಲಿವುಡ್ ಖಾನ್​ಗೆ ನಾಯಕಿ

ರಶ್ಮಿಕಾ ಮಂದಣ್ಣ ವೃತ್ತಿ ಏರುಗತಿಯಲ್ಲಿಯೇ ಸಾಗುತ್ತಿದೆ. ಕನ್ನಡ ಚಿತ್ರರಂಗದಿಂದ ವೃತ್ತಿ ಆರಂಭಿಸಿದ ರಶ್ಮಿಕಾ ಈಗ ತೆಲುಗು, ತಮಿಳು, ಬಾಲಿವುಡ್​ನ ಬೇಡಿಕೆಯ ನಟಿ. ಬಾಲಿವುಡ್​ನ ದೊಡ್ಡ ಸ್ಟಾರ್ ನಟರುಗಳ ಸಿನಿಮಾಗಳಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದೀಗ ಬಾಲಿವುಡ್ ನ ಖಾನ್ ಎದುರು ನಾಯಕಿಯಾಗಿದ್ದಾರೆ ರಶ್ಮಿಕಾ.

Rashmika Mandanna: ರಶ್ಮಿಕಾಗೆ ಖುಲಾಯಿಸಿತು ಅದೃಷ್ಟ, ಬಾಲಿವುಡ್ ಖಾನ್​ಗೆ ನಾಯಕಿ
ಮಂಜುನಾಥ ಸಿ.
| Updated By: Digi Tech Desk|

Updated on:May 09, 2024 | 1:00 PM

Share

ರಶ್ಮಿಕಾ ಮಂದಣ್ಣ (Rashmika Mandanna) ವೃತ್ತಿ ಏರುಗತಿಯಲ್ಲಿಯೇ ಸಾಗುತ್ತಿದೆ. ಕನ್ನಡ ಸಿನಿಮಾದಿಂದ ನಟನೆಗೆ ಪದಾರ್ಪಣೆ ಮಾಡಿ ಈಗ ತೆಲುಗು, ತಮಿಳು ಹಾಗೂ ಬಾಲಿವುಡ್​ನಲ್ಲಿಯೂ ಬೇಡಿಕೆಯ ನಟಿಯಾಗಿದ್ದಾರೆ. ಹಿಂದಿಯಲ್ಲಿ ದೊಡ್ಡ ಸ್ಟಾರ್​ ನಟರುಗಳೊಟ್ಟಿಗೆ ನಟಿಸುವ ಅವಕಾಶವನ್ನು ರಶ್ಮಿಕಾ ಮಂದಣ್ಣ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್ ಸ್ಟಾರ್ ನಟ ರಣ್​ಬೀರ್ ಕಪೂರ್ ಜೊತೆ ನಟಿಸಿದ್ದ ‘ಅನಿಮಲ್’ ಸಿನಿಮಾ ಸೂಪರ್-ಡೂಪರ್ ಹಿಟ್ ಆಗಿದೆ. ಇದೀಗ ಮತ್ತೊಬ್ಬ ಬಾಲಿವುಡ್ ಸೂಪರ್ ಸ್ಟಾರ್ ಜೊತೆ ನಟಿಸುವ ಅವಕಾಶ ರಶ್ಮಿಕಾ ಮಂದಣ್ಣರನ್ನು ಅರಸಿ ಬಂದಿದೆ.

ಬಾಲಿವುಡ್​ನ ಖಾನ್​ ತ್ರಯರಲ್ಲಿ ಒಬ್ಬರಾದ ಸೂಪರ್ ಸ್ಟಾರ್ ಸಲ್ಮಾನ್ ಖಾನ್​ರ ಮುಂದಿನ ಸಿನಿಮಾಕ್ಕೆ ರಶ್ಮಿಕಾ ಮಂದಣ್ಣ ನಾಯಕಿ. ಸಲ್ಮಾನ್ ಖಾನ್ ಜೊತೆಗೆ ಸಿನಿಮಾ ಮಾಡಲು ಸ್ಟಾರ್ ನಟಿಯರೇ ಸಾಲುಗಟ್ಟಿ ನಿಂತಿದ್ದಾರೆ ಅಂಥಹದರಲ್ಲಿ ರಶ್ಮಿಕಾ ಮಂದಣ್ಣಗೆ ಸಲ್ಮಾನ್ ಖಾನ್ ಎದುರು ನಾಯಕಿಯಾಗಿ ನಟಿಸುವ ಅವಕಾಶ ಅರಸಿ ಬಂದಿದೆ.

ಸಲ್ಮಾನ್ ಖಾನ್ ‘ಸಿಖಂದರ್’ ಹೆಸರಿನ ಆಕ್ಷನ್ ಥ್ರಿಲ್ಲರ್ ಸಿನಿಮಾನಲ್ಲಿ ನಟಿಸಲಿದ್ದಾರೆ ಈ ಸಿನಿಮಾವನ್ನು ಸಲ್ಮಾನ್ ಖಾನ್​ರ ಆತ್ಮೀಯ ಗೆಳೆಯ ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾಕ್ಕೆ ತಮಿಳಿನ ಸೂಪರ್ ಹಿಟ್ ನಿರ್ದೇಶಕ ಮುರುಗದಾಸ್ ನಿರ್ದೇಶನ ಮಾಡಲಿದ್ದಾರೆ. ಭಾರಿ ಬಜೆಟ್​ನ ಸಿನಿಮಾ ಇದಾಗಿದ್ದು, ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಮುರುಗದಾಸ್ ಅನುಭವಿ ಹಾಗೂ ಪ್ರತಿಭಾವಂತ ನಿರ್ದೇಶಕ ಆಗಿದ್ದು, ಸೋಲಿನ ಸುಳಿಯಲ್ಲಿರುವ ಸಲ್ಮಾನ್ ಖಾನ್​ಗೆ ಹಿಟ್ ಸಿನಿಮಾ ನೀಡುವ ಪಣ ತೊಟ್ಟಿದ್ದಾರೆ.

ಇದನ್ನೂ ಓದಿ:‘ಪುಷ್ಪ 2’ ಸಿನಿಮಾದಲ್ಲಿ ಪ್ರೇಕ್ಷಕರು ಊಹಿಸಿದಂತೆ ಇರಲ್ಲ ರಶ್ಮಿಕಾ ಮಂದಣ್ಣ ಪಾತ್ರ

ಚಿತ್ರಕತೆಯ ಬೇಡಿಕೆಗೆ ತಕ್ಕಂತೆ ರಶ್ಮಿಕಾ ಮಂದಣ್ಣ ಅವರನ್ನು ಆಯ್ಕೆ ಮಾಡಿದ್ದಾರಂತೆ ನಿರ್ದೇಶಕ ಎಆರ್ ಮುರುಗದಾಸ್. ಸಿನಿಮಾನಲ್ಲಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಚೆಲುವೆಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸಲ್ಮಾನ್ ಖಾನ್ ಎದುರು ಹೊಸ ನಾಯಕಿಯನ್ನು ಪ್ರಯತ್ನಿಸುವ ನಿರ್ಧಾರ ಮಾಡಿ ರಶ್ಮಿಕಾ ಮಂದಣ್ಣರನ್ನು ಆಯ್ಕೆ ಮಾಡಲಾಗಿದೆಯಂತೆ. ರಶ್ಮಿಕಾ ಮಂದಣ್ಣಗೂ ಕತೆ ಬಹಳವಾಗಿ ಇಷ್ಟವಾಗಿದ್ದು, ಸಲ್ಮಾನ್ ಖಾನ್ ಹಾಗೂ ಮುರುಗದಾಸ್ ಅಂಥಹಾ ಅನುಭವಿಗಳೊಟ್ಟಿಗೆ ಕೆಲಸ ಮಾಡಲು ಉತ್ಸುಕರಾಗಿದ್ದಾರಂತೆ ರಶ್ಮಿಕಾ.

ರಶ್ಮಿಕಾ ಮಂದಣ್ಣ ಪ್ರಸ್ತುತ ‘ಪುಷ್ಪ 2’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ತೆಲುಗಿನ ‘ಗರ್ಲ್​ಫ್ರೆಂಡ್’ ಸಿನಿಮಾನಲ್ಲಿಯೂ ನಟಿಸುತ್ತಿದ್ದಾರೆ. ವಿಜಯ್ ದೇವರಕೊಂಡ ಜೊತೆಗೆ ವರ್ಷಗಳ ಬಳಿಕ ಮತ್ತೆ ಹೊಸದೊಂದು ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ತಮಿಳಿನ ಒಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಹಿಂದಿಯಲ್ಲಿ ನಟ ಟೈಗರ್ ಶ್ರಾಫ್ ಜೊತೆಗೆ ಹೊಸದೊಂದು ಸಿನಿಮಾ ಮಾಡಲಿದ್ದಾರೆ. ಈಗ ಸಲ್ಮಾನ್ ಖಾನ್ ಸಿನಿಮಾ ಸಹ ರಶ್ಮಿಕಾರನ್ನು ಅರಸಿ ಬಂದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Thu, 9 May 24

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ