ಸಿಕ್ಕಾಪಟ್ಟೆ ಗ್ಲಾಮರ್ ಪಾತ್ರ ಮಾಡಲು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ; ಯಾವುದು ಈ ಸಿನಿಮಾ?
ನಟಿ ರಶ್ಮಿಕಾ ಮಂದಣ್ಣ ಅವರು ಈಗ ಸೌತ್ ಸಿನಿಮಾಗಿಂತ ಬಾಲಿವುಡ್ನಲ್ಲೇ ಹೆಚ್ಚು ಬ್ಯುಸಿ ಆಗಿದ್ದಾರೆ. ಹಿಂದಿ ಚಿತ್ರರಂಗದ ಸ್ಟಾರ್ ನಟರ ಸಿನಿಮಾಗಳಿಗೆ ರಶ್ಮಿಕಾ ಅವರು ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ. ‘ಕಾಕ್ಟೇಲ್ 2’ ಸಿನಿಮಾದಲ್ಲಿ ಅವರು ಶಾಹಿದ್ ಕಪೂರ್ ಹಾಗೂ ಕೃತಿ ಸನನ್ ಜೊತೆ ನಟಿಸಲಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ನಟಿ ರಶ್ಮಿಕಾ ಮಂದಣ್ಣ ಅವರಿಗೆ ಹಲವಾರು ಆಫರ್ಗಳು ಸಿಗುತ್ತಿವೆ. ಅವುಗಳಲ್ಲಿ ತಮಗೆ ಬೆಸ್ಟ್ ಎನಿಸಿದ್ದನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಅವರು ಹಲವು ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಮುಂಬರುವ ದಿನಗಳಲ್ಲಿ ಇನ್ನೂ ಚಾಲೆಂಜಿಂಗ್ ಆದಂತಹ ಪಾತ್ರಗಳನ್ನು ಮಾಡಬೇಕು ಎಂಬುದು ರಶ್ಮಿಕಾ ಉದ್ದೇಶ. ಹಾಗಾಗಿ ಅವರೀಗ ಸಖತ್ ಗ್ಲಾಮರಸ್ ಆದಂತಹ ಪಾತ್ರವನ್ನು ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಹೌದು, ‘ಕಾಕ್ಟೇಲ್ 2’ (Cocktail 2) ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ತುಂಬ ಬೋಲ್ಡ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
2012ರಲ್ಲಿ ‘ಕಾಕ್ಟೇಲ್’ ಸಿನಿಮಾ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ಸೈಫ್ ಅಲಿ ಖಾನ್, ಡೈನಾ ಪೆಂಟಿ, ದೀಪಿಕಾ ಪಡುಕೋಣೆ ಅವರು ಮುಖ್ಯ ಪಾತ್ರಗಳನ್ನು ನಿಭಾಯಿಸಿದ್ದರು. ಈಗ ಆ ಸಿನಿಮಾಗೆ ಸೀಕ್ವೆಲ್ ಬರಲಿದೆ. ಆದರೆ ಪಾತ್ರಧಾರಿಗಳು ಬದಲಾಗುತ್ತಿದ್ದಾರೆ. ‘ಕಾಕ್ಟೇಲ್ 2’ ಸಿನಿಮಾದಲ್ಲಿ ಶಾಹಿದ್ ಕಪೂರ್, ಕೃತಿ ಸನನ್ ಮತ್ತು ರಶ್ಮಿಕಾ ಮಂದಣ್ಣ ಅವರು ನಟಿಸಲಿದ್ದಾರೆ.
ಈವರೆಗೂ ರಶ್ಮಿಕಾ ಮಂದಣ್ಣ ಅವರು ಒಂದಷ್ಟು ಬಗೆಯ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದರು. ಈಗ ಅವರು ತುಂಬಾ ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲು ಮನಸ್ಸು ಮಾಡಿದ್ದಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಆಗಿದೆ. ಆದರೆ ಈ ಬಗ್ಗೆ ‘ಕಾಕ್ಟೇಲ್ 2’ ಸಿನಿಮಾ ತಂಡದಿಂದ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಒಟ್ಟಿನಲ್ಲಿ ಈ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಸದ್ಯಕ್ಕೆ ರಶ್ಮಿಕಾ ಮಂದಣ್ಣ, ಕೃತಿ ಸನನ್ ಮತ್ತು ಶಾಹಿದ್ ಕಪೂರ್ ಅವರು ಬೇರೆ ಬೇರೆ ಪ್ರಾಜೆಕ್ಟ್ಗಲ್ಲಿ ಬ್ಯುಸಿ ಆಗಿದ್ದಾರೆ. ಆ ಸಿನಿಮಾಗಳ ಕೆಲಸಗಳು ಮುಗಿದ ಬಳಿಕ ‘ಕಾಕ್ಟೇಲ್ 2’ ಸಿನಿಮಾದ ಶೂಟಿಂಗ್ನಲ್ಲಿ ಅವರು ಭಾಗಿ ಆಗಲಿದ್ದಾರೆ. ವರದಿಗಳ ಪ್ರಕಾರ, ಜುಲೈನಲ್ಲಿ ‘ಕಾಕ್ಟೇಲ್ 2’ ಚಿತ್ರೀಕರಣ ಆರಂಭ ಆಗಲಿದೆ.
ಇದನ್ನೂ ಓದಿ: ಜೂ. ಎನ್ಟಿಆರ್, ಪ್ರಶಾಂತ್ ನೀಲ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಐಟಂ ಡ್ಯಾನ್ಸ್?
ಈ ಸಿನಿಮಾಗೆ ಲವ್ ರಂಜನ್ ಅವರು ನಿರ್ದೇಶನ ಮಾಡಲಿದ್ದಾರೆ. ‘ಮೆಡಾಕ್ ಫಿಲ್ಸ್’ ಮೂಲಕ ನಿರ್ಮಾಣ ಆಗಲಿದೆ. ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ, ಕೃತಿ ಸನನ್ ಅವರ ಕಾಂಬಿನೇಷನ್ ಎಂಬ ಕಾರಣದಿಂದ ಈಗಲೇ ಈ ಸಿನಿಮಾ ಮೇಲೆ ನಿರೀಕ್ಷೆ ಶುರುವಾಗಿದೆ. ಇದಲ್ಲದೇ, ರಶ್ಮಿಕಾ ಮಂದಣ್ಣ ಅವರಿಗೆ ಬಾಲಿವುಡ್ನಿಂದ ಅನೇಕ ಅವಕಾಶಗಳು ಸಿಗುತ್ತಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.








