ಬಾಲಿವುಡ್​ನ ಮತ್ತೋರ್ವ ಸ್ಟಾರ್ ನಟನ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ?; ಕೊಡಗಿನ ಕುವರಿ ಓಟಕ್ಕಿಲ್ಲ ಬ್ರೇಕ್

ರಶ್ಮಿಕಾ ಮಂದಣ್ಣ ಅವರು ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದರು. ಅವರು ಚಿತ್ರರಂಗಕ್ಕೆ ಬಂದು ಕೇವಲ 6 ವರ್ಷಗಳಾಗಿವೆ. ಆಗಲೇ ಅವರು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ.

ಬಾಲಿವುಡ್​ನ ಮತ್ತೋರ್ವ ಸ್ಟಾರ್ ನಟನ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ನಾಯಕಿ?; ಕೊಡಗಿನ ಕುವರಿ ಓಟಕ್ಕಿಲ್ಲ ಬ್ರೇಕ್
ರಶ್ಮಿಕಾ-ಕಾರ್ತಿಕ್ ಆರ್ಯನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 22, 2022 | 5:22 PM

ರಶ್ಮಿಕಾ ಮಂದಣ್ಣ (Rashmika Mandanna) ಅವರು ಈಗ ಗೆಲ್ಲುವ ಕುದರೆ ಆಗಿದ್ದಾರೆ. ಅವರು ಯಾವುದಾದರೂ ಚಿತ್ರಕ್ಕೆ ನಾಯಕಿ ಆದರೆ ಚಿತ್ರ ಶೇ.50 ಗೆದ್ದಂತೆ ಎಂಬ ನಂಬಿಕೆ ನಿರ್ಮಾಪಕರಲ್ಲಿ ಮೂಡಿದೆ. ಇದೇ ಕಾರಣಕ್ಕೋ ಏನೋ ಅವರಿಗೆ ಹಲವು ಪ್ರಾಜೆಕ್ಟ್​ಗಳು ಬರುತ್ತಿವೆ. ಆದರೆ, ರಶ್ಮಿಕಾ ಮಂದಣ್ಣ ಸಿಕ್ಕ ಎಲ್ಲಾ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್​ನ ಮತ್ತೋರ್ವ ಸ್ಟಾರ್ ಹೀರೋನ ಚಿತ್ರಕ್ಕೆ ನಾಯಕಿ ಆಗುತ್ತಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಇದು ರಶ್ಮಿಕಾ ಮಂದಣ್ಣ ಒಪ್ಪಿಕೊಂಡಿರುವ ನಾಲ್ಕನೇ ಬಾಲಿವುಡ್ ಸಿನಿಮಾ (Bollywood Movie) ಅನ್ನೋದು ವಿಶೇಷ.

ರಶ್ಮಿಕಾ ಮಂದಣ್ಣ ಅವರು ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದರು. ಅವರು ಚಿತ್ರರಂಗಕ್ಕೆ ಬಂದು ಕೇವಲ 6 ವರ್ಷಗಳಾಗಿವೆ. ಆಗಲೇ ಅವರು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ತೆಲುಗು, ತಮಿಳು ಹಾಗೂ ಬಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ‘ಮಿಷನ್ ಮಜ್ನು’ ಹಾಗೂ ‘ಗುಡ್​ಬೈ’ ಚಿತ್ರಗಳಲ್ಲಿ ರಶ್ಮಿಕಾ ನಟಿಸಿದ್ದು, ಈ ಚಿತ್ರಗಳು ರಿಲೀಸ್​ಗೆ ರೆಡಿ ಇದೆ. ‘ಮಿಷನ್ ಮಜ್ನು’ ಚಿತ್ರಕ್ಕೆ ಸಿದ್ದಾರ್ಥ್ ಮಲ್ಹೋತ್ರಾ ಹೀರೋ. ‘ಗುಡ್​ಬೈ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್​ ಜತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ.

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಈಗಾಗಲೇ ಆರಂಭಗೊಂಡಿದೆ. ಇವುಗಳ ಮಧ್ಯೆ ಅವರು ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್​ನಲ್ಲಿ ಛಾಪು ಮೂಡಿಸಿರುವ ಕಾರ್ತಿಕ್ ಆರ್ಯನ್ ಚಿತ್ರಕ್ಕೆ ರಶ್ಮಿಕಾ ನಾಯಕಿ ಎಂಬ ಸುದ್ದಿ ಕೇಳಿ ಬಂದಿದೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಇದನ್ನೂ ಓದಿ: ‘ಪುಷ್ಪ 2’ ಚಿತ್ರದ ಮುಹೂರ್ತಕ್ಕೆ ಗೈರಾದ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ; ಕಾರಣ ಏನು?

‘ಭೂಲ್​ ಭುಲಯ್ಯ 2’ ಚಿತ್ರದಿಂದ ಕಾರ್ತಿಕ್ ಆರ್ಯನ್ ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಬಾಲಿವುಡ್ ಸಿನಿಮಾಗಳು ಸೊರಗುತ್ತಿರುವ ಸಂದರ್ಭದಲ್ಲಿ ಈ ಚಿತ್ರ ಕೋಟ್ಯಂತರ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಗೆಲುವಿನ ಅಲೆಯಲ್ಲಿರುವ ಅವರು ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ರಶ್ಮಿಕಾ ಹೀರೋಯಿನ್ ಎನ್ನಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ರಶ್ಮಿಕಾ ಹಾಗೂ ಕಾರ್ತಿಕ್ ಆರ್ಯನ್ ಜೋಡಿ ಚೆನ್ನಾಗಿ ಹೊಂದಲಿದೆ ಎಂಬ ಮಾತು ಅಭಿಮಾನಿಗಳ ವಲಯದಲ್ಲಿ ವ್ಯಕ್ತವಾಗಿದೆ.

Published On - 5:22 pm, Mon, 22 August 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ