AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್​ನಲ್ಲಿ ‘ಛಾವ’ ಸಿನಿಮಾ ಅಬ್ಬರ; 3 ದಿನಕ್ಕೆ 121 ಕೋಟಿ ರೂ. ಕಲೆಕ್ಷನ್

ದೇಶಾದ್ಯಂತ ‘ಛಾವ’ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಕೇವಲ 3 ದಿನಕ್ಕೆ 121 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡುತ್ತಿರುವ ಈ ಸಿನಿಮಾಗೆ ಪ್ರೇಕ್ಷಕರಿಂದ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಈ ಗೆಲುವಿನಿಂದಾಗಿ ರಶ್ಮಿಕಾ ಮಂದಣ್ಣ ಮತ್ತು ವಿಕ್ಕಿ ಕೌಶಲ್ ಅವರ ಬೇಡಿಕೆ ಹೆಚ್ಚಿದೆ.

ಬಾಕ್ಸ್ ಆಫೀಸ್​ನಲ್ಲಿ ‘ಛಾವ’ ಸಿನಿಮಾ ಅಬ್ಬರ; 3 ದಿನಕ್ಕೆ 121 ಕೋಟಿ ರೂ. ಕಲೆಕ್ಷನ್
Vicky Kaushal
ಮದನ್​ ಕುಮಾರ್​
|

Updated on: Feb 17, 2025 | 1:08 PM

Share

ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಕ್ಕಿ ಕೌಶಲ್ ಅವರು ಜೋಡಿಯಾಗಿ ಅಭಿನಯಿಸಿರುವ ‘ಛಾವ’ ಸಿನಿಮಾ ಸೂಪರ್​ ಹಿಟ್ ಆಗಿದೆ. ಫೆಬ್ರವರಿ 14ರಂದು ಈ ಸಿನಿಮಾ ಬಿಡುಗಡೆ ಆಯಿತು. ಐತಿಹಾಸಿಕ ಕಥಾಹಂದರ ಹೊಂದಿರುವ ಈ ಚಿತ್ರದ ಬಗ್ಗೆ ಆರಂಭದಲ್ಲಿ ದೊಡ್ಡ ಕ್ರೇಜ್ ಇರಲಿಲ್ಲ. ಆದರೆ ರಿಲೀಸ್ ಬಳಿಕ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರಿಂದ ಕಲೆಕ್ಷನ್ ಹೆಚ್ಚುತ್ತಾ ಹೋಯಿತು. ಈಗ ಮೂರು ದಿನಕ್ಕೆ ಈ ಸಿನಿಮಾ ಬರೋಬ್ಬರಿ 121 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಸೂಪರ್​ ಹಿಟ್ ಎನಿಸಿಕೊಂಡಿದೆ. ರಶ್ಮಿಕಾ ಮಂದಣ್ಣ ಅವರ ಹಿಟ್ ಸಿನಿಮಾಗಳ ಪಟ್ಟಿಗೆ ಈಗ ‘ಛಾವ’ ಕೂಡ ಸೇರ್ಪಡೆ ಆದಂತೆ ಆಗಿದೆ.

ಮೊದಲ ದಿನ ‘ಛಾವ’ ಸಿನಿಮಾ 33.10 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಸಿನಿಮಾ ನೋಡಿದ ಅನೇಕರು ಪಾಸಿಟಿವ್ ಪ್ರತಿಕ್ರಿಯೆ ನೀಡಿದರು. ಅಂದು ವ್ಯಾಲೆಂಟೈನ್ಸ್ ಡೇ (ಫೆ.14) ಆದ್ದರಿಂದ ಹಲವರು ಚಿತ್ರಮಂದಿರಕ್ಕೆ ಬಂದರು. ಎರಡನೇ ದಿನದ ಕಲೆಕ್ಷನ್ 39.30 ಕೋಟಿ ರೂಪಾಯಿ ಆಯಿತು. ವೀಕೆಂಡ್​ನಲ್ಲಿ ಸಿನಿಮಾದ ಬಗ್ಗೆ ಟಾಕ್ ಜಾಸ್ತಿ ಆಯಿತು. ಅದರ ಫಲವಾಗಿ 3ನೇ ದಿನವಾದ ಭಾನುವಾರ (ಫೆ.16) ಈ ಸಿನಿಮಾ 49.03 ಕೋಟಿ ರೂಪಾಯಿ ಗಳಿಸಿತು.

‘ಛಾವ’ ಸಿನಿಮಾದಲ್ಲಿ ಛತ್ರಪತಿ ಶಂಭಾಜಿ ಮಹಾರಾಜ್ ಜೀವನದ ಕಥೆ ಇದೆ. ಆ ಪಾತ್ರವನ್ನು ವಿಕ್ಕಿ ಕೌಶಲ್ ಅವರು ನಿಭಾಯಿಸಿದ್ದಾರೆ. ಶಂಭಾಜಿ ಪತ್ನಿ ಯೇಸುಬಾಯಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಅವರು ನಟಿಸಿದ್ದಾರೆ. ಲಕ್ಷ್ಮಣ್ ಉಟೇಕರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಮೆಡಾಕ್ ಫಿಲ್ಮ್ಸ್’ ಮೂಲಕ ಈ ಚಿತ್ರ ನಿರ್ಮಾಣ ಆಗಿದ್ದು, ನಿರ್ಮಾಪಕರಿಗೆ ಭರ್ಜರಿ ಲಾಭ ತಂದುಕೊಟ್ಟಿದೆ. ‘ಛಾವ’ ಚಿತ್ರದಿಂದಾಗಿ ವಿಕ್ಕಿ ಕೌಶಲ್ ಅವರ ಚಾರ್ಮ್​ ಹೆಚ್ಚಾಗಿದೆ.

ಇದನ್ನೂ ಓದಿ: ಮಹಾರಾಣಿ ಆಗಿದ್ದಕ್ಕೆ ರಶ್ಮಿಕಾ ಮಂದಣ್ಣಗೆ ಖುಷಿಯೋ ಖುಷಿ

ರಶ್ಮಿಕಾ ಮಂದಣ್ಣ ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಕಳೆದ ವರ್ಷ ಅವರು ನಟಿಸಿದ ‘ಪುಷ್ಪ 2’ ಸಿನಿಮಾ ಬ್ಲಾಕ್ ಬಸ್ಟರ್​ ಹಿಟ್ ಆಯಿತು. ಅದಕ್ಕೂ ಮುನ್ನ 2023ರಲ್ಲಿ ‘ಅನಿಮಲ್’ ಕೂಡ ಭರ್ಜರಿ ಜಯಭೇರಿ ಬಾರಿಸಿತ್ತು. ಈಗ ‘ಛಾವ’ ಸಿನಿಮಾ ಸಹ ಬ್ಲಾಕ್​ ಬಸ್ಟರ್​ ಆಗುವತ್ತ ಹೆಜ್ಜೆ ಇಡುತ್ತಿದೆ. ರಶ್ಮಿಕಾ ಮಂದಣ್ಣ ಅವರು ಲಕ್ಕಿ ಹೀರೋಯಿನ್ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್​ ಕಲೆಕ್ಷನ್​ ಬಗ್ಗೆ ವಿವರ ಇರುವ ಪೋಸ್ಟರ್ ಅನ್ನು ರಶ್ಮಿಕಾ ಮಂದಣ್ಣ ಅವರು ಬಹಳ ಹೆಮ್ಮೆಯಿಂದ ಇನ್​ಸ್ಟಾಗ್ರಾಮ್ ಸೋರಿಯಲ್ಲಿ ಶೇರ್​ ಮಾಡಿದ್ದಾರೆ. ಈ ಗೆಲುವಿಗಾಗಿ ಅವರಿಗೆ ಫ್ಯಾನ್ಸ್ ಅಭಿನಂದನೆ ತಿಳಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?