AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್ ಪತ್ನಿ ಪಾತ್ರದಲ್ಲಿ ರಶ್ಮಿಕಾ? ‘ಅರ್ಜುನ್ ರೆಡ್ಡಿ’ ನಿರ್ದೇಶಕನ ಹೊಸ ಚಿತ್ರದ ಬಗ್ಗೆ ಅಚ್ಚರಿಯ ಮಾಹಿತಿ ಬಹಿರಂಗ

Rashmika Mandanna | Ranbir Kapoor: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ನಟನೆಯ ಬಾಲಿವುಡ್​​ ಚಿತ್ರಗಳು ರಿಲೀಸ್ ಆಗುವ ಮುನ್ನವೇ ಅವರಿಗೆ ದೊಡ್ಡ ಆಫರ್​ಗಳು ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ ರಶ್ಮಿಕಾ ರಣಬೀರ್ ಕಪೂರ್ ಹೊಸ ಚಿತ್ರಕ್ಕೆ ನಾಯಕಿಯಾಗಿದ್ದಾರೆ. ‘ಅರ್ಜುನ್ ರೆಡ್ಡಿ’ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ಚಿತ್ರದ ನಿರ್ದೇಶಕರಾಗಿದ್ದಾರೆ.

ರಣಬೀರ್ ಪತ್ನಿ ಪಾತ್ರದಲ್ಲಿ ರಶ್ಮಿಕಾ? ‘ಅರ್ಜುನ್ ರೆಡ್ಡಿ’ ನಿರ್ದೇಶಕನ ಹೊಸ ಚಿತ್ರದ ಬಗ್ಗೆ ಅಚ್ಚರಿಯ ಮಾಹಿತಿ ಬಹಿರಂಗ
ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್
TV9 Web
| Edited By: |

Updated on: Mar 29, 2022 | 2:52 PM

Share

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್​ನಲ್ಲಿ ಭದ್ರವಾಗಿ ನೆಲೆಯೂರುತ್ತಿದ್ದಾರೆ. ವಾಸ್ತವವಾಗಿ ಅವರು ಹಿಂದಿ ಚಿತ್ರರಂಗಕ್ಕೆ ಇನ್ನಷ್ಟೇ ಪ್ರವೇಶ ಮಾಡಬೇಕಿದೆ. ಆದರೆ ‘ಪುಷ್ಪ: ದಿ ರೈಸ್’ ಚಿತ್ರದ ಹಿಂದಿ ಅವತರಣಿಕೆ ಉತ್ತರ ಭಾರತದಲ್ಲಿ ದೊಡ್ಡ ಯಶಸ್ಸನ್ನು ಕಂಡಿದ್ದು, ರಶ್ಮಿಕಾ ಈಗಾಗಲೇ ಎಲ್ಲರಿಗೂ ಪರಿಚಿತರಾಗಿದ್ದಾರೆ. ರಶ್ಮಿಕಾ ನಟನೆಯ ಮೊದಲ ಬಾಲಿವುಡ್ ಚಿತ್ರ ‘ಮಿಷನ್ ಮಜ್ನು’ ಇನ್ನಷ್ಟೇ ತೆರೆಕಾಣಬೇಕಿದೆ. ಇದರೊಂದಿಗೆ ಅವರ ಎರಡನೇ ಹಿಂದಿ ಚಿತ್ರ ‘ಗುಡ್​ ಬೈ’ ಕೆಲಸಗಳೂ ಸಾಗಿವೆ. ಇದರಲ್ಲಿ ಅಮಿತಾಭ್ ಬಚ್ಚನ್ ಬಣ್ಣಹಚ್ಚುತ್ತಿದ್ದಾರೆ. ಈ ನಡುವೆ ರಶ್ಮಿಕಾರ ಮುಂದಿನ ಚಿತ್ರದ ಬಗ್ಗೆ ಈಗಾಗಲೇ ಹಲವು ಊಹಾಪೋಹಗಳು ಕೇಳಿಬಂದಿದ್ದವು. ಇದಕ್ಕೆ ತಕ್ಕಂತೆ ನಟಿ ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್ ಕಛೇರಿಗೂ ಭೆಟಿ ನೀಡಿದ್ದರು. ಈ ನಡುವೆ ಅಚ್ಚರಿಯ ಬೆಳವಣಿಗೆಗಳಲ್ಲಿ ರಶ್ಮಿಕಾ ಬಾಲಿವುಡ್​ನ ಖ್ಯಾತ ನಟರೋರ್ವರೊಂದಿಗೆ ತೆರೆ ಹಂಚಿಕೊಳ್ಳುವುದು ಪಕ್ಕಾ ಎನ್ನಲಾಗಿದೆ. ಪಿಂಕ್​ವಿಲ್ಲಾ ವರದಿಯ ಪ್ರಕಾರ, ಅರ್ಜುನ್ ರೆಡ್ಡಿ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಹೊಸ ಚಿತ್ರಕ್ಕೆ ರಶ್ಮಿಕಾ ನಾಯಕಿಯಾಗಿದ್ದಾರೆ. ಈ ಚಿತ್ರಕ್ಕೆ ನಾಯಕ ರಣಬೀರ್ ಕಪೂರ್.

ಸಂದೀಪ್ ರೆಡ್ಡಿ ವಂಗ ಹಾಗೂ ರಣಬೀರ್ ಕಪೂರ್ ಕಾಂಬಿನೇಷನ್​ನಲ್ಲಿ ‘ಅನಿಮಲ್’ ಚಿತ್ರ ಈ ಹಿಂದೆಯೇ ಅನೌನ್ಸ್ ಆಗಿತ್ತು. ಚಿತ್ರದ ಕೆಲಸಗಳು ಸಾಗುತ್ತಿದ್ದವು. ಬಾಲಿವುಡ್ ಬೆಡಗಿ ಪರಿಣೀತಿ ಚೋಪ್ರಾ ನಾಯಕಿಯಾಗಿ ಆಯ್ಕೆಯಾಗಿದ್ದರು. ಆದರೆ ಕೆಲವು ಸಮಯದಿಂದ ಅವರು ಚಿತ್ರದಿಂದ ಹೊರನಡೆದಿರುವುದರ ಬಗ್ಗೆ ವರದಿಯಾಗಿತ್ತು; ಆದರೆ ಅಧಿಕೃತವಾಗಿರಲಿಲ್ಲ.

ಪ್ರಸ್ತುತ ಪಿಂಕ್​ವಿಲ್ಲಾ ವರದಿಯ ಪ್ರಕಾರ ಪರಿಣೀತಿ ಚೋಪ್ರಾ ಚಿತ್ರದಿಂದ ಹೊರನಡೆದಿರುವುದು ಖಚಿತವಾಗಿದೆ. ಜತೆಗೆ ಚಿತ್ರಕ್ಕೆ ಹೊಸ ನಾಯಕಿಯ ಆಗಮನವೂ ಆಗಿದೆ. ನಿರ್ಮಾಪಕ ಭೂಷಣ್ ಕುಮಾರ್ ಹಾಗೂ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಚಿತ್ರದಲ್ಲಿ ರಣಬೀರ್ ಜತೆ ತೆರೆಹಂಚಿಕೊಳ್ಳಲು ಹೊಸ ಮುಖವನ್ನು ಹುಡುಕುತ್ತಿದ್ದರಂತೆ.

ಈ ಹಿನ್ನೆಲೆಯಲ್ಲಿ ರಶ್ಮಿಕಾ ಆಯ್ಕೆ ನಡೆದಿದೆ ಎನ್ನುತ್ತಿವೆ ಮೂಲಗಳು. ರಣಬೀರ್ ಹಾಗೂ ರಶ್ಮಿಕಾ ತೆರೆಯ ಮೇಲೆ ಮೋಡಿ ಮಾಡಲಿದೆ ಎಂದು ಚಿತ್ರಂಡ ನಿರೀಕ್ಷಿಸಿದೆ. ಈ ಬಗ್ಗೆ ಚಿತ್ರತಂಡದ ಆಪ್ತ ಮೂಲಗಳು ಮಾಹಿತಿ ನೀಡಿವೆ. ಅಚ್ಚರಿಯೆಂದರೆ ಈ ಚಿತ್ರದಲ್ಲಿ ರಶ್ಮಿಕಾ ಕಾಣಿಸಿಕೊಳ್ಳುತ್ತಿರುವುದು ರಣಬೀರ್ ಪತ್ನಿಯ ಪಾತ್ರದಲ್ಲಿ!

ಭಿನ್ನವಾದ ಕತೆ ಇದಾಗಿದ್ದು, ಅರ್ಜುನ್ ರೆಡ್ಡಿ ಮಾದರಿಯಲ್ಲಿ ಚಿತ್ರ ಇರುವುದಿಲ್ಲ ಎಂದು ಈ ಹಿಂದೆ ನಿರ್ದೇಶಕ ಸಂದೀಪ್ ಹೇಳಿದ್ದರು. ಇದೀಗ ರಶ್ಮಿಕಾ ರಣಬೀರ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಬೇಸಿಗೆಯ ನಂತರ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಸೋಲೇ ಕಾಣದ ನಿರ್ದೇಶಕನ ಮೇಲೆ ಆಲಿಯಾಗೆ ಅಸಮಾಧಾನ? ಅನ್​ಫಾಲೋ ಮಾಡಿ, ಪೋಸ್ಟ್ ಡಿಲೀಟ್ ಮಾಡಿದ್ರಾ ನಟಿ?

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ