AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ F ಪದ ಬಳಕೆ ಮಾಡಿದ ರಶ್ಮಿಕಾ ಮಂದಣ್ಣ; ವೇದಿಕೆಯಲ್ಲೇ ಕ್ಷಮೆ ಕೇಳಿದ ನ್ಯಾಷನಲ್ ಕ್ರಶ್

ನಟಿ ರಶ್ಮಿಕಾ ಮಂದಣ್ಣ ವಿಜಯ್ ದೇವರಕೊಂಡ ಅವರನ್ನು ಮದುವೆಯಾದ ನಂತರ ಅವರ ಮೊದಲ ಸಿನಿಮಾ 'ಕಾಕ್‌ಟೇಲ್ 2' ತೆರೆಗೆ ಬರುತ್ತಿದೆ. ಇದರ ಹಾಡಿನ ಬಿಡುಗಡೆ ಸಮಾರಂಭದಲ್ಲಿ, ಸಹನಟಿ ಕೃತಿ ಸನೂನ್ ಅವರನ್ನು ಹೊಗಳುವ ಬರದಲ್ಲಿ ರಶ್ಮಿಕಾ ಆಕಸ್ಮಿಕವಾಗಿ ಇಂಗ್ಲಿಷ್‌ನ 'F' ಪದ ಬಳಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ರಶ್ಮಿಕಾಗೆ ಮುಜುಗರ ತಂದರೂ, ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ.

ವೇದಿಕೆ ಮೇಲೆ F ಪದ ಬಳಕೆ ಮಾಡಿದ ರಶ್ಮಿಕಾ ಮಂದಣ್ಣ; ವೇದಿಕೆಯಲ್ಲೇ ಕ್ಷಮೆ ಕೇಳಿದ ನ್ಯಾಷನಲ್ ಕ್ರಶ್
ರಶ್ಮಿಕಾ
ರಾಜೇಶ್ ದುಗ್ಗುಮನೆ
|

Updated on: May 18, 2026 | 10:10 AM

Share

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗಷ್ಟೇ ಮದುವೆಯಾಗಿದ್ದಾರೆ. ವಿಜಯ್ ದೇವರಕೊಂಡ ಅವರನ್ನು ಮದುವೆ ಆದ ಬಳಿಕ ಅವರ ನಟನೆಯ ಮೊದಲ ಸಿನಿಮಾ ತೆರೆಗೆ ಬರುತ್ತಿದೆ. ಅದುವೇ ‘ಕಾಕ್‌ಟೇಲ್ 2’. ಹಿಂದಿಯ ಈ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಜೂನ್ 19ರಂದು ರಿಲೀಸ್ ಆಗಲಿರುವ ಈ ಚಿತ್ರದ ಹಾಡಿನ ಬಿಡುಗಡೆ ಸಮಾರಂಭ ಭಾನುವಾರ (ಮೇ 17) ರಾತ್ರಿ ಅದ್ಧೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ಸಹನಟಿ ಕೃತಿ ಸನೂನ್ ಅವರ ಸೌಂದರ್ಯವನ್ನು ಹೊಗಳುವ ಬರದಲ್ಲಿ ರಶ್ಮಿಕಾ ವೇದಿಕೆಯಲ್ಲೇ ಬಾಯಿ ತಪ್ಪಿ ಇಂಗ್ಲಿಷ್‌ನ ‘F’ ಪದ ಬಳಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ವೇದಿಕೆಯಲ್ಲಿ ರಶ್ಮಿಕಾ ಮಂದಣ್ಣ, ಶಾಹಿದ್ ಕಪೂರ್, ಕೃತಿ ಸನೂನ್ ಇದ್ದರು. ಕೃತಿ ಅವರನ್ನು ನೋಡಿ ಅತಿಯಾದ ಉತ್ಸಾಹದಲ್ಲಿದ್ದ ರಶ್ಮಿಕಾ ಮಾತನಾಡಿದರು. ‘ಕಾಕ್‌ಟೇಲ್ 2 ಚಿತ್ರದಲ್ಲಿ ಏನೋ ಒಂದು ವಿಶೇಷತೆ ಇದೆ. ಕೃತಿ ನೀವು ತುಂಬಾ ಹಾಟ್ ಆಗಿ ಕಾಣಿಸುತ್ತಿದ್ದೀರಾ ಎಂಬುದು ಇಡೀ ಜಗತ್ತಿಗೇ ಗೊತ್ತು. ನೀವು ನಿಜಕ್ಕೂ F****** ಹಾಟ್’ ಎಂದುಬಿಟ್ಟರು. ತಾವು ಆಡಿದ ಮಾತು ಅರಿವಿಗೆ ಬರುತ್ತಿದ್ದಂತೆ ಕೈಯಿಂದ ಬಾಯಿ ಮುಚ್ಚಿಕೊಂಡ ರಶ್ಮಿಕಾ, ‘ನನ್ನನ್ನು ಕ್ಷಮಿಸಿ! ಆ ಪದವನ್ನು ಸೈಲೆನ್ಸ್ ಮಾಡಿಬಿಡಿ’ ಎಂದು ವಿನಂತಿಸಿಕೊಂಡರು.

ರಶ್ಮಿಕಾ ಅವರು ತಾವು ಆಡಿದ ಮಾತಿನಿಂದ ಸ್ವಲ್ಪ ಮುಜುಗರವನ್ನು ಎದುರಿಸಿದರು. ಇದನ್ನು ಕಂಡು ಅಲ್ಲಿದ್ದ ಪ್ರೇಕ್ಷಕರು ಮತ್ತು ಮಾಧ್ಯಮದವರು ಜೋರಾಗಿ ನಕ್ಕು, ಚಪ್ಪಾಳೆ ತಟ್ಟಿದರು. ನಂತರ ಸಿನಿಮಾ ಬಗ್ಗೆ ರಶ್ಮಿಕಾ ಮಾತನಾಡಿದರು. ‘ನಾವೆಲ್ಲರೂ ಈ ಚಿತ್ರದಲ್ಲಿ ಅದ್ಭುತವಾಗಿ ನಟಿಸಿದ್ದೇವೆ. ಇಡೀ ಸಿನಿಮಾದಲ್ಲಿ ಪ್ರತಿಯೊಂದು ದೃಶ್ಯವೂ ಮ್ಯಾಜಿಕಲ್ ಆಗಿ ಮೂಡಿಬಂದಿದೆ. ಈಗ ರಿಲೀಸ್ ಆಗಿರುವುದು ಕೇವಲ ಟ್ರೈಲರ್‌ನಂತಹ ತುಣುಕು ಅಷ್ಟೇ. ಮುಂದೆ ಚಿತ್ರದಲ್ಲಿ ನೋಡಲು ತುಂಬಾ ವಿಷಯಗಳಿವೆ’ ಎಂದು ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದರು.

ಇದನ್ನೂ ಓದಿ: ‘ಮಾನಸಿಕ ನೆಮ್ಮದಿ ನೀಡಿದ್ದು ವಿಜಯ್’; ರಶ್ಮಿಕಾ ಮಂದಣ್ಣ ಮನದಾಳದ ಮಾತು

ಹೋಮಿ ಅದಾಜಾನಿಯಾ ‘ಕಾಕ್​​ಟೇಲ್ 2’ ಚಿತ್ರ ನಿರ್ದೇಶನ ಮಾಡಿದ್ದಾರೆ. ನಿರ್ಮಾಪಕ ದಿನೇಶ್ ವಿಜನ್ ಅವರು ಸಿನಿಮಾಗೆ ಬಂಡವಾಳ ಹೂಡಿದ್ದಾರೆ. 2012ರಲ್ಲಿ ಬಂದ ಸೂಪರ್ ಹಿಟ್ ‘ಕಾಕ್‌ಟೇಲ್’ ಚಿತ್ರದ ಮುಂದುವರಿದ ಭಾಗ ಇದಾಗಿದೆ. ಮದುವೆಯ ನಂತರ ಮೊದಲ ಬಾರಿಗೆ ದೊಡ್ಡ ಪರದೆಯ ಮೇಲೆ ಬರಲಿರುವ ರಶ್ಮಿಕಾ ಮಂದಣ್ಣ ಅವರ ಈ ಹೊಸ ಅವತಾರವನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More