ನಟಿ ರಶ್ಮಿಕಾ ಮಂದಣ್ಣ ಅವರು ಭಾರತ ಚಿತ್ರರಂಗದ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಕನ್ನಡ ಚಿತ್ರರಂಗದಿಂದ ವೃತ್ತಿ ಬದುಕು ಆರಂಭಿಸಿದ ಅವರು ಈಗ ಭಾರತೀಯ ಚಿತ್ರರಂಗದಲ್ಲೇ ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಅವರು ಪ್ರತಿ ಚಿತ್ರಕ್ಕೆ ಕೋಟಿ ಕೋಟಿ ರೂಪಾಯಿ ಪಡೆಯುತ್ತಾರೆ. ಈಗ ಅವರು ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಶಾಕ್ ಆಗಿದೆ. ಅವರಿಗೆ ಕಾಲಿಗೆ ಇತ್ತೀಚೆಗೆ ಪೆಟ್ಟಾಗಿದೆ. ಅದಕ್ಕೂ ಇದಕ್ಕೂ ಏನಾದರೂ ಸಂಬಂಧವಿದೆಯೇ? ಆ ಬಗ್ಗೆ ಇಲ್ಲಿದೆ ಮಾಹಿತಿ.
ರಶ್ಮಿಕಾ ಮಂದಣ್ಣ ಅವರು ಹಿಂದಿಯಲ್ಲಿ ‘ಗುಡ್ಬೈ’ ಹಾಗೂ ‘ಮಿಷನ್ ಮಜ್ನು’ ಸಿನಿಮಾಗಳನ್ನು ಮಾಡಿದ್ದಾರೆ. ಇದು ಅವರ ಬಾಲಿವುಡ್ ಜರ್ನಿಗೆ ಸಾಕಷ್ಟು ಮೈಲೇಜ್ ನೀಡಿದೆ. ಹಿಂದಿ ನಿರ್ಮಾಪಕರು ರಶ್ಮಿಕಾ ಅವರ ಕಾಲ್ಶೀಟ್ ಪಡೆಯಲು ರೇಸ್ನಲ್ಲಿ ಇದ್ದಾರೆ. ಅವರು ವಿಕ್ಕಿ ಕೌಶಲ್ ಜೊತೆ ‘ಛಾವಾ’ ಸಿನಿಮಾ ಮಾಡಿದ್ದಾರೆ. ಈ ಚಿತ್ರದಲ್ಲಿ ಮರಾಠ ದೊರೆ ಛತ್ರಪತಿ ಶಿವಾಜಿ ಪುತ್ರ ಸಾಂಭಾಜಿ ಮಹರಾಜನ ಪಾತ್ರದಲ್ಲಿ ವಿಕ್ಕಿ ನಟಿಸಿದ್ದಾರೆ. ನಟಿ ರಶ್ಮಿಕಾ ಅವರು ಸಾಂಭಾಜಿ ಪತ್ನಿ ಮಹಾರಾಣಿ ಯೇಸುಬಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಈ ಪಾತ್ರ ಮಾಡಿ ತೃಪ್ತಿ ಆಗಿದೆ.
‘ಅದೊಂದು ಗೌರವ. ದಕ್ಷಿಣದಿಂದ ಬಂದು ಮಹಾರಾಣಿ ಯೇಸುಬಾಯಿ ಪಾತ್ರವನ್ನು ಮಾಡಿದ್ದೇನೆ. ಇದು ನನ್ನ ಜೀವಿತಾವಧಿಯಲ್ಲಿ ಮಾಡಿದ ವಿಶೇಷ ಕೆಲಸ. ಈ ಸಿನಿಮಾ ಬಳಿಕ ನಿವೃತ್ತಿ ಹೊಂದಲು ನನಗೆ ಖುಷಿ ಇದೆ ಎಂದು ನಿರ್ದೇಶಕ ಲಕ್ಷ್ಮಣ್ ಅವರಿಗೆ ಹೇಳಿದ್ದೇನೆ’ ಎಂದಿದ್ದಾರೆ ರಶ್ಮಿಕಾ.
‘ನಾನು ಅಳುತ್ತಾ ಕೂರುವ ವ್ಯಕ್ತಿ ಅಲ್ಲ. ಆದರೆ, ಈ ಟ್ರೇಲರ್ನ ನನ್ನನ್ನು ಪ್ರಚೋದಿಸಿತು. ವಿಕ್ಕಿ ಕೌಶಲ್ ದೇವರ ರೀತಿ ಕಾಣುತ್ತಿದ್ದಾರೆ. ಅವರು ಛಾವಾ’ ಎಂದು ರಶ್ಮಿಕಾ ಮಂದಣ್ಣ ಅವರು ಟ್ರೇಲರ್ ಲಾಂಚ್ ಈವೆಂಟ್ನಲ್ಲಿ ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ಚಿತ್ರರಂಗದಲ್ಲಿ ಬೇಡಿಕೆ ಹೊಂದಿದ್ದಾರೆ. ಅವರಿಗೆ ಇನ್ನೂ 28 ವರ್ಷ ವಯಸ್ಸು. ಅವರು ಇಷ್ಟು ಬೇಗ ನಿವೃತ್ತಿ ಪಡೆಯೋದು ಅನುಮಾನವೇ. ಅವರು ವಿವಾಹದ ಬಳಿಕ ಈ ಬಗ್ಗೆ ಆಲೋಚಿಸಬಹುದು. ಅಲ್ಲಿಯವರೆಗೆ ಅವರು ಬಣ್ಣದ ಲೋಕದಲ್ಲಿ ತಮ್ಮ ಪ್ರಯಾಣ ಮುಂದುವರಿಸಲಿದ್ದಾರೆ.
ಇದನ್ನೂ ಓದಿ: ಅಭಿಮಾನಿಗಳ ಈ ಒಂದು ಮನವಿಗೆ ನೋ ಹೇಳುವುದೇ ಇಲ್ಲ ರಶ್ಮಿಕಾ ಮಂದಣ್ಣ
‘ಛಾವಾ’ ಫೆಬ್ರವರಿ 14ರಂದು ರಿಲೀಸ್ ಆಗಲಿದೆ. ಲಕ್ಷ್ಮಣ ಉಟೇಕರ್ ಅವರು ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ವಿಕ್ಕಿ, ರಶ್ಮಿಕಾ, ಅಕ್ಷಯ್ ಖನ್ನಾ ಮೊದಲಾದವರು ಬಣ್ಣ ಹಚ್ಚಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.