Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ನಟಿ ರವೀನಾ ಟಂಡನ್​ಗೆ ಮೋದಿ ಪತ್ರ; ಎಮೋಷನಲ್​ ಲೆಟರ್​ ಹಂಚಿಕೊಂಡ ರಮಿಕಾ ಸೇನ್​

ನರೇಂದ್ರ ಮೋದಿ ಅವರು ಬರೆದ ಪತ್ರವನ್ನು ರವೀನಾ ಟಂಡನ್​ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪತ್ರ ಬರೆದಿದ್ದಕ್ಕಾಗಿ ಪ್ರಧಾನಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

‘ಕೆಜಿಎಫ್​ 2’ ನಟಿ ರವೀನಾ ಟಂಡನ್​ಗೆ ಮೋದಿ ಪತ್ರ; ಎಮೋಷನಲ್​ ಲೆಟರ್​ ಹಂಚಿಕೊಂಡ ರಮಿಕಾ ಸೇನ್​
ರವೀನಾ ಟಂಡನ್, ರವಿ ಟಂಡನ್, ನರೇಂದ್ರ ಮೋದಿ
Follow us
TV9 Web
| Updated By: ಮದನ್​ ಕುಮಾರ್​

Updated on: Feb 25, 2022 | 8:05 AM

ನಟಿ ರವೀನಾ ಟಂಡನ್​ (Raveena Tandon) ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುತ್ತಾರೆ. ಬಾಲಿವುಡ್​ ಸಿನಿಮಾಗಳಲ್ಲಿ ನಟಿಸುವ ಮೂಲಕ ದೇಶಾದ್ಯಂತ ಫೇಮಸ್​ ಆಗಿರುವ ಅವರು ಕನ್ನಡದ ಸಿನಿಪ್ರಿಯರಿಗೂ ಪರಿಚಿತರು. ‘ಉಪೇಂದ್ರ’ ಸಿನಿಮಾ ಬಳಿಕ ಅವರು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದಲ್ಲಿ ನಟಿಸುವ ಮೂಲಕ ಮತ್ತೆ ಕನ್ನಡದ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಈ ನಡುವೆ ಅವರ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ರವೀನಾ ಟಂಡನ್​ ತಂದೆ ರವಿ ಟಂಡನ್​ (Ravi Tandon) ಅವರು ಇತ್ತೀಚೆಗೆ ನಿಧನರಾದರು. ಫೆ.11ರಂದು ಕೊನೆಯುಸಿರು ಎಳೆದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅನೇಕರು ಪ್ರಾರ್ಥಿಸಿದ್ದಾರೆ. ರವೀನಾ ಟಂಡನ್​ ಅವರಿಗೆ ಧೈರ್ಯ ತುಂಬಲು ಹಲವಾರು ಸೆಲೆಬ್ರಿಟಿಗಳು ಸಾಂತ್ವನ ಹೇಳಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ರವೀನಾ ಟಂಡನ್​ ಅವರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ‘ಕೆಜಿಎಫ್​ 2’ ನಟಿಗೆ ಅವರು ಸಾಂತ್ವನ ಹೇಳಿದ್ದಾರೆ. ಅಲ್ಲದೇ, ರವಿ ಟಂಡನ್​ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಕೂಡ ನರೇಂದ್ರ ಮೋದಿ ಸ್ಮರಿಸಿಕೊಂಡಿದ್ದಾರೆ. ಈ ಪತ್ರವನ್ನು ರವೀನಾ ಟಂಡನ್ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಾಲಿವುಡ್​ನಲ್ಲಿ ರವಿ ಟಂಡನ್​ ಅವರು ನಿರ್ದೇಶಕನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದರು. ಉಸಿರಾಟದ ಸಮಸ್ಯೆಯಿಂದ ನಿಧನರಾದ ಅವರಿಗೆ 87 ವರ್ಷ ವಯಸ್ಸಾಗಿತ್ತು. ಕುಟುಂಬದವರು 13ನೇ ದಿನ ಕಾರ್ಯಗಳನ್ನು ಮುಗಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬರೆದ ಪತ್ರವು ರವೀನಾ ಟಂಡನ್​ ಕೈ ಸೇರಿದೆ. ಆ ಪತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ರವೀನಾ ಟಂಡನ್​ ಅವರು ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

ನರೇಂದ್ರ ಮೋದಿ ಬರೆದ ಪತ್ರದಲ್ಲಿ ಏನಿದೆ?

‘ತಮ್ಮ ಸೃಜನಶೀಲತೆ ಮತ್ತು ಕೌಶಲಗಳ ಮೂಲಕ ಭಾರತೀಯ ಚಿತ್ರರಂಗವನ್ನು ರವಿ ಟಂಡನ್​ ಅವರು ಶ್ರೀಮಂತಗೊಳಿಸಿದ್ದರು. ಫಿಲ್ಮ್​ ಮೇಕಿಂಗ್​ ಕಲೆಯನ್ನು ಅವರು ಕರಗತ ಮಾಡಿಕೊಂಡಿದ್ದರು. ನಿರ್ದೇಶಕನಾಗಿ ಕೆಲವು ಸ್ಮರಣೀಯ ಸಿನಿಮಾಗಳನ್ನು ಅವರು ನೀಡಿದ್ದರು. ಅವರ ನಿಧನದಿಂದ ಸಿನಿಮಾ ಲೋಕಕ್ಕೆ ತುಂಬಲಾರದ ನಷ್ಟ ಆಗಿದೆ. ರವೀನಾ ಟಂಡನ್​ ಅವರ ವ್ಯಕ್ತಿತ್ವ ಮತ್ತು ಯಶಸ್ಸಿನಲ್ಲಿ ರವಿ ಟಂಡನ್​ ಅವರ ಮಾರ್ಗದರ್ಶನ ಮತ್ತು ಮೌಲ್ಯಗಳು ಕಾಣಿಸುತ್ತವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪತ್ರದಲ್ಲಿ ಬರೆದಿದ್ದಾರೆ.

13ನೇ ದಿನದ ಕಾರ್ಯ ಮುಗಿಸಿದ ರವೀನಾ ಟಂಡನ್​:

‘ಇಂದು ತಂದೆಯ 13ನೇ ದಿನದ ಕಾರ್ಯ. ಈ ದಿನವೇ ಆತ್ಮವು ಎಲ್ಲ ಬಂಧಗಳನ್ನು ಕಳಚಿಕೊಂಡು ಸ್ವರ್ಗದಲ್ಲಿ ನೆಲೆಸುತ್ತದೆ ಎಂಬ ನಂಬಿಕೆ ಇದೆ. ಅವರಿಗಾಗಿ ಪ್ರೀತಿ ತೋರಿಸಿದ ಮತ್ತು ನಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ಅವರೊಬ್ಬರ ಜಂಟಲ್​ಮ್ಯಾನ್​ ನಿರ್ದೇಶಕ ಆಗಿದ್ದರು. ಅವರು ಸದಾ ಪ್ರೀತಿ ಪಾತ್ರರು’ ಎಂದು ರವೀನಾ ಟಂಡನ್​ ಅವರು ಟ್ವೀಟ್​ ಮಾಡಿದ್ದಾರೆ.

‘ಕೆಜಿಎಫ್​ 2’ ಸಿನಿಮಾದಲ್ಲಿ ರಮಿಕಾ ಸೇನ್​ ಪಾತ್ರ:

ನಟಿ ರವೀನಾ ಟಂಡನ್​ ಅವರನ್ನು ಮತ್ತೆ ಕನ್ನಡದ ಸಿನಿಮಾದಲ್ಲಿ ನೋಡಲು ಫ್ಯಾನ್ಸ್​ ಕಾಯುತ್ತಿದ್ದಾರೆ. ಯಶ್​ ನಟನೆಯ, ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದಲ್ಲಿ ರವೀನಾ ಟಂಡನ್​ ಅವರು ರಮಿಕಾ ಸೇನ್​ ಎಂಬ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್​ ಮತ್ತು ಟೀಸರ್​ ಮೂಲಕ ಈ ಪಾತ್ರ ಸಖತ್​ ಹೈಪ್​ ಸೃಷ್ಟಿ ಮಾಡಿದೆ. ರವೀನಾ ಟಂಡನ್​ ಜೊತೆ ಬಾಲಿವುಡ್​ ಸ್ಟಾರ್​ ನಟ ಸಂಜಯ್​ ದತ್​ ಕೂಡ ‘ಕೆಜಿಎಫ್​: 2’ ಚಿತ್ರದಲ್ಲಿ ನಟಿಸಿರುವುದರಿಂದ ಉತ್ತರ ಭಾರತದಲ್ಲಿ ಈ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ:

ಆಮಿರ್​ ಖಾನ್​ ವಿರುದ್ಧ ರವೀನಾ ಟಂಡನ್​ ಸೇಡು; ದಶಕಗಳ ಬಳಿಕ ಬಾಯ್ಬಿಟ್ಟ ‘ಕೆಜಿಎಫ್​ 2’ ನಟಿ

21ನೇ ವಯಸ್ಸಿನಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ದತ್ತು ಪಡೆದ ರವೀನಾ ಟಂಡನ್​ ಆ ವಿಚಾರ ಮುಚ್ಚಿಟ್ಟಿದ್ದೇಕೆ?

VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ