AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಸಿನಿಮಾದ ಅವಧಿ ಬರೋಬ್ಬರಿ 4 ಗಂಟೆ? ರಿಸ್ಕ್ ತೆಗೆದುಕೊಂಡ ಚಿತ್ರತಂಡ

‘ಧುರಂಧರ್’ ಅವಧಿ 3 ಗಂಟೆ 34 ನಿಮಿಷ ಇತ್ತು. ಈಗ ಸೀಕ್ವೆಲ್ ಅವಧಿ 3 ಗಂಟೆ 55 ನಿಮಿಷ ಇರಲಿದೆ. ಈ ಬಗ್ಗೆ ಚಿತ್ರತಂಡದವರು ಇನ್ನೂ ನಿಖರ ಮಾಹಿತಿ ನೀಡಿಲ್ಲ. ಆದರೆ ಎಲ್ಲ ಕಡೆಗಳಲ್ಲಿ ಸುದ್ದಿ ಆಗಿದೆ. ಇಷ್ಟು ದೀರ್ಘ ಅವಧಿಯ ಸಿನಿಮಾವನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂಬ ಕೌತುಕ ಮೂಡಿದೆ.

‘ಧುರಂಧರ್ 2’ ಸಿನಿಮಾದ ಅವಧಿ ಬರೋಬ್ಬರಿ 4 ಗಂಟೆ? ರಿಸ್ಕ್ ತೆಗೆದುಕೊಂಡ ಚಿತ್ರತಂಡ
Ranveer Singh
ಮದನ್​ ಕುಮಾರ್​
|

Updated on: Mar 02, 2026 | 6:04 PM

Share

2025ರಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆದ ‘ಧುರಂಧರ್’ ಸಿನಿಮಾ ನೋಡಿದ ಎಲ್ಲರೂ ಈಗ ಸೀಕ್ವೆಲ್ ನೋಡಲು ಕಾಯುತ್ತಿದ್ದಾರೆ. ‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಸಿನಿಮಾದ ಬಿಡುಗಡೆಗೂ ಮೊದಲು ಅನೇಕ ಇಂಟರೆಸ್ಟಿಂಗ್ ವಿಷಯಗಳು ಕೇಳಿಬರುತ್ತಿವೆ. ರಣವೀರ್ ಸಿಂಗ್ (Ranveer Singh) ಅಭಿಮಾನಿಗಳು ‘ಧುರಂಧರ್ 2’ ನೋಡಲು ಹೋದರೆ ಬರೋಬ್ಬರಿ 4 ಗಂಟೆಗಳ ಕಾಲ ಚಿತ್ರಮಂದಿರದ ಒಳಗೆ ಇರಬೇಕಾಗುತ್ತದೆ! ಯಾಕೆಂದರೆ, ಈ ಸಿನಿಮಾದ ಅವಧಿ (Runtime) ಬರೋಬ್ಬರಿ 3 ಗಂಟೆ 55 ನಿಮಿಷ ಇದೆ ಎನ್ನಲಾಗಿದೆ.

ಸಿನಿಮಾದ ಅವಧಿ ದೀರ್ಘವಾಗಿದ್ದರೆ ಚಿತ್ರತಂಡ ರಿಸ್ಕ್ ತೆಗೆದುಕೊಂಡಂತೆಯೇ ಅರ್ಥ. ‘ಧುರಂಧರ್ 2’ ಸಿನಿಮಾದ ಅವಧಿ 3 ಗಂಟೆ 55 ನಿಮಿಷ ಇದ್ದರೆ ಅಷ್ಟು ದೀರ್ಘ ಕಾಲ ಪ್ರೇಕ್ಷಕರನ್ನು ಹಿಡಿದಿರುವುದು ಸುಲಭದ ಮಾತಲ್ಲ. ಹಾಗಾಗಿ ‘ಧುರಂಧರ್ 2’ ಚಿತ್ರತಂಡ ದೊಡ್ಡ ರಿಸ್ಕ್ ತೆಗೆದುಕೊಳ್ಳುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಚಿತ್ರಮಂದಿರದಲ್ಲಿ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯೆ ನೀಡಿದ್ದಾರೆ ಎಂಬುದನ್ನು ಕಾದುನೋಡಬೇಕು.

ಆದಿತ್ಯ ಧಾರ್ ಅವರು ‘ಧುರಂಧರ್ 2’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ‘ಧುರಂಧರ್ 2’ ಸಿನಿಮಾದಲ್ಲಿ ನಟಿ ಯಾಮಿ ಗೌತಮ್ ಅವರು ಅತಿಥಿ ಪಾತ್ರ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಅದು ಇನ್ನೂ ಖಚಿತವಾಗಿಲ್ಲ.

‘ಧುರಂಧರ್ 2’ ಟೀಸರ್ ಬಿಡುಗಡೆ ಆದಾಗ ಪ್ರೇಕ್ಷಕರಿಗೆ ನಿರಾಸೆ ಆಗಿತ್ತು. ಸದ್ಯದಲ್ಲೇ ಟ್ರೇಲರ್ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ಕ್ರೌರ್ಯ ಇನ್ನಷ್ಟು ಜಾಸ್ತಿ ಇರುವ ಸಾಧ್ಯತೆ ಇದೆ. ಚಿತ್ರದ ಅವಧಿ 3 ಗಂಟೆ 55 ನಿಮಿಷ ಇದೆ ಎಂಬುದನ್ನು ಚಿತ್ರತಂಡ ಇನ್ನೂ ಖಚಿತಪಡಿಸಿಲ್ಲ. ಒಂದು ವೇಳೆ ಅಷ್ಟು ದೀರ್ಘ ಅವಧಿ ಇರುವುದೇ ನಿಜವಾದರೆ ಮಧ್ಯಂತರದ ಬ್ರೇಕ್ ಸೇರಿ ಈ ಸಿನಿಮಾ ನೋಡಿ ಮುಗಿಸಲು 4 ಗಂಟೆಗೂ ಅಧಿಕ ಸಮಯ ಹಿಡಿಯಲಿದೆ.

ಇದನ್ನೂ ಓದಿ: ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್​ನಲ್ಲಿ ಮುನ್ನಡೆ ಸಾಧಿಸಿದ ರಣವೀರ್ ಸಿಂಗ್ ಸಿನಿಮಾ

ಕೇವಲ ಹಿಂದಿಯಲ್ಲಿ ‘ಧುರಂಧರ್’ ಬಿಡುಗಡೆ ಆಗಿತ್ತು. ಆದರೆ ‘ಧುರಂಧರ್ 2’ ಸಿನಿಮಾ ಹಿಂದಿ ಜೊತೆಗೆ ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ರಿಲೀಸ್ ಆಗಲಿದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ ಎರಡೂ ಸಿನಿಮಾಗಳ ನಡುವೆ ಸಖತ್ ಪೈಪೋಟಿ ಏರ್ಪಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು