Rhea Chakraborty: ಸುಶಾಂತ್​ ಸಿಂಗ್​ ರಜಪೂತ್​ಗೆ ಡ್ರಗ್ಸ್​ ನೀಡಿದ್ದೇ ರಿಯಾ ಚಕ್ರವರ್ತಿ: ಎನ್​ಸಿಬಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ

NCB Chargesheet: ಸುಶಾಂತ್​ ಸಿಂಗ್​ ರಜಪೂತ್ ಸಾವಿಗೆ ಸಂಬಂಧಿಸಿದ ಡ್ರಗ್ಸ್​ ಕೇಸ್​ನಲ್ಲಿ ರಿಯಾ ಚಕ್ರವರ್ತಿ ಜತೆ ಇನ್ನೂ 34 ಜನರ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಾಗಿದೆ. ರಿಯಾ ಸಹೋದರ ಶೋವಿಕ್​ ಚಕ್ರವರ್ತಿ ಕೂಡ ಆರೋಪಿ ಆಗಿದ್ದಾರೆ.

Rhea Chakraborty: ಸುಶಾಂತ್​ ಸಿಂಗ್​ ರಜಪೂತ್​ಗೆ ಡ್ರಗ್ಸ್​ ನೀಡಿದ್ದೇ ರಿಯಾ ಚಕ್ರವರ್ತಿ: ಎನ್​ಸಿಬಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ
ರಿಯಾ ಚಕ್ರವರ್ತಿ, ಸುಶಾಂತ್ ಸಿಂಗ್ ರಜಪೂತ್
Follow us
TV9 Web
| Updated By: ಮದನ್​ ಕುಮಾರ್​

Updated on:Jul 13, 2022 | 12:10 PM

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ (Sushant Singh Rajput) ಸಾವಿನ ತನಿಖೆಯಲ್ಲಿ ಹಲವು ಘಟನೆಗಳು ಬಯಲಾಗಿವೆ. ಅಕ್ರಮ ಹಣ ವರ್ಗಾವಣೆ ಮತ್ತು ಮಾದಕ ದ್ರವ್ಯದ ಜಾಲ ಕೂಡ ಸುಶಾಂತ್​ ಸಾವಿನ ಜೊತೆ ತಳುಕು ಹಾಕಿಕೊಂಡಿರುವುದು ತನಿಖೆ ಸಂದರ್ಭದಲ್ಲಿ ಗೊತ್ತಾಯಿತು. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ಎನ್​ಸಿಬಿ (Narcotics Control Bureau) ಈಗ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ಅದರ ಅನ್ವಯ, ನಟಿ ರಿಯಾ ಚಕ್ರವರ್ತಿ (Rhea Chakraborty) ಅವರ ಮೇಲೆ ಹಲವು ಆರೋಪಗಳನ್ನು ಮಾಡಲಾಗಿದೆ. ಸುಶಾಂತ್​ ಸಿಂಗ್​ ರಜಪೂತ್​ಗೆ ಗಾಂಜಾ ಮುಂತಾದ ಮಾದಕ ವಸ್ತುಗಳನ್ನು ಪೂರೈಸಿದ್ದೇ ರಿಯಾ ಚಕ್ರವರ್ತಿ ಎಂದು ಉಲ್ಲೇಖ ಮಾಡಲಾಗಿದೆ. ಇದರಿಂದ ಅವರಿಗೆ ಸಂಕಷ್ಟ ಎದುರಾಗಿದೆ. ಒಂದು ವೇಳೆ ಆರೋಪ ಸಾಬೀತಾದರೆ ರಿಯಾ ಚಕ್ರವರ್ತಿಗೆ 10 ವರ್ಷ ಜೈಲು ಶಿಕ್ಷೆ ಆಗುವ ಸಾಧ್ಯತೆ ಇದೆ.

2020ರ ಜೂನ್​ 14ರಂದು ಸುಶಾಂತ್​ ಸಿಂಗ್​ ರಜಪೂತ್​ ಅವರ ಶವ ಪತ್ತೆ ಆಗಿತ್ತು. ಅವರ ಸಾವು ಅನುಮಾನಾಸ್ಪದವಾಗಿದೆ ಎಂದು ಅನೇಕರು ಅಭಿಪ್ರಾಯ ಪಟ್ಟಿದ್ದರು. ಆಗ ಸುಶಾಂತ್​ ಪ್ರೇಯಸಿ ಆಗಿದ್ದ ರಿಯಾ ಚಕ್ರವರ್ತಿ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದವು. ನಂತರ ತನಿಖೆ ಆರಂಭಿಸಿದ ಸಿಬಿಐ ಅಧಿಕಾರಿಗಳಿಗೆ ಡ್ರಗ್ಸ್​ ಜಾಲದ ಸುಳಿವು ಸಿಕ್ಕಿತ್ತು. ಬಳಿಕ ಎನ್​ಸಿಬಿ ಮತ್ತು ಜಾರಿ ನಿರ್ದೇಶನಾಲಯ ಕೂಡ ತನಿಖೆ ನಡೆಸಿತು.

ಸುಶಾಂತ್​ ಸಿಂಗ್​ ರಜಪೂತ್ ಅವರು ಮಾದಕ ವಸ್ತುಗಳನ್ನು ಸೇವಿಸುತ್ತಿದ್ದರು ಎಂಬ ಆರೋಪ ಇದೆ. ಅವರಿಗೆ ಗಾಂಜಾ ಮುಂತಾದ್ದನ್ನು ಪೂರೈಸಿದ್ದರಲ್ಲಿ ರಿಯಾ ಚಕ್ರವರ್ತಿಯ ಪಾತ್ರ ಇದೆ. ಮಾದಕ ವಸ್ತು ಖರೀದಿಸಿ, ಅದರ ಸೇವೆನೆಗೆ ಕುಮ್ಮಕ್ಕು ನೀಡಿದ್ದೇ ರಿಯಾ ಚಕ್ರವರ್ತಿ ಎಂದು ಎನ್​ಸಿಬಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ರಿಯಾಗೆ ಢವಢವ ಶುರುವಾಗಿದೆ.

ಇದನ್ನೂ ಓದಿ
Image
Drug Case: ಡ್ರಗ್ಸ್ ಪಾರ್ಟಿ ಆಯೋಜನೆ ಆರೋಪ: ಬಾಲಿವುಡ್‌ ನಟ ಸಿದ್ಧಾಂತ್​ ಕಪೂರ್ ಪೊಲೀಸರ ವಶಕ್ಕೆ
Image
Aryan Khan: ಡ್ರಗ್ಸ್​ ಪ್ರಕರಣದಿಂದ ಮುಕ್ತಿ ಸಿಕ್ಕ ಬೆನ್ನಲ್ಲೇ ಅಮೇರಿಕಾಗೆ ತೆರಳಲಿದ್ದಾರಾ ಆರ್ಯನ್ ಖಾನ್?
Image
ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದ ಮಗನ ಜತೆ ಹೆಮ್ಮೆಯಿಂದ ಪೋಸ್​ ಕೊಟ್ಟ ತಂದೆ; ನಗೆಪಾಟಲಿನ ವಿಡಿಯೋ ವೈರಲ್​
Image
ಬಾಲಿವುಡ್​ Drugs ದಂಧೆ ಆರೋಪ ಪ್ರಕರಣ: ಮೂವರು ನಟಿಯರಿಗೆ NCB ಸಮನ್ಸ್

ಈ ಹೈ-ಪ್ರೊಫೈಲ್​ ಕೇಸ್​ನಲ್ಲಿ ರಿಯಾ ಚಕ್ರವರ್ತಿ ಮಾತ್ರವಲ್ಲದೇ ಇನ್ನೂ 34 ಜನರ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಾಗಿದೆ. ರಿಯಾ ಚಕ್ರವರ್ತಿ ಸಹೋದರ ಶೋವಿಕ್​ ಚಕ್ರವರ್ತಿ ಕೂಡ ಆರೋಪಿ ಆಗಿದ್ದಾರೆ. ಸುಶಾಂತ್​ಗೆ ಡ್ರಗ್ಸ್​ ನೀಡಿದ್ದರಲ್ಲಿ ಶೋವಿಕ್​ ಕೈವಾಡ ಸಹ ಇದೆ ಎಂದು ಉಲ್ಲೇಖಿಸಲಾಗಿದೆ.

ಹಲವು ಬಾರಿ ಗಾಂಜಾ ತರಿಸಿದ್ದ ರಿಯಾ ಚಕ್ರವರ್ತಿ!

ವಿಶೇಷ ನ್ಯಾಯಾಲಯದಲ್ಲಿ ಎನ್​ಸಿಬಿ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ಅದರ ಪ್ರಕಾರ, ರಿಯಾ ಚಕ್ರವರ್ತಿ ಅವರು ಒಂದಲ್ಲ ಎರಡಲ್ಲ, ಅನೇಕ ಬಾರಿ ಗಾಂಜಾ ತರಿಸಿಕೊಂಡಿದ್ದರು ಎಂಬುದು ತಿಳಿದುಬಂದಿದೆ. ಎನ್​ಡಿಪಿಎಸ್​ ಕಾಯ್ದೆಯ ಹಲವು ಸೆಕ್ಷನ್​ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ ರಿಯಾ ಚಕ್ರವರ್ತಿ 10ನೇ ಆರೋಪಿ ಆಗಿದ್ದಾರೆ.

Published On - 11:49 am, Wed, 13 July 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ