ಸುಶಾಂತ್ ಸಿಂಗ್ ಸಾವಿನ ಕೇಸ್​ನಲ್ಲಿ ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್; ದೇವಸ್ಥಾನಕ್ಕೆ ಬಂದ ನಟಿ

|

Updated on: Mar 24, 2025 | 4:20 PM

ರಿಯಾ ಚಕ್ರವರ್ತಿ ಮೇಲೆ ಕೇಳಿಬಂದಿದ್ದ ಆರೋಪಗಳು ಒಂದೆರಡಲ್ಲ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ರಿಯಾ ಅವರನ್ನೇ ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿತ್ತು. ಆದರೆ ಈಗ ಸಿಬಿಐ ಅಂತಿಮ ತನಿಖಾ ವರದಿ ಸಲ್ಲಿಸಿದ್ದು, ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಕ್ಲೀನ್ ಚಿಟ್ ಸಿಕ್ಕ ಬಳಿಕ ರಿಯಾ ಚಕ್ರವರ್ತಿ ಅವರು ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಕೇಸ್​ನಲ್ಲಿ ರಿಯಾ ಚಕ್ರವರ್ತಿಗೆ ಕ್ಲೀನ್ ಚಿಟ್; ದೇವಸ್ಥಾನಕ್ಕೆ ಬಂದ ನಟಿ
Sushant Singh Rajput, Rhea Chakraborty
Follow us on

ನಟಿ ರಿಯಾ ಚಕ್ರವರ್ತಿ (Rhea Chakraborty) ಅವರು ನಿಟ್ಟುಸಿರು ಬಿಟ್ಟಿದ್ದಾರೆ. ಸುಶಾಂತ್ ಸಿಂಗ್ ರಜಪೂತ್​ (Sushant Singh Rajput) ಸಾವಿನ ಕೇಸ್​ನಲ್ಲಿ ರಿಯಾ ಚಕ್ರವರ್ತಿ ಮೇಲೆ ಹಲವು ಆರೋಪಗಳನ್ನು ಮಾಡಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಸಿಬಿಐ ಈಗ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಈ ವರದಿಯಲ್ಲಿ ರಿಯಾ ಚಕ್ರವರ್ತಿ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಸುಶಾಂತ್ ಸಾವಿನಲ್ಲಿ ರಿಯಾ ಚಕ್ರವರ್ತಿ ಪಾತ್ರ ಇಲ್ಲ ಎಂದು ಹೇಳಲಾಗಿದೆ. ಆದ್ದರಿಂದ ರಿಯಾ ಚಕ್ರವರ್ತಿ ಅವರಿಗೆ ಖುಷಿ ಆಗಿದೆ. ಅವರ ಕುಟುಂಬದರು, ಆಪ್ತರು ಹಾಗೂ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಕ್ಲೀನ್ ಚಿಟ್ (Clean Chit) ಸಿಕ್ಕ ಕೂಡಲೇ ರಿಯಾ ಚಕ್ರವರ್ತಿ ಅವರು ದೇವರ ದರ್ಶನ ಪಡೆದಿದ್ದಾರೆ.

ಸೋಮವಾರ (ಮಾರ್ಚ್​ 24) ರಿಯಾ ಚಕ್ರವರ್ತಿ ಅವರು ಮುಂಬೈನ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅವರ ಜೊತೆ ತಂದೆ ಇಂದ್ರಜಿತ್ ಚಕ್ರವರ್ತಿ, ಸಹೋದರ ಶೋವಿಕ್ ಚಕ್ರವರ್ತಿ ಕೂಡ ದೇವಸ್ಥಾನಕ್ಕೆ ಬಂದಿದ್ದಾರೆ. ಈ ವೇಳೆ ಅವರು ಪಾಪರಾಜಿ ಕ್ಯಾಮೆರಾ ಕಂಡು ಕೈ ಮುಗಿದಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ. ಕ್ಲೀನ್ ಚಿಟ್ ಸಿಕ್ಕಿದ್ದರಿಂದ ಈ ಕುಟುಂಬದವರ ಮುಖದಲ್ಲಿ ನಗು ಮೂಡಿದೆ.

ಇದನ್ನೂ ಓದಿ
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಬಾಲಿವುಡ್ ನಟ ಸುಶಾಂತ್ ರಜಪೂತ್ ಜೊತೆ ನಟಿ ರಿಯಾ ಚಕ್ರವರ್ತಿ ಲಿವ್-ಇನ್-ರಿಲೇಷನ್​ಶಿಪ್​ನಲ್ಲಿ ಇದ್ದರು. ಇಬ್ಬರ ಆಪ್ತವಾದ ಫೋಟೋಗಳು ವೈರಲ್ ಆಗಿದ್ದವು. ಆದರೆ ಸುಶಾಂತ್ ಸಿಂಗ್ ರಜಪೂತ್ ನಿಧನದ ಬಳಿಕ ರಿಯಾ ಚಕ್ರವರ್ತಿ ಮೇಲೆ ಅನುಮಾನ ಮೂಡಿತ್ತು. ಸುಶಾಂತ್ ಆತ್ಮಹತ್ಯೆಗೆ ರಿಯಾ ಚಕ್ರವರ್ತಿಯೇ ಪ್ರಚೋದನೆ ನೀಡಿದ್ದಾರೆ ಎಂದು ನಟನ ತಂದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಿಯಾ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಲಾಗಿತ್ತು.

ಇದನ್ನೂ ಓದಿ: ಬೈಕರ್ ಆದ ಸುಶಾಂತ್ ಸಿಂಗ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ

ರಿಯಾ ಚಕ್ರವರ್ತಿ ಅವರು ಎಲ್ಲರ ಟೀಕೆಗೆ ಗುರಿ ಆಗಿದ್ದರು. ಸುಶಾಂತ್ ಅವರ ಬ್ಯಾಂಕ್ ಖಾತೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಹಣವನ್ನು ರಿಯಾ ಪಡೆದುಕೊಂಡಿದ್ದಾರೆ ಎಂಬ ಆರೋಪ ಕೂಡ ಎದುರಾಗಿತ್ತು. ಡ್ರಗ್ಸ್ ಪೂರೈಕೆ, ಅಕ್ರಮ ಹಣ ಸಾಗಾಣಿಕೆ ಸೇರಿದಂತೆ ಹಲವು ಆಯಾಮದಿಂದಲೂ ತನಿಖೆ ನಡೆಸಲಾಗಿತ್ತು. ಈಗ ಸಿಬಿಐ ತನಿಖೆ ಪೂರ್ಣಗೊಂಡಿದ್ದು, ಸುಶಾಂತ್ ನಿಧನದಲ್ಲಿ ರಿಯಾ ಕೈವಾಡ ಇಲ್ಲ ಎಂದು ವರದಿ ಸಲ್ಲಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:16 pm, Mon, 24 March 25