ರಿಷಬ್ ಶೆಟ್ಟಿಗೆ ಖುಲಾಯಿಸಿದ ಅದೃಷ್ಟ, ‘ಲಗಾನ್’ ನಿರ್ದೇಶಕನ ಸಿನಿಮಾದಲ್ಲಿ ನಾಯಕ?

Kantara: 'ಕಾಂತಾರ' ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಅವರ ಅದೃಷ್ಟ ಖುಲಾಯಿಸಿದೆ. ಬಾಲಿವುಡ್​ನ ಬಹುದೊಡ್ಡ ನಿರ್ದೇಶಕರೊಬ್ಬರು, ರಿಷಬ್​ರನ್ನು ತಮ್ಮ ಸಿನಿಮಾಕ್ಕೆ ಆಯ್ಕೆ ಮಾಡಿದ್ದಾರೆ. 'ಕಾಂತಾರ 2' ಸಿನಿಮಾದ ಬಳಿಕ ರಿಷಬ್​ರ ಹಿಂದಿ ಸಿನಿಮಾ ಆರಂಭವಾಗಲಿದೆ.

ರಿಷಬ್ ಶೆಟ್ಟಿಗೆ ಖುಲಾಯಿಸಿದ ಅದೃಷ್ಟ, 'ಲಗಾನ್' ನಿರ್ದೇಶಕನ ಸಿನಿಮಾದಲ್ಲಿ ನಾಯಕ?
ರಿಷಬ್ ಶೆಟ್ಟಿ
Follow us
ಮಂಜುನಾಥ ಸಿ.
|

Updated on: Sep 03, 2023 | 10:13 PM

ಒಂದು ಸಿನಿಮಾ ಸಾಕು ಅದೃಷ್ಟ ಖುಲಾಯಿಸಲು. ರಿಷಬ್ ಶೆಟ್ಟಿ (Rishab Shetty) ಪಾಲಿಗೆ ಆ ಒಂದು ಸಿನಿಮಾ ‘ಕಾಂತಾರ’. ನಾಯಕನಾಗಿ ನಟಿಸಿ, ನಿರ್ದೇಶಕ ಮಾಡಿದ್ದ ‘ಕಾಂತಾರ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ಕರ್ನಾಕಟದಲ್ಲಷ್ಟೆ ಪರಿಚಿತವಾಗಿದ್ದ ರಿಷಬ್ ರ ಪ್ರತಿಭೆಯನ್ನು ವಿಶ್ವಮಟ್ಟದಲ್ಲಿ ಪಸರಿಸಿದೆ. ರಾಷ್ಟ್ರಮಟ್ಟದಲ್ಲಿ ಗೌರವ ಆದರಗಳನ್ನು ಕೊಡಿಸಿದೆ. ಹಲವು ಹೊಸ ಅವಕಾಶಗಳನ್ನು ಸಹ ತಂದು ಕೊಡುತ್ತಿದೆ. ‘ಕಾಂತಾರ’ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ (Pan India) ಸ್ಟಾರ್ ಆಗಿರುವ ರಿಷಬ್, ಈಗ ಬಾಲಿವುಡ್​ನ ಬಹು ಜನಪ್ರಿಯ ನಿರ್ದೇಶಕರ ಸಿನಿಮಾದಲ್ಲಿ ನಾಯಕನಾಗುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಆಸ್ಕರ್​ಗೆ ನಾಮಿನೇಟ್ ಆಗಿದ್ದ ಭಾರತದ ಮೂರು ಸಿನಿಮಾಗಳಲ್ಲಿ ಒಂದಾದ ‘ಲಗಾನ್’ ಅನ್ನು ನಿರ್ದೇಶನ ಮಾಡಿರುವ ಅಶುತೋಶ್ ಗೋವರಿಕರ್ ಅವರ ಮುಂದಿನ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಾಯಕನಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಕುರಿತಾಗಿ ಈಗಾಗಲೇ ಎರಡು-ಮೂರು ಸುತ್ತಿನ ಮಾತುಕತೆಯೂ ನಡೆದಿದ್ದು, ‘ಕಾಂತಾರ 2’ ಸಿನಿಮಾದ ಬಳಿಕ ರಿಷಬ್​ ಹಾಗೂ ಅಶುತೋಷ್​ರ ಸಿನಿಮಾ ಪ್ರಾರಂಭವಾಗಲಿದೆ.

ಅಶುತೋಷ್ ಗೋವರಿಕರ್, ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಕತೆ ರೆಡಿ ಮಾಡಿಕೊಂಡಿದ್ದಾರೆ. ಸಿನಿಮಾದ ಕತೆಯು ಧಾರ್ಮಿಕ ಆಚರಣೆ ವಿಚಾರಗಳನ್ನು ಒಳಗೊಂಡಿದೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ರಿಷಬ್ ಶೆಟ್ಟಿಯನ್ನು ಈ ಸಿನಿಮಾಕ್ಕೆ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಸಿನಿಮಾದಲ್ಲಿ ಇನ್ನೂ ಕೆಲವು ಪ್ರಮುಖ ನಟರು ಇರಲಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್ ನಟಿಯನ್ನೇ ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಇದನ್ನೂ ಓದಿ:ಗೆಳೆಯನ ಸಪ್ತಸಾಗರದಾಚೆ ಎಲ್ಲೋ ಸಿನಿಮಾ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ

‘ಲಗಾನ್’ ಸಿನಿಮಾ ಮಾತ್ರವೇ ಅಲ್ಲದೆ ಹೃತಿಕ್ ರೋಷನ್-ಐಶ್ವರ್ಯಾ ರೈ ನಟಿಸಿರುವ ಐತಿಹಾಸಿಕ ಸಿನಿಮಾ ‘ಜೋಧಾ ಅಕ್ಬರ್’, ಶಾರುಖ್ ಖಾನ್ ನಟನೆಯ ‘ಸ್ವದೇಸ್’ ಸಿನಿಮಾ. ಹೃತಿಕ್ ನಟನೆಯ ‘ಮೊಹಂಜೊದಾರೋ’, ‘ಪಾಣಿಪತ್’ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅಶುತೋಷ್ ಗೋವರಿಕರ್, ಭಾರತದ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರು. ಅಶುತೋಷ್ ಅವರ ಸಿನಿಮಾಗಳಲ್ಲಿ ನಟಿಸಲು ಬಾಲಿವುಡ್​ನ ದೊಡ್ಡ ನಟರೇ ಸಾಲುಗಟ್ಟಿ ನಿಂತಿದ್ದಾರೆ. ಅದರಲ್ಲಿ ರಿಷಬ್​ಗೆ ಆ ಅವಕಾಶ ಲಭಿಸಿದೆ.

ರಿಷಬ್ ಶೆಟ್ಟಿ ಪ್ರಸ್ತುತ ‘ಕಾಂತಾರ 2’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ. ಸಿನಿಮಾದ ಕತೆ ಫೈನಲ್ ಆಗಿದ್ದು, ಪಾತ್ರಗಳ ಆಯ್ಕೆ, ಲೊಕೇಶನ್ ಇನ್ನಿತರೆಗಳು ಚಾಲ್ತಿಯಲ್ಲಿದೆ. ‘ಕಾಂತಾರ 2’ ಸಿನಿಮಾವನ್ನು ಭಾರಿ ಬಜೆಟ್​ನಲ್ಲಿ ಚಿತ್ರೀಕರಿಸಲಾಗುತ್ತದೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ವಿವಿಧ ಭಾಷೆಯ ದೊಡ್ಡ ನಟರು ಸಹ ನಟಿಸಲಿದ್ದಾರೆ. ಶೀಘ್ರವೇ ಚಿತ್ರೀಕರಣ ಪ್ರಾರಂಭವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ