AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜಾ ಶಿವಾಜಿ’ ಪಾತ್ರದಲ್ಲಿ ಅಬ್ಬರಿಸಿದ ರಿತೇಶ್ ದೇಶ್‌ಮುಖ್; ಟೀಸರ್ ಹೇಗಿದೆ ನೋಡಿ

ಛತ್ರಪತಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ನಟ ರಿತೇಶ್ ದೇಶ್​ಮುಖ್ ಅವರು ಕಾಣಿಸಿಕೊಂಡಿದ್ದಾರೆ. ಟೀಸರ್ ನೋಡಿದ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಈ ಸಿನಿಮಾದಲ್ಲಿ ಸಂಜಯ್ ದತ್ ಅವರು ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ. ಟೀಸರ್ ರಿಲೀಸ್ ಆದ ಬಳಿಕ ಸಿನಿಮಾ ಮೇಲಿನ ನಿರೀಕ್ಷೆ ಡಬಲ್ ಆಗಿದೆ.

‘ರಾಜಾ ಶಿವಾಜಿ’ ಪಾತ್ರದಲ್ಲಿ ಅಬ್ಬರಿಸಿದ ರಿತೇಶ್ ದೇಶ್‌ಮುಖ್; ಟೀಸರ್ ಹೇಗಿದೆ ನೋಡಿ
Riteish Deshmukh
ಮದನ್​ ಕುಮಾರ್​
|

Updated on:Apr 01, 2026 | 10:28 PM

Share

ಮರಾಠ ಸಾಮ್ರಾಜ್ಯದ ಸಂಸ್ಥಾಪಕ, ಭಾರತದ ಶ್ರೇಷ್ಠ ಯೋಧ ರಾಜ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಆಧಾರಿತ ಬಹುನಿರೀಕ್ಷಿತ ‘ರಾಜಾ ಶಿವಾಜಿ’ (Raja Shivaji) ಸಿನಿಮಾದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ರಿತೇಶ್ ದೇಶ್‌ಮುಖ್ (Riteish Deshmukh) ಅವರು ಈ ಐತಿಹಾಸಿಕ ಕಥಾಹಂದರದ, ಸಾಹಸ ಪ್ರಧಾನ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅಲ್ಲದೇ ಮುಖ್ಯ ಭೂಮಿಕೆಯಲ್ಲಿ ಅವರೇ ನಟಿಸುತ್ತಿದ್ದಾರೆ. 2 ನಿಮಿಷ 31 ಸೆಕೆಂಡುಗಳ ಈ ಟೀಸರ್ ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದೆ.

ಸಂಜಯ್ ದತ್ ಈ ಸಿನಿಮಾದಲ್ಲಿ ಕ್ರೂರ ಅಫ್ಜಲ್ ಖಾನ್ ಪಾತ್ರದಲ್ಲಿ ಕಾಣಿಸಿಕೊಂಡರೆ, ಮಹೇಶ್ ಮಾಂಜ್ರೇಕರ್ ಲಖೂಜಿ ಜಾಧವ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ನಟ ಅಭಿಷೇಕ್ ಬಚ್ಚನ್ ಅವರು ಸಂಭಾಜಿ ಶಹಾಜಿ ಭೋಸಲೆ ಅವರ ಪಾತ್ರದಲ್ಲಿ ಮಿಂಚಿದ್ದಾರೆ. ವಿದ್ಯಾ ಬಾಲನ್, ಜೆನಿಲಿಯಾ ದೇಶ್‌ಮುಖ್, ಭಾಗ್ಯಶ್ರೀ, ಫರ್ದೀನ್ ಖಾನ್, ಬೋಮನ್ ಇರಾನಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಈ ಚಿತ್ರದ ಮತ್ತೊಂದು ದೊಡ್ಡ ಹೈಲೈಟ್ ಎಂದರೆ ಸಲ್ಮಾನ್ ಖಾನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಶಿವಾಜಿ ಮಹಾರಾಜರ ಅತ್ಯಂತ ನಂಬಿಕಸ್ತ ಕಮಾಂಡರ್ ಆಗಿದ್ದ ಜೀವಾ ಮಹಾಲಾ ಪಾತ್ರದಲ್ಲಿ ಸಲ್ಮಾನ್ ಖಾನ್ ಅಬ್ಬರಿಸಲಿದ್ದಾರೆ. ರಿತೇಶ್ ದೇಶ್‌ಮುಖ್ ಅವರ ಜೊತೆಗಿನ ಸ್ನೇಹಕ್ಕಾಗಿ ಸಲ್ಮಾನ್ ಈ ಚಿತ್ರದಲ್ಲಿ ನಟಿಸಲು ತಕ್ಷಣ ಒಪ್ಪಿಕೊಂಡಿದ್ದಾರೆ.

‘ರಾಜಾ ಶಿವಾಜಿ’ ಸಿನಿಮಾದ ಟೀಸರ್:

ಸ್ವರಾಜ್ಯದ ಅಡಿಪಾಯ ಹಾಕಲು ಶಿವಾಜಿ ಮಹಾರಾಜರು ನಡೆಸಿದ ಹೋರಾಟದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ‘ಜಿಯೋ ಸ್ಟುಡಿಯೋಸ್’ ಮತ್ತು ‘ಮುಂಬೈ ಫಿಲ್ಮ್ ಕಂಪನಿ’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮರಾಠಿ, ಹಿಂದಿ ಮತ್ತು ತೆಲುಗು ಭಾಷೆಯಲ್ಲಿ ಮೇ 1ರಂದು ಸಿನಿಮಾ ರಿಲೀಸ್ ಆಗಲಿದೆ. ಟೀಸರ್ ನೋಡಿದ ಬಳಿಕ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ಶವವಾಗಿ ಪತ್ತೆಯಾದ ಡ್ಯಾನ್ಸರ್; ರಿತೇಶ್ ದೇಶಮುಖ್ ಸಿನಿಮಾ ಶೂಟಿಂಗ್ ವೇಳೆ ಅವಘಡ

ಇನ್ನೊಂದೆಡೆ ನಟ ರಿಷಬ್ ಶೆಟ್ಟಿ ಅವರು ಕೂಡ ಶಿವಾಜಿ ಮಹಾರಾಜ್ ಜೀವನಾಧಾರಿತ ಇನ್ನೊಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ ಆ ಸಿನಿಮಾ ಮುಂದಿನ ವರ್ಷ ಬಿಡುಗಡೆ ಆಗಲಿದೆ. 2025ರಲ್ಲಿ ಛತ್ರಪತಿ ಸಂಭಾಜಿ ಮಹಾರಾಜರ ಜೀವನವನ್ನು ಆಧರಿಸಿದ ‘ಛಾವ’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಅಭಿನಯಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:28 pm, Wed, 1 April 26

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?