AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಬ್ಯುಸಿ; ‘ರಾಮಾಯಣ’ ಶೂಟಿಂಗ್ ಯಾವಾಗ?

ಬಾಲಿವುಡ್​ನಲ್ಲಿ ‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿದೆ. ಪಾತ್ರವರ್ಗದಲ್ಲಿ ರಣಬೀರ್ ಕಪೂರ್​, ಸಾಯಿ ಪಲ್ಲವಿ ಜೊತೆ ಯಶ್ ಕೂಡ ಇದ್ದಾರೆ. ಸದ್ಯಕ್ಕಂತೂ ಯಶ್ ಅವರ ಪೂರ್ತಿ ಗಮನ ‘ಟಾಕ್ಸಿಕ್’ ಸಿನಿಮಾದ ಮೇಲಿದೆ. ಹಾಗಾದರೆ ಅವರು ‘ರಾಮಾಯಣ’ ಶೂಟಿಂಗ್ ಮಾಡುವುದು ಯಾವಾಗ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ..

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಬ್ಯುಸಿ; ‘ರಾಮಾಯಣ’ ಶೂಟಿಂಗ್ ಯಾವಾಗ?
Yash
ಮದನ್​ ಕುಮಾರ್​
|

Updated on: Jan 28, 2025 | 10:45 PM

Share

‘ರಾಕಿಂಗ್ ಸ್ಟಾರ್’ ಯಶ್ ಅವರು ಬಹುಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಬಾಲಿವುಡ್​ನಲ್ಲಿ ಅವರಿಗೆ ಸಖತ್ ಬೇಡಿಕೆ ಇದೆ. ಈಗ ಅವರು ‘ಟಾಕ್ಸಿಕ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಯಶ್ ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ದೊಡ್ಡದು. ಅವರ ಬಗ್ಗೆ ಪ್ರತಿಯೊಂದು ಅಪ್​ಡೇಟ್​ ತಿಳಿಯಲು ಅಭಿಮಾನಿಗಳು ಕಾಯುತ್ತಲೇ ಇರುತ್ತಾರೆ. ಬಾಲಿವುಡ್​ನ ಬಹುನಿರೀಕ್ಷಿತ ಪ್ರಾಜೆಕ್ಟ್​ ‘ರಾಮಾಯಣ’ದಲ್ಲೂ ಯಶ್ ನಟಿಸಲಿದ್ದು, ಈ ಸಿನಿಮಾದ ಶೂಟಿಂಗ್ ಬಗ್ಗೆ ಒಂದು ಮಾಹಿತಿ ಕೇಳಿಬಂದಿದೆ.

ಯಶ್ ಅವರು ‘ರಾಮಾಯಣ’ ಸಿನಿಮಾದಲ್ಲಿ ರಾವಣದ ಪಾತ್ರ ಮಾಡಲಿದ್ದಾರೆ. ಇದು ನೆಗೆಟಿವ್ ಪಾತ್ರ ಆದ್ದರಿಂದ ಅಭಿಮಾನಿಗಳಿಗೆ ಹೆಚ್ಚಿನ ನಿರೀಕ್ಷೆ ಮೂಡಿದೆ. ಆರಂಭದಲ್ಲಿ ಈ ವಿಚಾರ ಗೌಪ್ಯವಾಗಿತ್ತು. ನಂತರ ಸ್ವತಃ ಯಶ್ ಅವರು ಒಂದು ಸಂದರ್ಶನದಲ್ಲಿ ಖಚಿತಪಡಿಸಿದರು. ರಾವಣನ ಪಾತ್ರ ಮಾಡಲು ತಾವು ಉತ್ಸುಕರಾಗಿರುವುದಾಗಿ ಹೇಳಿದರು. ಹಾಗಾದರೆ ಯಶ್ ಅವರು ಈ ಸಿನಿಮಾದ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವುದು ಯಾವಾಗ?

ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗಿದೆ. ಫಿಲ್ಮ್​ಫೇರ್​ ವರದಿ ಪ್ರಕಾರ, ಯಶ್ ಅವರು ಮಾರ್ಚ್​ ತಿಂಗಳಲ್ಲಿ ‘ರಾಮಾಯಣ’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿಯಾಗಲಿದ್ದಾರೆ. ಅವರ ಲುಕ್ ಹೇಗಿರಲಿದೆ ಎಂಬುದನ್ನು ತಿಳಿಯುವ ಕಾತರ ಅಭಿಮಾನಿಗಳಿಗೆ ಇದೆ. ಈ ಮೊದಲು ‘ರಾಮಾಯಣ’ ಶೂಟಿಂಗ್ ಸೆಟ್​ನಿಂದ ಕೆಲವು ಫೋಟೋಗಳು ಲೀಕ್ ಆಗಿದ್ದವು. ಹಾಗಾಗಿ ಚಿತ್ರತಂಡದವರು ಈಗ ಹೆಚ್ಚಿನ ಜಾಗ್ರತೆ ವಹಿಸಬೇಕಿದೆ.

ಇದನ್ನೂ ಓದಿ: ‘ಯಶ್ ನನ್ನ ಸ್ನೇಹಿತ’: ದುಬೈನಲ್ಲಿ ಕೂಗಿ ಹೇಳಿದ ಶಾರುಖ್ ಖಾನ್; ವಿಡಿಯೋ ವೈರಲ್

‘ರಾಮಾಯಣ’ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್ ಅವರು ನಟಿಸುತ್ತಿದ್ದಾರೆ. ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ಅವರು ಕಾಣಿಸಿಕೊಳ್ಳಲಿದ್ದಾರೆ. ‘ದಂಗಲ್’ ಖ್ಯಾತಿಯ ನಿತೇಶ್ ತಿವಾರಿ ಅವರು ‘ರಾಮಾಯಣ’ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳುತ್ತಿದ್ದಾರೆ. 2 ಪಾರ್ಟ್​ನಲ್ಲಿ ಈ ಸಿನಿಮಾ ಮೂಡಿಬರಲಿದೆ. ಮೊದಲ ಪಾರ್ಟ್​ 2026ರ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ. 2ನೇ ಪಾರ್ಟ್​ 2027ರ ದೀಪಾವಳಿ ಹಬ್ಬಕ್ಕೆ ತೆರೆ ಕಾಣಲಿದೆ. ಅದ್ದೂರಿ ಬಜೆಟ್​ನಲ್ಲಿ ಈ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ಯಶ್, ಸಾಯಿ ಪಲ್ಲವಿ, ರಣಬೀರ್ ಕಪೂರ್​ ಅವರಂತಹ ಘಟಾನುಘಟಿಗಳು ಪಾತ್ರವರ್ಗದಲ್ಲಿ ಇರುವುದರಿಂದ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ