ಬಾಲಿವುಡ್ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್ (Karan Johar) ಅವರು ಹೊಸ ಸಿನಿಮಾ ಮೂಲಕ ಜನರ ಎದುರು ಬರಲು ಸಜ್ಜಾಗಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ (Rocky Aur Rani Ki Prem Kahani) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದಲ್ಲಿ ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ (Ranveer Singh) ಅವರು ಜೋಡಿಯಾಗಿ ನಟಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಟೀಸರ್ ಬಿಡುಗಡೆ ಮಾಡಲಾಗಿತ್ತು. ಈಗ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಟ್ರೇಲರ್ ಸಖತ್ ಸದ್ದು ಮಾಡುತ್ತಿದೆ. ಬಾಲಿವುಡ್ ಗಲ್ಲಾಪೆಟ್ಟಿಗೆಗೆ ಈ ಸಿನಿಮಾದಿಂದ ಹೊಸ ಚೈತನ್ಯ ಸಿಗುವ ಸೂಚನೆ ಕಾಣಿಸುತ್ತಿದೆ.
ಕರಣ್ ಜೋಹರ್ ಅವರ ಸಿನಿಮಾಗಳಲ್ಲಿ ಅದ್ದೂರಿತನ ಇರುತ್ತದೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲೂ ಅದು ಮುಂದುವರಿದಿದೆ ಎಂಬುದಕ್ಕೆ ಟ್ರೇಲರ್ನಲ್ಲಿ ಸಾಕ್ಷಿ ಸಿಕ್ಕಿದೆ. ಗ್ರ್ಯಾಂಡ್ ಆದಂತಹ ಸೆಟ್ಗಳು, ವಿದೇಶದ ಲೊಕೇಷನ್ಗಳು, ನೂರಾರು ಡ್ಯಾನ್ಸರ್ಗಳು, ಝಗಮಗಿಸುವ ಲೈಟಿಂಗ್, ಮಿರಿ ಮಿರಿ ಮಿಂಚುವ ಕಾಸ್ಟ್ಯೂಮ್ಗಳು, ಘಟಾನುಘಟಿ ಕಲಾವಿದರನ್ನು ಒಳಗೊಂಡ ಪಾತ್ರವರ್ಗ.. ಹೀಗೆ ಎಲ್ಲವೂ ಈ ಸಿನಿಮಾದಲ್ಲಿ ಅದ್ದೂರಿಯಾಗಿದೆ. ಜೊತೆಗೆ ಒಂದು ಮಸ್ತ್ ಮನರಂಜನೆ ನೀಡುವ ಕಹಾನಿ ಕೂಡ ಈ ಸಿನಿಮಾದಲ್ಲಿ ಇದೆ ಎಂಬುದನ್ನು ಟ್ರೇಲರ್ ಸೂಚಿಸುತ್ತಿದೆ.
‘ಗಲ್ಲಿ ಬಾಯ್’ ಸಿನಿಮಾದಲ್ಲಿ ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ಅವರು ಜೋಡಿಯಾಗಿ ನಟಿಸಿದ್ದರು. ಈಗ ಅವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲೂ ಜೊತೆಯಾಗಿ ನಟಿಸಿದ್ದಾರೆ. ಬೇರೆ ಬೇರೆ ಹಿನ್ನೆಲೆ ಮತ್ತು ಸ್ವಭಾವನನ್ನು ಹೊಂದಿರುವ ಪ್ರೇಮಿಗಳಾಗಿ ಅವರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರ ನಡುವಿನ ಕಾಮಿಡಿ ದೃಶ್ಯಗಳು ಟ್ರೇಲರ್ನಲ್ಲಿ ಹೈಲೈಟ್ ಆಗಿದೆ. ಟ್ರೇಲರ್ ನೋಡಿದ ಪ್ರೇಕ್ಷಕರು ಪಾಸಿಟಿವ್ ಆಗಿ ಕಮೆಂಟ್ ಮಾಡುತ್ತಿದ್ದಾರೆ.
ಇದನ್ನೂ ಓದಿ: Karan Johar: ಬ್ರಿಟನ್ ಪಾರ್ಲಿಮೆಂಟ್ನಲ್ಲಿ ಕರಣ್ ಜೋಹರ್ಗೆ ಸಿಗಲಿದೆ ವಿಶೇಷ ಗೌರವ
ಜುಲೈ 28ರಂದು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಆಲಿಯಾ ಭಟ್, ರಣವೀರ್ ಸಿಂಗ್ ಮಾತ್ರವಲ್ಲದೇ ಧರ್ಮೇಂದ್ರ, ಜಯಾ ಬಚ್ಚನ್, ಶಬ್ನಾ ಆಜ್ಮಿ, ರೋನಿತ್ ರಾಯ್, ಸಾಸ್ವತ ಚಟರ್ಜಿ, ಕರ್ಮವೀರ್ ಚೌದರಿ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ. ದೊಡ್ಡ ಗ್ಯಾಪ್ ಬಳಿಕ ಕರಣ್ ಜೋಹರ್ ಅವರು ನಿರ್ದೇಶನ ಮಾಡಿರುವುದರಿಂದ ಅವರ ಅಭಿಮಾನಿಗಳು ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.