AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಐದು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹೀಗಾಗಿ ರಣವೀರ್ ಸಿಂಗ್, ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಅವರು ಫ್ಯಾನ್ಸ್ ಜೊತೆ ಸಿನಿಮಾ ನೋಡಿದ್ದಾರೆ.

‘ನಿಮಗೆ ಏನಾಗಿದೆ?’; ರಸ್ತೆ ಮೇಲೆ ತಳ್ಳಾಡಿಕೊಂಡ ಆಲಿಯಾ ಭಟ್​-ರಣವೀರ್ ಸಿಂಗ್
ಆಲಿಯಾ-ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Aug 02, 2023 | 10:56 AM

Share

ನಟ ರಣವೀರ್ ಸಿಂಗ್ (Ranveer Singh) ಹಾಗೂ ಆಲಿಯಾ ಭಟ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಹಿಟ್ ಎನಿಸಿಕೊಂಡಿದೆ. ಟಿಪಿಕಲ್ ಕರಣ್ ಜೋಹರ್ ಸಿನಿಮಾ ರೀತಿಯಲ್ಲಿ ಇದು ಮೂಡಿ ಬಂದಿದೆ ಎಂದು ಪ್ರೇಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳವಾರ (ಆಗಸ್ಟ್ 1) ಚಿತ್ರತಂಡ ಮುಂಬೈನಲ್ಲಿ ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ನೋಡಿದೆ. ಬಳಿಕ ನಡೆದ ಫೋಟೋಶೂಟ್​ ವೇಳೆ ರಣವೀರ್ ಹಾಗೂ ಆಲಿಯಾ ಭಟ್ (Alia Bhatt) ತಳ್ಳಾಡಿಕೊಂಡಿದ್ದಾರೆ. ‘ನಿಮಗೆ ಏನಾಗಿದೆ’ ಎಂದು ಆಲಿಯಾ ಕೇಳಿದ್ದಾರೆ.

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಐದು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಹೀಗಾಗಿ ರಣವೀರ್ ಸಿಂಗ್, ಆಲಿಯಾ ಭಟ್ ಹಾಗೂ ಕರಣ್ ಜೋಹರ್ ಅವರು ಸೋಮವಾರ ಫ್ಯಾನ್ಸ್ ಜೊತೆ ಸಿನಿಮಾ ನೋಡಿದ್ದಾರೆ. ಸಿನಿಮಾ ವೀಕ್ಷಿಸಿ ಮರಳಿ ಬರುವಾಗ ಪಾಪರಾಜಿಗಳು ಇವರ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ರಣವೀರ್ ಅವರು ಆಲಿಯಾ ಭಟ್ ಅವರನ್ನು ತಳ್ಳಿದ್ದಾರೆ. ‘ನಿಮಗೆ ಏನಾಗಿದೆ’ ಎಂದು ರಣವೀರ್ ಅವರನ್ನು ಆಲಿಯಾ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ನಗುವಿನ ಉತ್ತರ ನೀಡಿದ್ದಾರೆ ರಣವೀರ್ ಸಿಂಗ್. ಪಾಪರಾಜಿಗಳನ್ನು ಕಂಡ ತಕ್ಷಣ ರಣವೀರ್ ಸಿಂಗ್​ಗೆ ಜೋಶ್ ಬಂದಿದೆ. ಅವರು ಚಿತ್ರವಿಚಿತ್ರವಾಗಿ ನಡೆದುಕೊಂಡಿದ್ದಾರೆ.

ಇದನ್ನೂ ಓದಿ: ಗಮನ ಸೆಳೆದ ಆಲಿಯಾ ಭಟ್​-ರಣವೀರ್ ಸಿಂಗ್ ಕೆಮಿಸ್ಟ್ರಿ; ಮರುಕಳಿಸುತ್ತಾ ‘ಗಲ್ಲಿ ಬಾಯ್’ ಇತಿಹಾಸ?

ಈ ವಿಡಿಯೋಗೆ ಬಗೆಬಗೆಯ ಕಮೆಂಟ್​ಗಳು ಬಂದಿವೆ. ‘ಆಲಿಯಾ-ರಣವೀರ್ ಸಿಂಗ್ ತುಂಬಾನೇ ಕ್ಲೋಸ್ ಆಗಿದ್ದಾರೆ. ಬಹುಶಃ ದೀಪಿಕಾ-ರಣವೀರ್ ಕೂಡ ಇಷ್ಟು ಆಪ್ತವಾಗಿಲ್ಲ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ರಣವೀರ್ ಸಿಂಗ್ ಅವರ ವೈಬ್​ನ ಮ್ಯಾಚ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಕೆಲವರು ಸಿನಿಮಾ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ಇದು ಬಕ್ವಾಸ್ ಸಿನಿಮಾ’ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು