RSS ಮುಖ್ಯಸ್ಥ ಮೋಹನ್ ಭಾಗವತ್ಗೆ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರ ತೋರಿಸಲಿರುವ ಅಕ್ಷಯ್ ಕುಮಾರ್
RSS Chief Mohan Bhagwat: ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾವನ್ನು ಮೋಹನ್ ಭಾಗವತ್ ನೋಡಲಿರುವುದರಿಂದ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ಇಂದು (ಜೂನ್ 3) ದೆಹಲಿಯಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗುತ್ತಿದೆ.
ಸತತ ಸೋಲಿನಿಂದ ಕಂಗೆಟ್ಟಿದ್ದ ಬಾಲಿವುಡ್ಗೆ ಹೊಸ ಚೈತನ್ಯ ನೀಡಲು ‘ಸಾಮ್ರಾಟ್ ಪೃಥ್ವಿರಾಜ್’ (Samrat Prithviraj) ಸಿನಿಮಾ ರಿಲೀಸ್ ಆಗಿದೆ. ಅಕ್ಷಯ್ ಕುಮಾರ್ (Akshay Kumar) ಅಭಿನಯದ ಈ ಚಿತ್ರದ ಬಗ್ಗೆ ಅನೇಕ ಗಣ್ಯರು ಆಸಕ್ತಿ ತೋರಿಸುತ್ತಿದ್ದಾರೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಅನೇಕ ರಾಜಕಾರಣಿಗಳು ಈ ಚಿತ್ರವನ್ನು ವೀಕ್ಷಿಸಿ ಭೇಷ್ ಎಂದಿದ್ದಾರೆ. ಈಗ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅವರು ಕೂಡ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರವನ್ನು ವೀಕ್ಷಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಈ ಸಿನಿಮಾದಲ್ಲಿ ಐತಿಹಾಸಿಕ ಕಥಾಹಂದರ ಇದೆ. ಅಕ್ಷಯ್ ಕುಮಾರ್ ಅವರಿಗೆ ಜೋಡಿಯಾಗಿ ಮಾನುಷಿ ಚಿಲ್ಲರ್ ನಟಿಸಿದ್ದಾರೆ. ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶನ ಮಾಡಿದ್ದು, ಉತ್ತಮ ಓಪನಿಂಗ್ ಪಡೆಯುವಲ್ಲಿ ಈ ಸಿನಿಮಾ ಯಶಸ್ವಿ ಆಗಿದೆ.
ದೇಶಭಕ್ತಿ ಕಥಾಹಂದರ ಸಿನಿಮಾಗಳಿಂದ ಅಕ್ಷಯ್ ಕುಮಾರ್ ಅವರು ಈ ಹಿಂದೆ ಕೂಡ ಗೆಲುವು ಕಂಡಿದ್ದರು. ಈಗ ಅವರಿಗೆ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರದ ಮೂಲಕ ಅಂಥದ್ದೇ ಯಶಸ್ಸು ಸಿಗುವ ಸಾಧ್ಯತೆ ದಟ್ಟವಾಗಿದೆ. ಐತಿಹಾಸಿಕ ಕಥಾಹಂದರ ಇರುವ ಈ ಚಿತ್ರವನ್ನು ಮೋಹನ್ ಭಾಗವತ್ ನೋಡಲಿರುವುದರಿಂದ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ. ಇಂದು (ಜೂನ್ 3) ದೆಹಲಿಯಲ್ಲಿ ಅವರಿಗಾಗಿ ವಿಶೇಷ ಪ್ರದರ್ಶನ ಏರ್ಪಡಿಸಲಾಗುತ್ತಿದೆ.
ಇದನ್ನೂ ಓದಿ: ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್ ಕುಮಾರ್; ಇದು ಗುಟ್ಕಾ ಎಫೆಕ್ಟ್ ಎಂದ ನೆಟ್ಟಿಗರು
‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರಕ್ಕೆ ತೆರಿಗೆ ವಿನಾಯಿತಿ:
ಯೋಗಿ ಆದಿತ್ಯನಾಥ್ ಅವರು ಈ ಸಿನಿಮಾವನ್ನು ನೋಡಿ ಇಷ್ಟಪಟ್ಟಿದ್ದಾರೆ. ಹಾಗಾಗಿ ಅವರು ಉತ್ತರ ಪ್ರದೇಶದಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದಾರೆ. ಇದು ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಿದ ಪ್ರೇಕ್ಷಕರಿಂದ ಸಿನಿಮಾ ಬಗ್ಗೆ ಉತ್ತಮ ವಿಮರ್ಶೆ ವ್ಯಕ್ತವಾಗುತ್ತಿದೆ.
ಅಮಿತ್ ಶಾ ಮೆಚ್ಚಿದ ‘ಸಾಮ್ರಾಟ್ ಪೃಥ್ವಿರಾಜ್’:
ತಮ್ಮ ಕುಟುಂಬದ ಸದಸ್ಯರ ಜೊತೆ ಕುಳಿತು ಅಮಿತ್ ಶಾ ಅವರು ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ. ‘ಇತಿಹಾಸದ ವಿದ್ಯಾರ್ಥಿ ಆದ ನಾನು ಈ ಸಿನಿಮಾ ನೋಡಿ ಕೇವಲ ಎಂಜಾಯ್ ಮಾಡಲಿಲ್ಲ. ಭಾರತೀಯರಿಗೆ ಈ ಚಿತ್ರ ಎಷ್ಟು ಮುಖ್ಯ ಎಂಬುದನ್ನು ಕೂಡ ಅರ್ಥ ಮಾಡಿಕೊಂಡೆ’ ಎಂದು ಅಮಿತ್ ಶಾ ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.