Aditya Roy Kapur: ‘ಆಶಿಕಿ 2’ ನಟನ ಲವ್​ ಸ್ಟೋರಿ ಬಟಾಬಯಲು; ಇಷ್ಟು ದಿನ ಮುಚ್ಚಿಟ್ಟಿದ್ದ ರಹಸ್ಯ ಬಹಿರಂಗ

Ananya Panday Viral Photo: ಅನನ್ಯಾ ಪಾಂಡೆಯನ್ನು ಆದಿತ್ಯ ರಾಯ್​ ಕಪೂರ್​ ಅವರು ಹಿಂಬದಿಯಿಂದ ತಬ್ಬಿಕೊಂಡು ನಿಂತಿರುವ ಫೋಟೋ ಲಭ್ಯವಾಗಿದೆ. ಇದನ್ನು ನೋಡಿ ಅಭಿಮಾನಿಗಳು ಹುಬ್ಬೇರಿಸಿದ್ದಾರೆ.

Aditya Roy Kapur: ‘ಆಶಿಕಿ 2’ ನಟನ ಲವ್​ ಸ್ಟೋರಿ ಬಟಾಬಯಲು; ಇಷ್ಟು ದಿನ ಮುಚ್ಚಿಟ್ಟಿದ್ದ ರಹಸ್ಯ ಬಹಿರಂಗ
ಆದಿತ್ಯ ರಾಯ್​ ಕಪೂರ್​, ಅನನ್ಯಾ ಪಾಂಡೆ
Follow us
ಮದನ್​ ಕುಮಾರ್​
|

Updated on: Jul 12, 2023 | 6:20 PM

ನಟ ಆದಿತ್ಯ ರಾಯ್​ ಕಪೂರ್​ (Aditya Roy Kapur) ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ‘ಆಶಿಕಿ 2’ ಸಿನಿಮಾದಿಂದ ಅವರಿಗೆ ದೊಡ್ಡ ಜನಪ್ರಿಯತೆ ಸಿಕ್ಕಿತು. ‘ದಿ ನೈಟ್​ ಮ್ಯಾನೇಜರ್​ 2’ ವೆಬ್​ ಸಿರೀಸ್​ನಲ್ಲೂ ಅವರು ಗಮನ ಸೆಳೆದಿದ್ದಾರೆ. ಈಗ ಅವರು ಸುದ್ದಿ ಆಗುತ್ತಿರುವುದು ಸಿನಿಮಾ ಅಥವಾ ವೆಬ್​ ಸಿರೀಸ್​ ವಿಚಾರಕ್ಕೆ ಅಲ್ಲ. ಬದಲಿಗೆ, ಅವರ ಖಾಸಗಿ ಬದುಕಿನ ಬಗ್ಗೆ ಬಿಗ್​ ನ್ಯೂಸ್​ ಕೇಳಿಬಂದಿದೆ. ಆದಿತ್ಯ ರಾಯ್​ ಕಪೂರ್​ ಅವರ ಪ್ರೇಮ್​ ಕಹಾನಿ ಬಹಿರಂಗ ಆಗಿದೆ. ನಟಿ ಅನನ್ಯಾ ಪಾಂಡೆ (Ananya Panday) ಜೊತೆ ಅವರು ಪ್ರೀತಿಯಲ್ಲಿ ಮುಳುಗಿದ್ದಾರೆ. ಹಾಗಂತ ಈ ವಿಚಾರವನ್ನು ತಾವಾಗಿಯೇ ಹೇಳಿಕೊಂಡಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಲೀಕ್​ ಆಗಿರುವ ಫೋಟೋಗಳು ಅವರಿಬ್ಬರ ಪ್ರೀತಿಗೆ ಸಾಕ್ಷಿ ಒದಗಿಸುತ್ತಿವೆ.

ಆದಿತ್ಯ ರಾಯ್​ ಕಪೂರ್​ ಮತ್ತು ಅನನ್ಯಾ ಪಾಂಡೆ ಅವರು ಪ್ರತ್ಯೇಕವಾಗಿ ವಿಮಾನ ಏರಿ ವಿದೇಶಕ್ಕೆ ತೆರಳಿದ್ದಾರೆ. ಆದರೆ ಅವರಿಬ್ಬರೂ ಹೋಗಿರುವುದು ಒಂದೇ ಲೊಕೇಷನ್​ಗೆ. ಸ್ಪೇನ್​ನಲ್ಲಿ ಸಂಗೀತ ಕಾರ್ಯಕ್ರಮವೊಂದಕ್ಕೆ ಅವರು ಹಾಜರಿ ಹಾಕಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಸ್ಟೋರಿಗಳನ್ನು ಅಪ್​ಲೋಡ್​ ಮಾಡಿಕೊಂಡಿದ್ದಾರೆ. ಇಬ್ಬರ ಸ್ಟೋರಿಯಲ್ಲೂ ಸಾಮ್ಯತೆ ಇರುವುದರಿಂದ ಅಭಿಮಾನಿಗಳಿಗೆ ಎಲ್ಲವೂ ಸ್ಪಷ್ಟವಾಗಿದೆ. ಇಷ್ಟೇ ಅಲ್ಲ, ಅವರಿಬ್ಬರ ನಡುವಿನ ಆಪ್ತತೆಗೆ ಸಾಕ್ಷಿ ಒದಗಿಸುವಂತಹ ಇನ್ನೊಂದು ಫೋಟೋ ಕೂಡ ವೈರಲ್​ ಆಗಿದೆ.

ಅನನ್ಯಾ ಪಾಂಡೆಯನ್ನು ಆದಿತ್ಯ ರಾಯ್​ ಕಪೂರ್​ ಅವರು ಹಿಂಬದಿಯಿಂದ ತಬ್ಬಿಕೊಂಡು ನಿಂತಿರುವ ಫೋಟೋ ಲಭ್ಯವಾಗಿದೆ. ಇದನ್ನು ನೋಡಿ ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ಇಷ್ಟು ದಿನಗಳ ಕಾಲ ಈ ಜೋಡಿ ಹಕ್ಕಿಗಳು ತಮ್ಮ ಪ್ರೀತಿ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಆದರೆ ಈಗ ಎಲ್ಲವೂ ಬಟಾಬಯಲಾಗಿದೆ. ಕದ್ದು-ಮುಚ್ಚಿ ಡೇಟಿಂಗ್ ಮಾಡುತ್ತಿರುವ ರಹಸ್ಯ ಬಯಲಾಗಿದೆ. ವೈರಲ್​ ಆಗಿರುವ ಫೋಟೋಗಳಿಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಂಬಂಧಿಯ ಮದುವೆಯಲ್ಲಿ ಧಮ್ ಹೊಡೆಯುತ್ತಾ ನಿಂತ ಅನನ್ಯಾ ಪಾಂಡೆ; ಬಾಯಿಗೆ ಬಂದಂತೆ ಬೈಸಿಕೊಂಡ ನಟಿ

ಖ್ಯಾತ ನಟ ಚಂಕಿ ಪಾಂಡೆ ಅವರ ಮಗಳು ಅನನ್ಯಾ ಪಾಂಡೆ. ಚಿತ್ರರಂಗದ ಹಿನ್ನೆಲೆಯಿರುವ ಕುಟುಂಬದಿಂದ ಬಂದ ಕಾರಣಕ್ಕೆ ಅನನ್ಯಾ ಪಾಂಡೆ ಅವರಿಗೆ ಸುಲಭವಾಗಿ ಅವಕಾಶ ಸಿಕ್ಕಿತು. ನೆಪೋಟಿಸಂ ಸಹಾಯದಿಂದ ಚಾನ್ಸ್​ ಪಡೆದುಕೊಂಡ ನಟಿ ಎಂದು ಎಲ್ಲರೂ ಟೀಕೆ ಮಾಡುತ್ತಾರೆ. ಆದರೆ ಆ ಟೀಕೆಗಳ ಬಗ್ಗೆ ಅನನ್ಯಾ ಪಾಂಡೆ ತಲೆ ಕೆಡಿಸಿಕೊಂಡಿಲ್ಲ. ವಿಜಯ್​ ದೇವರಕೊಂಡ ಜೊತೆ ಅನನ್ಯಾ ನಟಿಸಿದ ‘ಲೈಗರ್​’ ಸಿನಿಮಾ ಹೀನಾಯವಾಗಿ ಸೋತಿತು. ಆದರೂ ಅನನ್ಯಾಗೆ ಹೊಸ ಹೊಸ ಆಫರ್​ಗಳು ಸಿಗುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ