Salman Khan: ‘ಟೈಗರ್​ 3’ ಅಡ್ವಾನ್ಸ್​ ಬುಕಿಂಗ್​ನಿಂದ ಬಂತು 10 ಕೋಟಿ ರೂ.; ಇದು ಸುನಾಮಿ ಮುನ್ಸೂಚನೆ

Tiger 3 Advance Ticket Booking: ‘ಯಶ್ ರಾಜ್​ ಫಿಲ್ಮ್ಸ್’ ಸಂಸ್ಥೆಯು ‘ಟೈಗರ್​ 3’ ಸಿನಿಮಾಗೆ ಬಂಡವಾಳ ಹೂಡಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಸಲ್ಮಾನ್​ ಖಾನ್​ ನಟನೆಯ ಈ ಸಿನಿಮಾದ ಅದ್ದೂರಿತನ ಹೇಗಿರಲಿದೆ ಎಂಬುದು ಈಗಾಗಲೇ ಟ್ರೇಲರ್​ನಲ್ಲಿ ಗೊತ್ತಾಗಿದೆ. ಅದನ್ನು ದೊಡ್ಡ ಪರದೆ ಮೇಲೆ ಎಂಜಾಯ್​ ಮಾಡಲು ಫ್ಯಾನ್ಸ್​ ಕಾದಿದ್ದಾರೆ.

Salman Khan: ‘ಟೈಗರ್​ 3’ ಅಡ್ವಾನ್ಸ್​ ಬುಕಿಂಗ್​ನಿಂದ ಬಂತು 10 ಕೋಟಿ ರೂ.; ಇದು ಸುನಾಮಿ ಮುನ್ಸೂಚನೆ
ಟೈಗರ್​ 3
Follow us
ಮದನ್​ ಕುಮಾರ್​
|

Updated on: Nov 08, 2023 | 11:56 AM

ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಸಿಕ್ಕಿಲ್ಲ. ಈ ವರ್ಷ ತೆರೆಕಂಡ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಸೋತಿತ್ತು. ಆದರೆ ಅವರೀಗ ದೊಡ್ಡ ಗೆಲುವು ಪಡೆಯುವ ಸೂಚನೆ ಸಿಕ್ಕಿದೆ. ಸಲ್ಮಾನ್​ ಖಾನ್​ ನಟನೆಯ ಟೈಗರ್​ 3’ ಸಿನಿಮಾ (Tiger 3 Movie) ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್​ 12ರಂದು ವಿಶ್ವಾದ್ಯಂತ ಈ ಸಿನಿಮಾ ರಿಲೀಸ್​ ಆಗಲಿದೆ. ಇತ್ತೀಚೆಗೆ ಈ ಸಿನಿಮಾದ ಅಡ್ವಾನ್ಸ್ ಬುಕಿಂಗ್​ (Tiger 3 Advance Ticket Booking) ಶುರುವಾಗಿದ್ದು, ಜನರಿಂದ ಸೂಪರ್​ ರೆಸ್ಪಾನ್ಸ್​ ಸಿಗುತ್ತಿದೆ. ಈಗಾಗಲೇ ಅಡ್ವಾನ್ಸ್​ ಬುಕಿಂಗ್​ನಿಂದ ಈ ಸಿನಿಮಾಗೆ 10 ಕೋಟಿ ರೂಪಾಯಿ ಆದಾಯ ಬಂದಿದೆ. ಬಾಕ್ಸ್​ ಆಫೀಸ್​ನಲ್ಲಿ ಸುನಾಮಿ ಏಳುವ ಮುನ್ಸೂಚನೆ ಇದು ಎನ್ನುತ್ತಿದ್ದಾರೆ ಅಭಿಮಾನಿಗಳು.

ಮನೀಶ್​ ಶರ್ಮಾ ಅವರು ‘ಟೈಗರ್​ 3’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಏಕ್​ ಥಾ ಟೈಗರ್​’, ‘ಟೈಗರ್​ ಜಿಂದಾ ಹೈ’ ಸಿನಿಮಾಗಳ ಮುಂದುವರಿದ ಭಾಗವಾಗಿ ‘ಟೈಗರ್​ 3’ ಸಿನಿಮಾ ಮೂಡಿಬಂದಿದೆ. ಸಲ್ಮಾನ್ ಖಾನ್​ ಮತ್ತು ಕತ್ರಿನಾ ಕೈಫ್​ ಅವರು ಜೋಡಿಯಾಗಿ ನಟಿಸಿದ್ದು, ಭರ್ಜರಿ ಆ್ಯಕ್ಷನ್​ ಸೀನ್​ಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಶಾರುಖ್​ ಖಾನ್​ ಅವರು ಅತಿಥಿ ಪಾತ್ರದಲ್ಲಿ ಎಂಟ್ರಿ ನೀಡಲಿದ್ದಾರೆ. ಖ್ಯಾತ ನಟ ಇಮ್ರಾನ್​ ಹಷ್ಮಿ ಅವರು ವಿಲನ್​ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘ಟೈಗರ್​’ ಸಿನಿಮಾದ ಮೇಲೆ ಕ್ರೇಜ್​ ಮೂಡಿದೆ.

‘ಯಶ್ ರಾಜ್​ ಫಿಲ್ಮ್ಸ್’ ಸಂಸ್ಥೆಯು ‘ಟೈಗರ್​ 3’ ಸಿನಿಮಾಗೆ ಬಂಡವಾಳ ಹೂಡಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಸಿನಿಮಾದ ಅದ್ದೂರಿತನ ಹೇಗಿರಲಿದೆ ಎಂಬುದು ಈಗಾಗಲೇ ಟ್ರೇಲರ್​ನಲ್ಲಿ ಗೊತ್ತಾಗಿದೆ. ಅದನ್ನು ದೊಡ್ಡ ಪರದೆ ಮೇಲೆ ಎಂಜಾಯ್​ ಮಾಡಲು ಫ್ಯಾನ್ಸ್​ ಕಾದಿದ್ದಾರೆ. ಈ ಸಿನಿಮಾದಲ್ಲಿ ಕೆಲವು ನಟರು ಸರ್ಪ್ರೈಸ್​ ಎಂಟ್ರಿ ನೀಡಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ. ಈ ಚಿತ್ರವನ್ನು ಗ್ರ್ಯಾಂಡ್​ ಆಗಿ ಬರಮಾಡಿಕೊಳ್ಳಲು ಫ್ಯಾನ್ಸ್​ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕೆಲವೆಡೆ ಮುಂಜಾನೆ ಆರು ಗಂಟೆಗೆ ಶೋ ಆರಂಭ ಆಗಲಿದೆ.

ಇದನ್ನೂ ಓದಿ: Salman Khan: ಸಲ್ಮಾನ್​ ಖಾನ್​ ಜತೆ ಕ್ಲ್ಯಾಶ್​ ಮಾಡಿಕೊಳ್ಳಲು ಯಾರೂ ಸಿದ್ಧರಿಲ್ಲ; ‘ಟೈಗರ್​ 3’ ಚಿತ್ರದ ಹವಾ ಇದು

ದೀಪಾವಳಿ ಹಬ್ಬದ ಪ್ರಯುಕ್ತ ‘ಟೈಗರ್​ 3’ ಸಿನಿಮಾ ಬಿಡುಗಡೆ ಆಗಲಿದೆ. ಶುಕ್ರವಾರದ ಬದಲಿಗೆ ಭಾನುವಾರ (ನ.12) ಚಿತ್ರ ತೆರೆಕಾಣುತ್ತಿದೆ. ಮೊದಲ ದಿನ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ತಿಳಿಯಲು ಎಲ್ಲರೂ ಕಾದಿದ್ದಾರೆ. ಈಗಾಗಲೇ ಬಾಲಿವುಡ್​ ಸಿನಿಮಾಗಳು ಸಾವಿರ ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಹೊಸ ಮೈಲಿಗಲ್ಲು ಸೃಷ್ಟಿ ಮಾಡಿವೆ. ‘ಟೈಗರ್​ 3’ ಕೂಡ ಸಾವಿರ ಕೋಟಿ ರೂಪಾಯಿ ಕ್ಲಬ್​ ಸೇರುವ ನಿರೀಕ್ಷೆ ಇದೆ. ಅದಕ್ಕೆ ಮುನ್ಸೂಚನೆ ಎಂಬಂತೆ ಈಗಾಗಲೇ 10 ಕೋಟಿ ರೂಪಾಯಿ ಬೆಲೆಯ ಟಿಕೆಟ್​ಗಳು ಮುಂಗಡವಾಗಿ ಬುಕ್​ ಆಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ