Sai Pallavi: ಬಾಲಿವುಡ್​ಗೆ ಕಾಲಿಡೋ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಾಯಿ ಪಲ್ಲವಿ

ಸಾಯಿ ಪಲ್ಲವಿ ಅವರು ಸಿನಿಮಾ ಆಯ್ಕೆ ಮಾಡಿಕೊಳ್ಳುವುದಕ್ಕೂ ಮೊದಲು ಪಾತ್ರ, ಕಥೆ ಎಲ್ಲದಕ್ಕೂ ಪ್ರಾಮುಖ್ಯತೆ ಕೊಡುತ್ತಾರೆ. ಈಗ ಬಾಲಿವುಡ್​ಗೆ ಕಾಲಿಡೋಕು ಅವರು ಇದೇ ಮಾನ ದಂಡ ಇಟ್ಟುಕೊಂಡಿದ್ದಾರೆ

Sai Pallavi: ಬಾಲಿವುಡ್​ಗೆ ಕಾಲಿಡೋ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಾಯಿ ಪಲ್ಲವಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 27, 2021 | 3:19 PM

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಿಂಚಿ ನಂತರ ಬಾಲಿವುಡ್​ಗೆ ಕಾಲಿಟ್ಟು ಯಶಸ್ಸು ಕಂಡ ಸಾಕಷ್ಟು ನಟಿಯರಿದ್ದಾರೆ. ಪೂಜಾ ಹೆಗ್ಡೆ (Pooja Hegde) ಮಂಗಳೂರು ಮೂಲದವರು. ಅವರು ಬಾಲಿವುಡ್​ನಲ್ಲಿ ನೆಲೆಕಂಡುಕೊಂಡಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವರು ಒಳ್ಳೆಯ ಬೇಡಿಕೆ ಇಟ್ಟುಕೊಂಡಿದ್ದಾರೆ. ದಕ್ಷಿಣದಲ್ಲಿ ದೊಡ್ಡ ಮಟ್ಟದಲ್ಲಿ ಮಿಂಚಿರುವ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್​ನಲ್ಲಿ ಖಾತೆ ತೆರೆದಿದ್ದಾರೆ. ಇನ್ನು, ಬಾಲಿವುಡ್​ನಲ್ಲಿ ಅದೃಷ್ಟಪರೀಕ್ಷೆಗೆ ಮುಂದಾಗಿ ಸೋತವರ ಸಂಖ್ಯೆ ಕೂಡ ದೊಡ್ಡದಿದೆ. ಈಗ ಸಾಯಿ ಪಲ್ಲವಿ (Sai Pallavi) ಕೂಡ ಬಾಲಿವುಡ್​ನಲ್ಲಿ ನಟಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ದಕ್ಷಿಣ ಭಾರತದಲ್ಲಿ ಭಾರೀ ಬೇಡಿಕೆ ಸೃಷ್ಟಿ ಮಾಡಿಕೊಂಡಿದ್ದಾರೆ. ಬಾಲಿವುಡ್​ಗೆ ಹೋದರೆ ಅವರಿಗೆ ಗೆಲುವು ಪಕ್ಕಾ ಎನ್ನುವ ಅಭಿಪ್ರಾಯ ಅಭಿಮಾನಿ ವಲಯದಲ್ಲಿ ವ್ಯಕ್ತವಾಗಿದೆ.

ಸಾಯಿ ಪಲ್ಲವಿ ಸಿನಿಮಾಗಳ ಆಯ್ಕೆ ವಿಚಾರದಲ್ಲಿ ಸಾಕಷ್ಟು ಚ್ಯೂಸಿ. ಅವರು ಸಿನಿಮಾ ಆಯ್ಕೆ ಮಾಡಿಕೊಳ್ಳುವುದಕ್ಕೂ ಮೊದಲು ಪಾತ್ರ, ಕಥೆ ಎಲ್ಲದಕ್ಕೂ ಪ್ರಾಮುಖ್ಯತೆ ಕೊಡುತ್ತಾರೆ. ಈಗ ಬಾಲಿವುಡ್​ಗೆ ಕಾಲಿಡೋಕು ಅವರು ಇದೇ ಮಾನ ದಂಡ ಇಟ್ಟುಕೊಂಡಿದ್ದಾರೆ. ‘ನಾನು ನಟಿಸುವ ಪಾತ್ರ ಚೆನ್ನಾಗಿರಬೇಕು. ಸ್ಟ್ರಾಂಗ್ ರೋಲ್ ಸಿಕ್ಕರೆ ಈಗ ಹಿಂದಿ ಸಿನಿಮಾ ಮಾಡೋಕೂ ನಾನು ರೆಡಿ’ ಎಂದಿದ್ದಾರೆ ಸಾಯಿ ಪಲ್ಲವಿ. ಅವರಿಗೆ ಒಪ್ಪುವಂತಹ ಪಾತ್ರವನ್ನು ಯಾರಾದರೂ ಹಿಂದಿಯಲ್ಲಿ ನೀಡುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಸಾಯಿ ಪಲ್ಲವಿ ತಮ್ಮ ಅದ್ಭುತ ನಟನೆಯ ಮೂಲಕ ಎಲ್ಲರ ಗಮನ ಸೆಳೆದವರು. ಅವರು ಬಾಲಿವುಡ್​ಗೆ ತೆರಳೋಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ಇತ್ತೀಚೆಗೆ ಸುದ್ದಿಯಾಗಿತ್ತು. ಈಗ ಅವರು ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಡೋ ಬಗ್ಗೆ ನೀಡಿದ ಹೇಳಿಕೆ ಸಹಜವಾಗಿಯೇ ಕುತೂಹಲ ಮೂಡಿಸಿದೆ.

ನಾನಿ ಅಭಿನಯದ ‘ಶ್ಯಾಮ್​ ಸಿಂಘ ರಾಯ್’​ ಇತ್ತೀಚೆಗೆ ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ರಾನಾ ದಗ್ಗುಬಾಟಿ ನಟನೆಯ ‘ವಿರಾಟ ಪರ್ವಮ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ನಾಗ ಚೈತನ್ಯ ನಟನೆಯ ‘ಲವ್​ ಸ್ಟೋರಿ’ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಿದ್ದರು. ಈ ಸಿನಿಮಾ ತೆರೆಗೆ ಬಂದ ಬೆನ್ನಲ್ಲೇ ನಾಗ ಚೈತನ್ಯ ಹಾಗೂ ಸಮಂತಾ ವಿಚ್ಛೇದನ ಪಡೆದುಕೊಂಡಿದ್ದರು. ಆ ಬಳಿಕ ಸಾಯಿ ಪಲ್ಲವಿ ಅವರನ್ನು ಮದುವೆ ಆಗುವಂತೆ ನಾಗ ಚೈತನ್ಯಗೆ ಕೆಲ ಅಭಿಮಾನಿಗಳು ಒತ್ತಾಯಿಸಿದ್ದರು.

ಇದನ್ನೂ ಓದಿ: 7 ಸಾವಿರ ಕೋಟಿ ದಾಟಿದ ‘ಸ್ಪೈಡರ್ ಮ್ಯಾನ್’​ ಕಲೆಕ್ಷನ್​; ಭಾರತದಲ್ಲೂ ಮ್ಯಾಜಿಕ್​ ಮಾಡಿದ ಸಿನಿಮಾ

ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ