AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಾಯಣ ಟ್ರೇಲರ್ ರಿಲೀಸ್ ಬಳಿಕ ಟ್ರೋಲ್ ಆದ ಸಾಯಿ ಪಲ್ಲವಿ; ಕಾರಣ ಏನು?

ನಟಿ ಸಾಯಿ ಪಲ್ಲವಿ ಅವರ ವಿರುದ್ಧ ಒಂದು ವರ್ಗದ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಸರಿಯಾದ ಆಯ್ಕೆ ಅಲ್ಲ ಎಂದು ಜನರು ಟೀಕೆ ಮಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್ ರಿಲೀಸ್ ಆದ ನಂತರ ಈ ರೀತಿಯ ಅಭಿಪ್ರಾಯ ವ್ಯಕ್ತವಾಗಿದೆ.

ರಾಮಾಯಣ ಟ್ರೇಲರ್ ರಿಲೀಸ್ ಬಳಿಕ ಟ್ರೋಲ್ ಆದ ಸಾಯಿ ಪಲ್ಲವಿ; ಕಾರಣ ಏನು?
Sai Pallavi
ಮದನ್​ ಕುಮಾರ್​
|

Updated on: Jul 31, 2026 | 2:49 PM

Share

ಮುಖ್ಯಾಂಶಗಳು

  • ‘ರಾಮಾಯಣ’ ಸಿನಿಮಾದಲ್ಲಿ ಸೀತೆಯ ಪಾತ್ರ ಮಾಡಿದ್ದಾರೆ ಖ್ಯಾತ ನಟಿ ಸಾಯಿ ಪಲ್ಲವಿ.
  • ಟ್ರೇಲರ್ ಬಿಡುಗಡೆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚಾಗಿದೆ ಟ್ರೋಲ್ ಕಾಟ.
  • ಸೀತೆ ಪಾತ್ರವನ್ನು ಸಾಯಿ ಪಲ್ಲವಿ ಬದಲು ಬೇರೆ ನಟಿ ಮಾಡಬೇಕಿತ್ತು ಎಂಬ ಅಭಿಪ್ರಾಯ.

ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ‘ರಾಮಾಯಣ’ (Ramayana) ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಜೋರಾಗಿವೆ. ಚಿತ್ರದ ದೃಶ್ಯ ವೈಭವ ಹಾಗೂ ವಿಎಫ್‌ಎಕ್ಸ್ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿರುವುದರ ನಡುವೆಯೇ, ನಟಿ ಸಾಯಿ ಪಲ್ಲವಿ (Sai Pallavi) ಅವರ ಬಗ್ಗೆಯೂ ಅನಗತ್ಯ ವಿವಾದ ಮತ್ತು ಟ್ರೋಲ್ ಆರಂಭವಾಗಿದೆ. ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಸೂಕ್ತ ಆಯ್ಕೆ ಅಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ರೀತಿಯ ಟೀಕೆ ಕೇವಲ ಬಾಲಿವುಡ್ ವಲಯದಿಂದ ಮಾತ್ರವಲ್ಲದೆ, ದಕ್ಷಿಣ ಭಾರತದ ಕೆಲವು ಸಿನಿರಸಿಕರಿಂದಲೂ ಕೇಳಿಬರುತ್ತಿದೆ. ಸಿನಿಮಾ ಬಿಡುಗಡೆಯಾಗಿ ಅವರ ಪೂರ್ಣ ನಟನೆಯನ್ನು ವೀಕ್ಷಿಸುವ ಮೊದಲೇ, ‘ಸಾಯಿ ಪಲ್ಲವಿ ಸೀತೆಯ ಪಾತ್ರಕ್ಕೆ ಸೂಕ್ತವಲ್ಲ’ ಎಂದು ತೀರ್ಪು ನೀಡಲು ಹಲವರು ಮುಂದಾಗಿದ್ದಾರೆ. ಇದರಿಂದ ಸಾಯಿ ಪಲ್ಲವಿ ಅವರ ಅಪ್ಪಟ ಅಭಿಮಾನಿಗಳಿಗೆ ಬೇಸರ ಆಗಿದೆ.

ಸಿನಿಮಾ ಬಿಡುಗಡೆಗೂ ಮುನ್ನವೇ ಟೀಕೆ:

‘ರಾಮಾಯಣ’ ಸಿನಿಮಾ ಇನ್ನೂ ಚಿತ್ರಮಂದಿರಕ್ಕೆ ಬಂದಿಲ್ಲ. ಸಾಯಿ ಪಲ್ಲವಿ ಅವರ ಅಭಿನಯ ಹೇಗಿರಲಿದೆ ಎಂಬುದು ಯಾರಿಗೂ ಪೂರ್ಣವಾಗಿ ತಿಳಿದಿಲ್ಲ. ಆದರೂ ಸೋಶಿಯಲ್ ಮೀಡಿಯಾದಲ್ಲಿ ಕೆಲವರು, ‘ಸಾಯಿ ಪಲ್ಲವಿ ಈ ಪಾತ್ರಕ್ಕೆ ಸೂಕ್ತವಲ್ಲ’, ‘ಅವರು ಸೀತೆಯಂತೆ ಕಾಣಿಸುತ್ತಿಲ್ಲ’, ಈ ಪಾತ್ರಕ್ಕೆ ಬೇರೆ ನಟಿಯನ್ನು ಆಯ್ಕೆ ಮಾಡಬೇಕಿತ್ತು’ ಎಂಬಿತ್ಯಾದಿಯಾಗಿ ಕಮೆಂಟ್ ಮಾಡುತ್ತಿದ್ದಾರೆ.

‘ರಾಮಾಯಣ’ ಟ್ರೇಲರ್:

ಗ್ಲಾಮರ್​ಗಿಂತ ಅಭಿನಯಕ್ಕೇ ಆದ್ಯತೆ ನೀಡಿದ ನಟಿ:

ಸಾಯಿ ಪಲ್ಲವಿ ಎಂದಿಗೂ ಗ್ಲಾಮರ್ ಅಥವಾ ಕೇವಲ ಅಂದಚೆಂದದ ಪ್ರದರ್ಶನದಿಂದ ಹೆಸರು ಮಾಡಿದವರಲ್ಲ. ತಮ್ಮ ಸಹಜವಾದ ಅಭಿನಯ, ಪಾತ್ರದ ಭಾವನಾತ್ಮಕ ಆಳವನ್ನು ಪರದೆಯ ಮೇಲೆ ತರುವ ಅದ್ಭುತ ಕೌಶಲ್ಯದಿಂದಲೇ ಅವರು ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಸೀತೆಯಂತಹ ಪವಿತ್ರ ಹಾಗೂ ಭಾವನಾತ್ಮಕ ಪಾತ್ರಕ್ಕೆ ಸಾಯಿ ಪಲ್ಲವಿ ಅವರಂತಹ ನಟಿಯನ್ನು ಆಯ್ಕೆ ಮಾಡಿರುವುದು ಚಿತ್ರತಂಡದ ಸೃಜನಶೀಲ ನಿರ್ಧಾರ. ಟ್ರೇಲರ್‌ನಲ್ಲಿ ಕಾಣಿಸುವ ಕೆಲವೇ ಸೆಕೆಂಡುಗಳ ದೃಶ್ಯವನ್ನು ನೋಡಿ ಒಬ್ಬ ನಟಿಯ ಪ್ರತಿಭೆಯನ್ನು ನಿರ್ಧರಿಸುವುದು ಸರಿಯಲ್ಲ ಎನ್ನುತ್ತಿದ್ದಾರೆ ಅಭಿಮಾನಿಗಳು.

ಇದನ್ನೂ ಓದಿ: ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಸೂಕ್ತವಲ್ಲ ಎಂದವರಿಗೆ ಹಳೆಯ ಸೀತಾ ಪಾತ್ರಧಾರಿ ತಿರುಗೇಟು

ದೀಪಾವಳಿ ಹಬ್ಬಕ್ಕೆ ರಾಮಾಯಣ ಬಿಡುಗಡೆ:

ಪೌರಾಣಿಕ ಪಾತ್ರಗಳು ಎಂದಿಗೂ ನೆನಪಿನಲ್ಲಿ ಉಳಿಯುವುದು ನಟ-ನಟಿಯರು ಬೆಳ್ಳಿಪರದೆಯ ಮೇಲೆ ನೀಡುವ ಜೀವಂತ ಅಭಿನಯದಿಂದಲೇ ಹೊರತು, ಫಸ್ಟ್ ಲುಕ್ ಪೋಸ್ಟರ್‌ಗಳು ಅಥವಾ ಟ್ರೇಲರ್‌ನ ಕೆಲ ದೃಶ್ಯಗಳಿಂದ ಅಲ್ಲ. ತರಾತುರಿಯಲ್ಲಿ ತೀರ್ಮಾನಕ್ಕೆ ಬರುವ ಬದಲು, ಮುಂಬರುವ ದೀಪಾವಳಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ‘ರಾಮಾಯಣ’ ಚಿತ್ರವನ್ನು ವೀಕ್ಷಿಸಿದ ಬಳಿಕವಷ್ಟೇ ಸಾಯಿ ಪಲ್ಲವಿ ಅವರ ಅಭಿನಯವನ್ನು ನ್ಯಾಯಯುತವಾಗಿ ವಿಮರ್ಶಿಸುವುದು ಸೂಕ್ತ ಎಂದು ಅಭಿಮಾನಿಗಳು ನಟಿಯ ಪರ ವಹಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಇಂದೂ ಬೆಂಗಳೂರಿನಲ್ಲಿ ವರುಣನ ಆರ್ಭಟ; ಕೆರೆಯಂತಾದ ರಸ್ತೆಗಳು!
ಇಂದೂ ಬೆಂಗಳೂರಿನಲ್ಲಿ ವರುಣನ ಆರ್ಭಟ; ಕೆರೆಯಂತಾದ ರಸ್ತೆಗಳು!
ಸರ್ವೀಸ್ ರೈಫಲ್‌ನಿಂದ ನಾಲ್ವರು ಸಹೋದ್ಯೋಗಿಗಳನ್ನೇ ಕೊಂದ ಯೋಧ
ಸರ್ವೀಸ್ ರೈಫಲ್‌ನಿಂದ ನಾಲ್ವರು ಸಹೋದ್ಯೋಗಿಗಳನ್ನೇ ಕೊಂದ ಯೋಧ