AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್; ತಪ್ಪು ಮಾಡಿದ್ರಾ ಆಮಿರ್ ಖಾನ್?

ಸಾಯಿ ಪಲ್ಲವಿ ಬಾಲಿವುಡ್ ಪ್ರವೇಶಿಸಿದ 'ಏಕ್ ದಿನ್' ಸಿನಿಮಾ ನಿರೀಕ್ಷೆ ಮೀರಿ ಕಳಪೆ ಪ್ರದರ್ಶನ ನೀಡಿದೆ. ಜುನೈದ್ ಖಾನ್ ಜೊತೆಗಿನ ಈ ಚಿತ್ರ ಮೊದಲ ದಿನ ಕೇವಲ 1 ಕೋಟಿ ರೂ. ಗಳಿಸಿ ಡಲ್ ಓಪನಿಂಗ್ ಕಂಡಿದೆ. ಕೇವಲ 14 ಪರ್ಸೆಂಟ್ ಆಕ್ಯುಪೆನ್ಸಿ ಪಡೆದ ಈ ಚಿತ್ರ ಸಾಯಿ ಪಲ್ಲವಿ ಅವರ ಆಯ್ಕೆಗಳ ಬಗ್ಗೆ ಪ್ರಶ್ನೆ ಮೂಡಿಸಿದೆ.

ಬಾಲಿವುಡ್​​ನಲ್ಲಿ ನಡೆಯದ ಸಾಯಿ ಪಲ್ಲವಿ ಕಮಾಲ್; ತಪ್ಪು ಮಾಡಿದ್ರಾ ಆಮಿರ್ ಖಾನ್?
ಏಕ್ ದಿನ್
ರಾಜೇಶ್ ದುಗ್ಗುಮನೆ
|

Updated on: May 02, 2026 | 10:26 AM

Share

ಸಾಯಿ ಪಲ್ಲವಿ (Sai Pallavi) ಅವರಿಗೆ ದಕ್ಷಿಣ ಭಾರತದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಸಿನಿಮಾಗಳು ಇಲ್ಲಿ ಅದ್ಭುತ ಕಲೆಕ್ಷನ್ ಮಾಡುತ್ತವೆ. ಈಗ ಅವರು ಬಾಲಿವುಡ್​​ಗೆ ಕಾಲಿಟ್ಟಿದ್ದಾರೆ. ಆಮಿರ್ ಖಾನ್ ಮಗ ಜುನೈದ್ ಖಾನ್ ಅವರ ‘ಏಕ್ ದಿನ್’ ಚಿತ್ರಕ್ಕೆ ಅವರು ನಾಯಕಿ. ಈ ಸಿನಿಮಾ ಮೇ 1ರಂದು ರಿಲೀಸ್ ಆಯಿತು. ಈ ಸಿನಿಮಾ ಕಮಾಲ್ ಮಾಡಲು ವಿಫಲವಾಗಿದೆ. ಈ ಚಿತ್ರ ಡಲ್​ ಓಪನಿಂಗ್ ಕಂಡಿದೆ.

‘ಏಕ್ ದಿನ್’ ರೊಮ್ಯಾಂಟಿಕ್ ಡ್ರಾಮಾ ಶೈಲಿಯ ಸಿನಿಮಾವಾಗಿದ್ದು, ಜಪಾನ್‌ ಅಲ್ಲಿ ಶೂಟ್ ಮಾಡಲಾಗಿದೆ. ಸಿನಿಮಾದ ಶೀರ್ಷಿಕೆ ಸೂಚಿಸುವಂತೆ, ಇದು ಇಬ್ಬರು ಅಪರಿಚಿತ ವ್ಯಕ್ತಿಗಳು ಭೇಟಿಯಾಗಿ ಒಂದೇ ದಿನದಲ್ಲಿ ನಡೆಯುವ ಕಥೆ. ಈ ಚಿತ್ರವನ್ನು ಸುನಿಲ್ ಪಾಂಡೆ ನಿರ್ದೇಶಿಸಿದ್ದಾರೆ. ಆಮಿರ್ ಖಾನ್ ಈ ಚಿತ್ರ ನಿರ್ಮಾಣ ಮಾಡಿದ್ದರೆ.

‘ಏಕ್ ದಿನ್’ ಸಿನಿಮಾ ಮೊದಲ ದಿನ 1 ಕೋಟಿ ರೂಪಾಯಿ ಮಾತ್ರ ಗಳಿಸಿದೆ. ಈ ಚಿತ್ರಕ್ಕೆ ದೇಶಾದ್ಯಂತ ಸಿಕ್ಕಿದ್ದು ಬರೋಬ್ಬರಿ 1,710 ಶೋ. ಆದರೂ ಸಿನಿಮಾ ಗಳಿಸಿದ್ದು ಕೇವಲ 1 ಕೋಟಿ ರೂಪಾಯಿ. ಈ ಚಿತ್ರ ಅಕ್ಯುಪೆನ್ಸಿ ಕೇವಲ 14 ಪರ್ಸೆಂಟ್ ಇತ್ತು. ಅಂದರೆ, 100 ಸೀಟ್ ಇರುವ​ ಚಿತ್ರಮಂದಿರದಲ್ಲಿ ತುಂಬಿದ್ದು ಕೇವಲ 14 ಸೀಟ್ ಮಾತ್ರ. ಹೀಗಾಗಿ, ಕೇವಲ 1 ಕೋಟಿ ರೂಪಾಯಿ ಮಾತ್ರ ಗಳಿಸಿದೆ.

ಇದನ್ನೂ ಓದಿ: ಸಾಯಿ ಪಲ್ಲವಿ ಹೆಗಲಮೇಲೆ ಕೈ ಹಾಕಲು ಮುಂದಾದ ಆಮಿರ್ ಮಗ; ಮುಂದಾಯ್ತು ಯಾರು ಊಹಿಸದ ಘಟನೆ

ಸಾಯಿ ಪಲ್ಲವಿ ಅವರು ಸಾಮಾನ್ಯವಾಗಿ ಗ್ಲಾಮರ್ ಪಾತ್ರಗಳಿಗಿಂತ ಕಥೆಗೆ ಪ್ರಾಮುಖ್ಯತೆ ಇರುವ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ‘ಏಕ್ ದಿನ್’ ಕೂಡ ಅದೇ ಸಾಲಿಗೆ ಸೇರುವ ಚಿತ್ರವಾಗಿದೆ. ಸಾಯಿ ಪಲ್ಲವಿ ಪರಿಚಯ ಬಾಲಿವುಡ್​​ನವರಿಗೆ ಇಲ್ಲ. ಅವರು ‘ರಾಮಾಯಣ’ದಲ್ಲಿ ಸೀತೆ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ರಿಲೀಸ್ ಆದ ಬಳಿಕ ‘ಏಕ್ ದಿನ್’ ತೆರೆಗೆ ಬಂದಿದ್ದರೆ ಸಿನಿಮಾಗೆ ಹೆಚ್ಚು ಲಾಭ ಆಗುತ್ತಿತ್ತು. ಆದರೆ, ಆಮಿರ್ ಖಾನ್ ಅವರಿಗೆ ಅಷ್ಟು ಸಮಯ ಕಾಯುವ ತಾಳ್ಮೆ ಇರಲಿಲ್ಲ. ಹೀಗಾಗಿ, ಅವರು ಈ ನಿರ್ಧಾರ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ವಿಕಸಿತ್ ವೈಬ್ರೆಂಟ್‌ ವಿಲೇಜ್‌:ಯುವಕರೊಂದಿಗೆ ಮೋದಿ ಸಂವಾದ ನೇರ ಪ್ರಸಾರ
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ಬಾಗಲಕೋಟೆಯ ಹಿಪ್ಪರಗಿ ಬಳಿ ಕಾರು ಸ್ಫೋಟದ ಬಗ್ಗೆ ಎಸ್​ಪಿ ಹೇಳಿದ್ದೇನು?
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ರಾಜ್ ಬಿ. ಶೆಟ್ಟಿ ಹೋದಲ್ಲೆಲ್ಲ ‘ಕರಾವಳಿ’ ಸಿನಿಮಾಗೆ ಭರ್ಜರಿ ಪ್ರತಿಕ್ರಿಯೆ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!
ಕಾರ್ಗಿಲ್ ವಿಜಯ್ ದಿವಸ: ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!