Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್ ಮೇಲೆ ದಾಳಿ ಮಾಡಿದ ಆರೋಪಿಗೆ 5 ದಿನ ಪೊಲೀಸ್ ಕಸ್ಟಡಿ ವಿಧಿಸಿದ ಕೋರ್ಟ್

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯನ್ನು 5 ದಿನಗಳ ಕಾಲ ಪೊಲೀಸರ ಕಸ್ಟಡಿಗೆ ಒಪ್ಪಿಸಲಾಗಿದೆ. ಹೆಚ್ಚಿನ ತನಿಖೆಯನ್ನು ಮುಂಬೈ ಪೊಲೀಸರು ಮಾಡುತ್ತಿದ್ದಾರೆ.

ಸೈಫ್ ಮೇಲೆ ದಾಳಿ ಮಾಡಿದ ಆರೋಪಿಗೆ 5 ದಿನ ಪೊಲೀಸ್ ಕಸ್ಟಡಿ ವಿಧಿಸಿದ ಕೋರ್ಟ್
Mohammad Shariful Islam Shehzad
Follow us
TV9 Web
| Updated By: ಮದನ್​ ಕುಮಾರ್​

Updated on: Jan 19, 2025 | 5:20 PM

ಖ್ಯಾತ ನಟ ಸೈಫ್ ಅಲಿ ಖಾನ್ ಅವರ ಮನೆಯ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಬಾಂಗ್ಲಾದೇಶಿ ಮೂಲದ ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್ ಎಂಬಾತನನ್ನು ಮುಂಬೈ ಪೊಲೀಸರು ಅರೆಸ್ಟ್​ ಮಾಡಿದ್ದು, ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ. ಹಾಗಾಗಿ ಆತನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಮುಂಬೈ ಕೋರ್ಟ್​ ಆದೇಶ ನೀಡಿದೆ. ಸೈಫ್ ಮನೆ ಮೇಲೆ ಆದ ದಾಳಿಯ ಉದ್ದೇಶ ಏನು? ಇನ್ನೂ ಯಾರೆಲ್ಲ ಈ ಕೃತ್ಯದಲ್ಲಿ ಭಾಗಿ ಆಗಿದ್ದಾರೆ ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ.

ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಬಂದಿರುವ ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್ ಕೆಲವು ತಿಂಗಳಿಂದ ಮುಂಬೈನಲ್ಲಿ ವಾಸವಾಗಿದ್ದಾನೆ. ತನ್ನ ಹೆಸರನ್ನು ಕೂಡ ಆದ ಬದಲಾಯಿಸಿಕೊಂಡಿದ್ದಾನೆ. ವಿಜಯ್ ದಾಸ್ ಎಂಬ ಹೆಸರಿನ ಮೂಲಕ ಆತ ತನ್ನ ನಿಜವಾದ ಗುರುತನ್ನು ಮುಚ್ಚಿಟ್ಟಿದ್ದಾನೆ. ಇಂಥ ಹಲವು ಶಾಕಿಂಗ್ ಸತ್ಯಗಳು ಬಯಲಾಗುತ್ತಿವೆ.

ಸೈಫ್ ಮನೆಗೆ ನುಗ್ಗಿ ದಾಳಿ ಮಾಡಿದ ದಿನ ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್ ಧರಿಸಿದ್ದ ಬಟ್ಟೆಯನ್ನು ಮುಚ್ಚಿಟ್ಟಿದ್ದಾನೆ. ಆ ಬಟ್ಟೆಯಲ್ಲಿ ಸೈಫ್ ಅಲಿ ಖಾನ್ ಅವರ ರಕ್ತದ ಕಲೆಗಳು ಇವೆ. ಆದರೆ ಆ ಬಟ್ಟೆಯನ್ನು ಇಸ್ಲಾಂ ಶೆಹಜಾದ್ ಮುಚ್ಚಿಟ್ಟಿದ್ದಾನೆ. ಅವುಗಳನ್ನು ವಶಕ್ಕೆ ಪಡೆಯುವುದು ಬಾಕಿ ಇದೆ ಎಂದು ಮುಂಬೈ ಪೊಲೀಸರು ಕೋರ್ಟ್​ಗೆ ತಿಳಿಸಿದ್ದಾರೆ. ಪಕ್ಕಾ ಪ್ಲ್ಯಾನ್ ಮಾಡಿಯೇ ಆತ ಸೈಫ್ ಮನೆಗೆ ನುಗ್ಗಿದ್ದ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್​ ವಾದಿಸಿದ್ದಾರೆ.

ಮೊಹಮ್ಮದ್ ಶೆರಿಫುಲ್ ಇಸ್ಲಾಂ ಶೆಹಜಾದ್ ಪರವಾಗಿ ವಕೀಲ ದಿನೇಶ್ ಪ್ರಜಾಪತಿ ವಾದ ಮಾಡಿದ್ದಾರೆ. ‘ಸೆಲೆಬ್ರಿಟಿ ಮೇಲೆ ದಾಳಿ ಆಗಿದೆ ಎಂಬ ಕಾರಣಕ್ಕೆ ಹೆಚ್ಚು ಚರ್ಚೆ ಆಗುತ್ತಿದೆ. ಆರೋಪಿಯನ್ನು ಸುಮ್ಮನೇ ಬಲಿಪಶು ಮಾಡಲು ಪ್ರಯತ್ನಿಸಲಾಗಿದೆ. ಆರೋಪಿಯಿಂದ ಯಾವುದೇ ಸಾಕ್ಷಿಯನ್ನು ಪೊಲೀಸರು ಕಲೆ ಹಾಕಿಲ್ಲ. ಆತ ಬಾಂಗ್ಲಾದೇಶದ ಪ್ರಜೆ ಎಂಬುದನ್ನು ಸಾಬೀತು ಮಾಡಲು ಕೂಡ ಯಾವುದೇ ದಾಖಲೆಗಳನ್ನು ಪೊಲೀಸರು ನೀಡಿಲ್ಲ’ ಎಂದು ಆರೋಪಿ ಪರ ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: ಇವರೇ ನೋಡಿ ಸೈಫ್ ಅಲಿ ಖಾನ್ ಜೀವ ಉಳಿಸಿದ ಆಟೋ ಡ್ರೈವರ್

ಮುಂಬೈನ ಬಾಂದ್ರಾದಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ಸೈಫ್ ಅಲಿ ಖಾನ್ ಅವರ ಕುಟುಂಬ ವಾಸ ಮಾಡುತ್ತಿದೆ. ಈ ಅಪಾರ್ಟ್​ಮೆಂಟ್​ಗೆ ಜನವರಿ 16ರ ನಸುಕಿನಲ್ಲಿ ದರೋಡೆಕೋರರು ನುಗ್ಗಿದ್ದರು. ಈ ಸಂದರ್ಭದಲ್ಲಿ ಸೈಫ್ ಅಲಿ ಖಾನ್​ಗೆ ಚಾಕು ಇರಿತ ಆಯಿತು. ಆಗ ಸೈಫ್ ಅಲಿ ಖಾನ್ ಅವರು ಗಂಭೀರವಾಗಿ ಗಾಯಗೊಂಡರು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್