AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಫ್ ಬಳಿಕ ಕರಿನಾ ಕಪೂರ್ ಮೇಲೂ ದಾಳಿ; ದಂಪತಿಗೆ ಕಷ್ಟಕಾಲ

ಸೈಫ್ ಅಲಿ ಖಾನ್ ಅವರ ಮನೆ ಮೇಲೆ ನಡೆದ ದಾಳಿಯಲ್ಲಿ ಕರೀನಾ ಕಪೂರ್ ಕೂಡ ಗುರಿಯಾಗಿದ್ದರು ಎಂಬ ಆಘಾತಕಾರಿ ವಿಷಯ ಬಹಿರಂಗಗೊಂಡಿದೆ. ರೋನಿತ್ ರಾಯ್ ಅವರ ಮಾಹಿತಿಯ ಪ್ರಕಾರ, ಕರೀನಾ ಅವರ ಕಾರಿಗೆ ದಾಳಿ ನಡೆದಿತ್ತು. ಈ ದಂಪತಿ ಈ ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಸೈಫ್ ಅವರ ಮನೆಯ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಸೈಫ್ ಬಳಿಕ ಕರಿನಾ ಕಪೂರ್ ಮೇಲೂ ದಾಳಿ; ದಂಪತಿಗೆ ಕಷ್ಟಕಾಲ
ಕರೀನಾ-ಸೈಫ್
ರಾಜೇಶ್ ದುಗ್ಗುಮನೆ
|

Updated on: Jul 12, 2025 | 12:41 PM

Share

ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ವ್ಯಕ್ತಿಯೋರ್ವ ಹಲ್ಲೆ ಮಾಡಿದ ಸುದ್ದಿ ಇನ್ನೂ ಹಸಿಯಾಗೇ ಇದೆ. ಹೀಗಿರುವಾಗಲೇ ಒಂದು ಶಾಕಿಂಗ್ ವಿಚಾರ ಹೊರ ಬಿದ್ದಿದೆ. ಸೈಫ್ ಮಾತ್ರವಲ್ಲ ಕರೀನಾ ಕಪೂರ್ (Kareena Kapoor) ಮೇಲೂ ದಾಳಿ ಆಗಿತ್ತು ಎಂಬ ವಿಚಾರ ಈಗ ರಿವೀಲ್ ಆಗಿದೆ. ಈ ವಿಚಾರವನ್ನು ಕರೀನಾ ಕುಟುಂಬದ ಆಪ್ತ ರೋನಿತ್ ರಾಯ್ ಹೇಳಿದ್ದಾರೆ. ಈ ದಂಪತಿಗೆ ಕಷ್ಟಕಾಲ ಎಂದು ಅನೇಕರು ಹೇಳಿದ್ದಾರೆ.

ಈ ವರ್ಷ ಜನವರಿ 16ರಂದು ಸೈಫ್ ಅಲಿ ಖಾನ್ ಅವರು ಮುಂಬೈ ನಿವಾಸದಲ್ಲಿ ಮಲಗಿದ್ದರು. ಈ ವೇಳೆ ಬಂದ ಅನಾಮಧೇಯ ವ್ಯಕ್ತಿ ಸೈಫ್​ ಮೇಲೆ ಹಲ್ಲೆ ಮಾಡಿದ. ಅಲ್ಲದೆ, ಚಾಕುವಿನಿಂದ ಇರಿದ. ಇದರಿಂದ ಸೈಫ್ ಸಾಕಷ್ಟು ರಕ್ತಸ್ರಾವ ಎದುರಿಸಿದರು. ಸೈಫ್ ಅಲಿ ಖಾನ್ ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಮರಳಿದರು. ಈ ರೀತಿ ಮರಳುವಾಗ ಕರೀನಾ ಮೇಲೆ ದಾಳಿಯ ಪ್ರಯತ್ನ ನಡೆದಿತ್ತು.

‘ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಮನೆಗೆ ಬರುವವರಿದ್ದರು. ಈ ವೇಳೆ ಸಾಕಷ್ಟು ಜನರು ಸೇರಿದ್ದರು. ಮಾಧ್ಯಮದವರು ಕೂಡ ಇದ್ದರು. ಕರೀನಾ ಆಸ್ಪತ್ರೆಯಿಂದ ಮತ್ತೊಂದು ಕಾರಲ್ಲಿ ಮೊದಲು ತೆರಳಿದ್ದರು. ಅವರ ಕಾರು ಅಟ್ಯಾಕ್ ಆಯಿತು. ಅವರಿಗೆ ಭಯ ಆಯಿತು’ ಎಂದಿದ್ದಾರೆ ರೋನಿತ್.

ಇದನ್ನೂ ಓದಿ
Image
ಶಿವು ತಾಯಿಯಾಗಿ ಗುರುತಿಸಿದ್ರು; 80ರ ದಶಕದ ಕಥೆ ಹೇಳಿದ್ದ ಪಾರ್ವತಮ್ಮ
Image
ಶಿವಣ್ಣ ಹುಟ್ಟಿದ ಬಳಿಕ ಸಂಜೆಯಿಂದ ಬೆಳಗ್ಗಿನವರೆಗೆ ಸ್ವೀಟ್ ಹಂಚಿದ್ದ ರಾಜ್​
Image
ದಳಪತಿ ವಿಜಯ್ ಚಿತ್ರದಲ್ಲಿ ನನ್ನ ಪಾತ್ರ ವೇಸ್ಟ್ ಮಾಡಿದರು; ಸಂಜಯ್ ದತ್ ಬೇಸರ
Image
ನಟ ದರ್ಶನ್ ಬಳಿಯೂ ಇತ್ತು ಹಮ್ಮರ್; ಮಾರಿದ್ದು ಏಕೆ?

‘ಹೊರಗೆ ಜನರು ಹೆಚ್ಚಿದ್ದರಿಂದ ಕರೀನಾ ಕಾರು ಅಲ್ಲಾಡಿತು. ಹೀಗಾಗಿ, ಸೈಫ್​ನ ಮನೆಗೆ ಕರೆ ತರುವಂತೆ ಅವರು ನನಗೆ ಹೇಳಿದರು. ಮನೆಗೆ ತಲುಪುವ ವೇಳೆಗೆ ಎಲ್ಲ ಕಡೆಗಳಲ್ಲಿ ಪೊಲೀಸರು ಇದ್ದರು. ಪೊಲೀಸರಿಂದ ಸಾಕಷ್ಟು ಬೆಂಬಲ ಸಿಕ್ಕಿದೆ. ಈಗ ಎಲ್ಲವೂ ಚೆನ್ನಾಗಿಯೇ ಇದೆ’ ಎಂದಿದ್ದಾರೆ ರೋನಿತ್.

ಇದನ್ನೂ ಓದಿ: ಸೈಫ್ ಅಲಿ ಖಾನ್ ಕೈತಪ್ಪಿ ಹೋಯ್ತು 15 ಸಾವಿರ ಕೋಟಿ ಮೌಲ್ಯದ ಆಸ್ತಿ

ಸೈಫ್ ಅಲಿ ಖಾನ್ ಅವರು ಈ ಕಹಿ ಘಟನೆಯನ್ನು ಮರೆಯಲು ಪ್ರಯತ್ನಿಸುತ್ತಿದ್ದಾರೆ. ಈಗ ಅವರ ಮನೆಯ ಭದ್ರತೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆ. ಯಾರೊಬ್ಬರೂ ಅವರ ಮನೆಯನ್ನು ಒಪ್ಪಿಗೆ ಇಲ್ಲದೆ ಪ್ರವೇಶಿಸುವಂತೆ ಇಲ್ಲ. ಅಲ್ಲದೆ, ಫ್ಲ್ಯಾಟ್​ನ ಎದುರು ಸಾಕಷ್ಟು ಭದ್ರತೆಯನ್ನು ಕೂಡ ಒದಗಿಸಲಾಗಿದೆ. ಇತ್ತೀಚೆಗೆ ಕರೀನಾ ಕಪೂರ್ ಅವರು ವಿದೇಶಕ್ಕೆ ಟ್ರಿಪ್ ತೆರಳಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ