ಸೈಫ್ ಅಲಿ ಖಾನ್ ಹತ್ಯಾ ಯತ್ನ: ಮತ್ತೊಬ್ಬ ಆರೋಪಿಯ ಬಂಧನ?

Saif Ali Khan: ಬಾಲಿವುಡ್​ ನಟ ಸೈಫ್ ಅಲಿ ಖಾನ್ ಹತ್ಯಾ ಯತ್ನ ಆಗಿ ಮೂರು ದಿನಗಳಾಗುತ್ತಾ ಬಂದಿದ್ದು ಈ ವರೆಗೂ ಆರೋಪಿಯ ಬಂಧನ ಆಗಿಲ್ಲ. ಇದೀಗ ಮಧ್ಯ ಪ್ರದೇಶದಲ್ಲಿ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ಈಗ ಬಂಧಿತನಾಗಿರುವ ವ್ಯಕ್ತಿ ಆರೋಪಿಯೇ ಅಥವಾ ಆರೋಪಿಯೊಟ್ಟಿಗೆ ಸಂಪರ್ಕದಲ್ಲಿರುವ ವ್ಯಕ್ತಿಯೇ ಎಂಬ ಬಗ್ಗೆ ಮಾಹಿತಿ ಇಲ್ಲ.

ಸೈಫ್ ಅಲಿ ಖಾನ್ ಹತ್ಯಾ ಯತ್ನ: ಮತ್ತೊಬ್ಬ ಆರೋಪಿಯ ಬಂಧನ?
Saif Ali Khan
Follow us
ಮಂಜುನಾಥ ಸಿ.
|

Updated on: Jan 18, 2025 | 7:08 PM

ಬಾಲಿವುಡ್ ನಟ ಸೈಫ್ ಅಲಿ ಖಾನ್ ಹತ್ಯಾ ಪ್ರಯತ್ನ ನಡೆದು ಮೂರು ದಿನವಾಗುತ್ತಾ ಬಂದಿದೆ. ಆದರೆ ಆರೋಪಿಯ ಬಂಧನದ ಬಗ್ಗೆ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಭಾರತದ ಪೊಲೀಸ್ ವ್ಯವಸ್ಥೆಯಲ್ಲಿಯೇ ಅತ್ಯಂತ ಸುಸಜ್ಜಿತ ಎನಿಸಿಕೊಂಡಿರುವ ಮುಂಬೈ ಪೊಲೀಸರಿಗೂ ಸಹ ಈ ಪ್ರಕರಣ ಸವಾಲಾಗಿ ಪರಿಣಿಮಿಸಿದೆ. ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ಆರೋಪಿಯ ಬಂಧನದ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ ಆದರೆ ಯಾವುದೂ ಸಹ ಖಾತ್ರಿ ಆಗಿಲ್ಲ.

ಈಗಾಗಲೇ ಆರೋಪಿಯ ಬಂಧನ ಆಗಿದೆ ಎಂಬ ಸುದ್ದಿ ಹರಿದಾಡಿತ್ತು, ಆದರೆ ಮುಂಬೈ ಪೊಲೀಸರು ಅದನ್ನು ತಳ್ಳಿ ಹಾಕಿದ್ದು, ಯಾರನ್ನೂ ಬಂಧಿಸಲಾಗಿಲ್ಲ ಎಂದಿದ್ದರು. ಇದೀಗ ಮಧ್ಯ ಪ್ರದೇಶದಲ್ಲಿ ಆರೋಪಿಯ ಬಂಧನ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿಯನ್ನೇ ಬಂಧಿಸಲಾಗಿದೆಯೇ ಅಥವಾ ದಾಳಿಕೋರನಿಗೆ ಸಂಬಂಧಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆಯೇ ಎಂಬ ಬಗ್ಗೆ ಖಾತ್ರಿ ಇಲ್ಲ.

ಈ ಹಿಂದೆ ಛತ್ತೀಸ್​ಘಡದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂಬ ಸುದ್ದಿ ಹರಡಿತ್ತು, ಆರೋಪಿ ಎಂದು ಹೇಳಲಾದ ವ್ಯಕ್ತಿಯ ಚಿತ್ರ ಸಹ ಹರಿದಾಡಿತ್ತು. ಆದರೆ ಆ ನಂತರ ಮುಂಬೈ ಪೊಲೀಸರು, ತಾವು ಯಾರನ್ನೂ ಬಂಧಿಸಿಲ್ಲ ಎಂದರು. ಇದೀಗ ಮತ್ತೊಂದು ಸುದ್ದಿ ಹರಿದಾಡುತ್ತಿದ್ದು, ಮಧ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಆದರೆ ಮಧ್ಯ ಪ್ರದೇಶದಲ್ಲಿ ಬಂಧಿಸಲಾಗಿರುವ ವ್ಯಕ್ತಿ ಆರೋಪಿಯೋ ಅಥವಾ ಆರೋಪಿಗೆ ಸಂಬಂಧಿಸಿದ ವ್ಯಕ್ತಿಯೋ ಎಂಬ ಬಗ್ಗೆ ಮಾಹಿತಿ ಇಲ್ಲ.

ಇದನ್ನೂ ಓದಿ:ಸೈಫ್ ಅಲಿ ಖಾನ್ ಆಸ್ಪತ್ರೆ ಬಿಲ್ ಲೀಕ್; ಖರ್ಚಾದ ಹಣ ಎಷ್ಟು ಲಕ್ಷ?

ಬುಧವಾರ ತಡರಾತ್ರಿ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ಅಗಂತುಕನೊಬ್ಬ ಸೈಫ್ ಅಲಿ ಖಾನ್ ಮೇಲೆ ಚಾಕೂವಿನಿಂದ ದಾಳಿ ಮಾಡಿದ್ದ. ಆರು ಬಾರಿ ಸೈಫ್ ಅಲಿ ಖಾನ್​ಗೆ ಚುಚ್ಚಿ ಪರಾರಿಯಾಗಿದ್ದ. ಸೈಫ್ ಅಲಿ ಖಾನ್ ಪ್ರಸ್ತುತ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೈಫ್ ಅಲಿ ಖಾನ್ ಬೆನ್ನಿನಲ್ಲಿ ಮೂರು ಇಂಚಿನ ಚಾಕು ಸೇರಿಕೊಂಡಿತ್ತು, ಅದನ್ನೂ ಸಹ ವೈದ್ಯರು ತೆಗೆದಿದ್ದಾರೆ. ಸೈಫ್ ಅಲಿ ಖಾನ್ ಪ್ರಕರಣದ ತನಿಖೆಗೆ ಏಳು ತಂಡಗಳನ್ನು ರಚಿಸಲಾಗಿದೆ. ತನಿಖಾ ತಂಡದಲ್ಲಿ ಖ್ಯಾತ ಎನ್​ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್ ಸಹ ಇದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?