ಸೈಫ್​ ಅಲಿ ಖಾನ್​ಗೆ ಯಾಕೆ ಈ ಗತಿ? ಕಳೆದೇ ಹೋಯ್ತು ಫಿಟ್​ನೆಸ್​​

ಯಶ್​ ರಾಜ್​ ಫಿಲ್ಮ್ಸ್​ ನಿರ್ಮಾಣ ಮಾಡಿರುವ ‘ಬಂಟಿ ಔರ್​ ಬಬ್ಲಿ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸೈಫ್​ ಅವರು ರಾಕೇಶ್​ ಅಲಿಯಾಸ್​ ಬಂಟಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಸೈಫ್​ ಅಲಿ ಖಾನ್​ಗೆ ಯಾಕೆ ಈ ಗತಿ? ಕಳೆದೇ ಹೋಯ್ತು ಫಿಟ್​ನೆಸ್​​
ಸೈಫ್​ ಅಲಿ ಖಾನ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 23, 2021 | 2:51 PM

ಸಿನಿಮಾಗಾಗಿ ತೂಕ ಹೆಚ್ಚಿಸಿಕೊಳ್ಳೋಕೆ ಎಲ್ಲಾ ನಟರು ಒಪ್ಪುವುದಿಲ್ಲ. ಏಕೆಂದರೆ, ಅದಕ್ಕಾಗಿ ಹೆಚ್ಚು ಶ್ರಮ ಹಾಕಬೇಕು. ಈ ರೀತಿಯ ಪಾತ್ರಗಳಲ್ಲಿ ನಟಿಸುವಾಗ ಬೇರೆ ಸಿನಿಮಾಗಳಲ್ಲಿ ನಟಿಸೋಕೆ ಸಾಧ್ಯವಾಗುವುದಿಲ್ಲ. ಆದರೆ, ಈಗ ಸೈಫ್​ ಅಲಿ ಖಾನ್ ಹೀಗೊಂದು ಚಾಲೆಂಜಿಂಗ್​ ಪಾತ್ರ ಒಪ್ಪಿಕೊಂಡು ನಟಿಸಿದ್ದಾರೆ. ಈ ಫೋಟೋ ಈಗ ವೈರಲ್​ ಆಗಿದೆ. ಇದನ್ನು ನೋಡಿ ಅಭಿಮಾನಿಗಳು ಅಚ್ಚರಿ ಹೊರ ಹಾಕಿದ್ದಾರೆ.

‘ಹಮ್​ ತುಮ್’​, ‘ತಾ ರಾ ರಮ್​ ಪಮ್​’ ಸಿನಿಮಾದಲ್ಲಿ ಸೈಫ್​ ಅಲಿ ಖಾನ್​ ಹಾಗೂ ರಾಣಿ ಮುಖರ್ಜಿ ಒಟ್ಟಾಗಿ ನಟಿಸಿದ್ದರು. ಈ ಜೋಡಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು. ಈಗ ಈ ಜೋಡಿ ಮತ್ತೆ ಒಂದಾಗಿದೆ. ಯಶ್​ ರಾಜ್​ ಫಿಲ್ಮ್ಸ್​ ನಿರ್ಮಾಣ ಮಾಡಿರುವ ‘ಬಂಟಿ ಔರ್​ ಬಬ್ಲಿ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಸೈಫ್​ ಅವರು ರಾಕೇಶ್​ ಅಲಿಯಾಸ್​ ಬಂಟಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾ ಕಾಮಿಡಿ ಕಥಾ ಹಂದರ ಹೊಂದಿದ್ದು, ಸೈಫ್​ ಅವರು ರೈಲ್ವೇ ಟಿಕೆಟ್​ ಕಲೆಕ್ಟರ್​ ಆಗಿ ಕಾಣಿಸಿಕೊಂಡಿದ್ದಾರೆ. ಫುರಸತ್​ಗಂಜ್​ನಲ್ಲಿ ಈ ಸಿನಿಮಾದ ಕಥೆ ಸಾಗಲಿದೆ.

ಸೈಫ್​ ಅವರು ಈ ಸಿನಿಮಾಗಾಗಿ ಸಾಕಷ್ಟು ದೇಹದ ತೂಕ ಹೆಚ್ಚಿಸಿಕೊಂಡಿದ್ದಾರೆ. ಈ ಚಿತ್ರದ ಪೋಸ್ಟರ್​ ರಿಲೀಸ್​ ಆಗಿದೆ. ಫ್ಯಾಮಿಲಿ ಡ್ರಾಮಾ ಕೂಡ ಈ ಸಿನಿಮಾದಲ್ಲಿ ಇರಲಿದೆ.  ಅವರ ವೃತ್ತಿ ಬದುಕಿನಲ್ಲಿ ಇದು ಭಿನ್ನ ಸಿನಿಮಾ ಆಗಿರಲಿದೆ. ‘ಈ ಚಿತ್ರಕ್ಕಾಗಿ ತೂಕ ಹೆಚ್ಚಿಸಿಕೊಂಡೆ. ನಂತರ ಉಳಿದ ಸಿನಿಮಾ ಶೂಟಿಂಗ್​ನಲ್ಲಿ ಪಾಲ್ಗೊಳ್ಳುವ ಕಾರಣಕ್ಕೆ ಬೇಗನೆ ತೂಕ ಇಳಿಸಿಕೊಂಡೆ. ಇದು ಕಷ್ಟದ ಪ್ರಕ್ರಿಯೆ​ ಆಗಿತ್ತು’ ಎಂದಿದ್ದಾರೆ ಅವರು.

‘ಬಂಟಿ ಔರ್​ ಬಬ್ಲಿ 2’ ಸೈಫ್​ ಜತೆಗೆ ರಾಣಿ ಮುಖರ್ಜಿ ನಟಿಸಿದ್ದಾರೆ. ನವೆಂಬರ್​ 19ರಂದು ಸಿನಿಮಾ ತೆರೆಗೆ ಬರುತ್ತಿದೆ. ವರುಣ್​ ವಿ. ಶರ್ಮಾ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ‘ಸುಲ್ತಾನ್​’ ಮತ್ತು ಟೈಗರ್​ ಜಿಂದಾ ಹೈ ಸಿನಿಮಾಗೆ ವರುಣ್​ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅಕ್ಟೋಬರ್ 25ರಂದು ಸಿನಿಮಾದ ಟ್ರೇಲರ್ ರಿಲೀಸ್​ ಆಗಲಿದೆ.

ಇದನ್ನೂ ಓದಿ: ಗಣೇಶನಿಗೆ ಕೈ ಮುಗಿದ ಸೈಫ್​ ಅಲಿ ಖಾನ್​ ವಿರುದ್ಧ ಒಂದು ವರ್ಗದ ನೆಟ್ಟಿಗರು ಗರಂ; ಹಬ್ಬದ ನಡುವೆ ಟ್ರೋಲ್​​

ಯಶ್​ ರಿಜೆಕ್ಟ್​ ಮಾಡಿದ್ದ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟಿಸಿ ಹೀನಾಯವಾಗಿ ಸೋತರು; ಯಾವುದು ಆ ಸಿನಿಮಾ?

Published On - 2:48 pm, Sat, 23 October 21

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್