AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ ಚಿತ್ರದ ನಂತರ ಬಾಲಿವುಡ್ ಬದಲಾಗಿದೆ, ನಾವು ಎಚ್ಚೆತ್ತುಕೊಳ್ಳಬೇಕು’: ಸೈಫ್ ಅಲಿ ಖಾನ್

ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ 'ಧುರಂಧರ್' ಚಿತ್ರಗಳು ಭಾರಿ ಯಶಸ್ಸು ಕಂಡಿವೆ. ಸೈಫ್ ಅಲಿ ಖಾನ್ 'ಧುರಂಧರ್' ಸಂಗೀತದ ಬಳಕೆಯನ್ನು ಕೊಂಡಾಡಿದ್ದು, ಇದು ಚಿತ್ರರಂಗದಲ್ಲಿ ಕ್ರಾಂತಿಕಾರಿ ಹೆಜ್ಜೆ ಎಂದಿದ್ದಾರೆ. ಚಿತ್ರರಂಗವನ್ನು 'ಧುರಂಧರ್' ಬರುವ ಮುಂಚೆ ಮತ್ತು ಬಂದ ನಂತರ ಎಂದು ನೋಡಬೇಕು ಎಂದಿದ್ದಾರೆ ಸೈಫ್.

'ಧುರಂಧರ್ ಚಿತ್ರದ ನಂತರ ಬಾಲಿವುಡ್ ಬದಲಾಗಿದೆ, ನಾವು ಎಚ್ಚೆತ್ತುಕೊಳ್ಳಬೇಕು’: ಸೈಫ್ ಅಲಿ ಖಾನ್
ರಣವೀರ್-ಸೈಫ್
ರಾಜೇಶ್ ದುಗ್ಗುಮನೆ
|

Updated on: Jul 09, 2026 | 1:04 PM

Share

ಮುಖ್ಯಾಂಶಗಳು

  • 'ಧುರಂಧರ್' ಚಿತ್ರದ ಹೊಸ ಸಂಗೀತ ತಂತ್ರಕ್ಕೆ ಸೈಫ್ ಫಿದಾ
  • ಬಾಲಿವುಡ್ ಚಿತ್ರರಂಗ ಬದಲಿಸಿದ ರಣವೀರ್ ಸಿಂಗ್ ಚಿತ್ರದ ಪ್ರಭಾವ
  • ಬಾಕ್ಸ್ ಆಫೀಸ್‌ನಲ್ಲಿ 3100 ಕೋಟಿ ಬಾಚಿದ 'ಧುರಂಧರ್',‘ಧುರಂಧರ್ 2’

ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಈ ಚಿತ್ರವನ್ನು ಅನೇಕರು ಹೊಗಳಿದ್ದಾರೆ. ಈಗ ಆ ಸಾಲಿಗೆ ಬಾಲಿವುಡ್ ನಟ ಸೈಫ್ ಅಲಿ ಖಾನ್ ಕೂಡ ಸೇರಿದ್ದಾರೆ. ಈ ಚಿತ್ರದ ಬಿಡುಗಡೆಯ ನಂತರ ಭಾರತೀಯ ಚಿತ್ರರಂಗದ ಚಿತ್ರಣವೇ ಬದಲಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಸೈಫ್, ‘ಧುರಂಧರ್’ ಚಿತ್ರದ ಸಂಗೀತದ ಬಳಕೆಯನ್ನು ಕೊಂಡಾಡಿದ್ದಾರೆ. ಇದು ಚಿತ್ರರಂಗದಲ್ಲಿ ಒಂದು ಕ್ರಾಂತಿಕಾರಿ ಹೆಜ್ಜೆ ಎಂದು ಅವರು ಬಣ್ಣಿಸಿದ್ದಾರೆ. ಕೆಲವು ಸಿನಿಮಾಗಳು ಒತ್ತಾಯ ಪೂರ್ವಕವಾಗಿ ಹಾಡುಗಳನ್ನು ತುರುಕುತ್ತಾರೆ. ‘ಧುರಂಧರ್’ ಸಿನಿಮಾದಲ್ಲಿ ಆ ರೀತಿ ಆಗಿಲ್ಲ ಎಂಬುದು ಅವರ ಅಭಿಪ್ರಾಯ.

ಸಂಗೀತದ ಬಗ್ಗೆ ಸೈಫ್ ಹೇಳಿದ್ದೇನು?

‘ನಾನು ಚಿತ್ರರಂಗವನ್ನು ಧುರಂಧರ್ ಬರುವ ಮುಂಚೆ ಮತ್ತು ಬಂದ ನಂತರ ಎಂದು ನೋಡುತ್ತಿದ್ದೇನೆ. ಈ ಬದಲಾವಣೆಗೆ ತಕ್ಕಂತೆ ನಾವು ಎಚ್ಚೆತ್ತುಕೊಳ್ಳಬೇಕು. ಪ್ರತಿ ಚಿತ್ರಕ್ಕೆ ಹೊಸ ಆಲ್ಬಂ ಮಾಡುವ ಬದಲು, ಪ್ರಪಂಚದಾದ್ಯಂತ ಇರುವ ಅತ್ಯುತ್ತಮ ಸಂಗೀತವನ್ನು ಬಳಸುವುದು ಒಳ್ಳೆಯ ಆಲೋಚನೆ’ ಎಂದು ಸೈಫ್ ಹೇಳಿದ್ದಾರೆ.

‘ಧುರಂಧರ್’ ಚಿತ್ರಕ್ಕೆ ಶಾಶ್ವತ್ ಸಚದೇವ್ ಸಂಗೀತ ನೀಡಿದ್ದಾರೆ. ಅವರು ‘ಶರಾರತ್’ ನಂತಹ ಹೊಸ ಹಾಡುಗಳ ಜೊತೆಗೆ, ಹಳೆಯ ಸೂಪರ್ ಹಿಟ್ ಹಾಡುಗಳನ್ನು ರೀಮಿಕ್ಸ್ ಮಾಡಿ ಬಳಸಿದ್ದಾರೆ. ಈ ಪ್ರಯೋಗಕ್ಕೆ ಸೈಫ್ ಕಡೆಯಿಂದ ಮೆಚ್ಚುಗೆ ಸಿಕ್ಕಿದೆ. ಈ ರೀತಿಯ ಕೆಲಸ ಎಲ್ಲರಿಂದಲೂ ಆಗಬೇಕು ಎಂಬುದು ಅವರ ಆಸೆ.

ಇದನ್ನೂ ಓದಿ: ‘ಡಾನ್ 3’ ವಿವಾದ: ರಣವೀರ್ ಸಿಂಗ್ ದೊಡ್ಡ ನಿರ್ಧಾರ; 18 ತಿಂಗಳು ಯಾರಿಗೂ ಸಿಗಲ್ಲ ನಟ

‘ಧುರಂಧರ್’ ಹಾಗೂ ‘ಧುರಂಧರ್ 2’ ಭಾರಿ ಯಶಸ್ಸು ಕಂಡಿವೆ. ಈ ಸಿನಿಮಾಗಳು ಒಟ್ಟಾರೆಯಾಗಿ 3,100 ಕೋಟಿ ರೂಪಾಯಿಗಳಿಗೂ ಹೆಚ್ಚು ಕಲೆಕ್ಷನ್ ಮಾಡಿವೆ. ‘ಧುರಂಧರ್ 2’ ಭಾರತದ ಎರಡನೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರಗಳಲ್ಲಿ ರಣವೀರ್ ಸಿಂಗ್, ಅಕ್ಷಯ್ ಖನ್ನಾ, ಸಂಜಯ್ ದತ್ ಮತ್ತು ಮಾಧವನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಸೈಫ್ ಅಲಿ ಖಾನ್ ಮುಂದಿನ ಚಿತ್ರಗಳು

ಸೈಫ್ ಅಲಿ ಖಾನ್ ಇತ್ತೀಚೆಗೆ ನೆಟ್‌ಫ್ಲಿಕ್ಸ್‌ನ ‘ಕರ್ತವ್ಯ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ನಟನೆಗೆ ಒಳ್ಳೆಯ ಪ್ರಶಂಸೆ ಸಿಕ್ಕಿತ್ತು. ಸದ್ಯ ಅವರು ‘ಹಮ್ ಹಿಂದೂಸ್ತಾನಿ’ ಮತ್ತು ಪ್ರಿಯದರ್ಶನ್ ನಿರ್ದೇಶನದ ‘ಹೈವಾನ್’ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಹೈವಾನ್’ ಚಿತ್ರದ ಮೂಲಕ ಅವರು ಸುಮಾರು ಎರಡು ದಶಕಗಳ ನಂತರ ಅಕ್ಷಯ್ ಕುಮಾರ್ ಜೊತೆ ಮತ್ತೆ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ