ಸೈಫ್​ಗೆ ಚಾಕು ಇರಿತಕ್ಕೂ ಮುನ್ನ 3 ವರ್ಷದ ಮಗುವಿನ ರೂಮಿಗೆ ನುಗ್ಗಿ 1 ಕೋಟಿ ರೂ. ಕೇಳಿದ ಕಳ್ಳ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮನೆಗೆ ಕಳ್ಳರು ದಾಳಿ ಮಾಡಿ, ಹಲ್ಲೆ ನಡೆಸಿದ ಘಟನೆ ಭಾರಿ ಸಂಚಲನ ಮೂಡಿಸಿದೆ. ಈ ಘಟನೆಯ ವಿವರಗಳು ಭಯಾನಕವಾಗಿವೆ. ಕಿಡಿಗೇಡಿಗಳು ಸೈಫ್ ಅಲಿ ಖಾನ್​ಗೆ ಚಾಕು ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಅದಕ್ಕೂ ಮುನ್ನ ಸೈಫ್ ಕೊನೇ ಪುತ್ರ ಜೇಹ್ ಅಲಿ ಖಾನ್ ಇರುವ ರೂಮಿಗೂ ಕಳ್ಳರು ನುಗ್ಗಿದ್ದರು.

ಸೈಫ್​ಗೆ ಚಾಕು ಇರಿತಕ್ಕೂ ಮುನ್ನ 3 ವರ್ಷದ ಮಗುವಿನ ರೂಮಿಗೆ ನುಗ್ಗಿ 1 ಕೋಟಿ ರೂ. ಕೇಳಿದ ಕಳ್ಳ
Jeh Ali Khan, Saif Ali Khan
Follow us
ಮದನ್​ ಕುಮಾರ್​
|

Updated on: Jan 16, 2025 | 8:46 PM

ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ಅವರ ಅಪಾರ್ಟ್​ಮೆಂಟ್​ಗೆ ಕಳ್ಳರು ನುಗ್ಗಿದ್ದಾರೆ. ಇಬ್ಬರು ಖದೀಮರು ಸೈಫ್ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಅನೇಕರಿಂದ ಹೇಳಿಕೆ ಪಡೆದುಕೊಳ್ಳುತ್ತಿದ್ದಾರೆ. ದರೋಡೆ ಮತ್ತು ಸೈಫ್ ಅಲಿ ಖಾನ್ ಅವರ ಮೇಲೆ ಹಲ್ಲೆಯ ವಿವರಗಳು ಶಾಕಿಂಗ್ ಆಗಿವೆ. ಮಾಧ್ಯಮಗಳ ವರದಿಗಳ ಪ್ರಕಾರ, ಸೈಫ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್​ ಒಬ್ಬರು ಪೊಲೀಸರ ಎದುರು ಕೆಲವು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಫೈರ್​ ಎಕ್ಸಿಟ್ ಬಳಸಿಕೊಂಡು ಸೈಫ್ ಅಲಿ ಖಾನ್ ಅವರ ಮನೆಗೆ ಕಳ್ಳರು ನುಗ್ಗಿದರು. ಗುರುವಾರ (ಜನವರಿ 16) ನಸುಕಿನ 2.30ರ ಸುಮಾರಿಗೆ ಈ ಘಟನೆ ನಡೆಯಿತು. ಆ ವೇಳೆಗೆ ಮನೆಯಲ್ಲಿ ಇದ್ದ ಎಲ್ಲರೂ ಮಲಗಿದ್ದರು. ಸೈಫ್ ಅಲಿ ಖಾನ್ ಪುತ್ರ ಜೇಹ್ ಅಲಿ ಖಾನ್ ಮಲಗಿದ್ದ ಕೋಣೆಗೆ ನುಗ್ಗಿದ ಕಳ್ಳನೊಬ್ಬ 1 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟ ಎಂದು ನರ್ಸ್​ ಹೇಳಿದ್ದಾರೆ.

ಆದರೆ ಅಷ್ಟು ಹಣವನ್ನು ನೀಡಲು ನರ್ಸ್​ ನಿರಾಕರಿಸಿದರು. ಆಗ ಅವರ ಮೇಲೆ ಕಳ್ಳ ಅಟ್ಯಾಕ್ ಮಾಡಿದ. ಅದರಿಂದ ನರ್ಸ್​ಗೆ ಸಾಕಷ್ಟು ಗಾಯಗಳಾದವು. ಚಾಕು ಮತ್ತು ಕೋಲನ್ನು ಆ ಖದೀಮ ಹಿಡಿದುಕೊಂಡಿದ್ದ. ಅಂದಾಜು 35 ವರ್ಷ ವಯಸ್ಸಿನ ಆ ವ್ಯಕ್ತಿಯ ಚಹರೆ ಹೇಗಿತ್ತು ಎಂಬುದನ್ನು ಪೊಲೀಸರ ಎದುರು ನರ್ಸ್​ ಹೇಳಿದ್ದಾರೆ. ಈಗಾಗಲೇ ಆತನ ಗುರುತು ಪತ್ತೆ ಆಗಿದ್ದು, ಶೀಘ್ರದಲ್ಲೇ ಬಂದಿಸುವುದಾಗಿ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಸೈಫ್ ಅಲಿ ಖಾನ್​ಗೆ ಚಾಕು ಇರಿತ: ಶಂಕಿತ ವ್ಯಕ್ತಿಯ ಫೋಟೋ ಬಹಿರಂಗ

ಜೇಹ್ ಅಲಿ ಖಾನ್ ಮಲಗಿದ್ದ ಕೋಣೆಗೆ ನುಗ್ಗಿದ್ದ ಕಳ್ಳ ಈ ರೀತಿ ದಾಂದಲೆ ಮಾಡಿದಾಗ ಇಡೀ ಮನೆಯಲ್ಲಿ ಇದ್ದವರಿಗೆ ಎಚ್ಚರ ಆಯಿತು. ಆಗ ಸೈಫ್ ಅಲಿ ಖಾನ್ ಅವರು ಹೆಂಡತಿ, ಮಕ್ಕಳನ್ನು ರಕ್ಷಿಸಲು ಪ್ರಯತ್ನಿಸಿರು. ಆ ಸಂದರ್ಭದಲ್ಲಿ ಸೈಫ್ ಮೇಲೆ ಕಳ್ಳ ದಾಳಿ ಮಾಡಿದ್ದಾನೆ. ಈ ದಾಳಿಯಲ್ಲಿ ಸೈಫ್ ಅವರಿಗೆ ಅನೇಕ ಗಂಭೀರ ಗಾಯಗಳು ಆಗಿವೆ. ಮನೆಯಲ್ಲಿ ಇರುವ ಇನ್ನೂ ಹೆಚ್ಚಿನ ಸಿಬ್ಬಂದಿ ಆಗಮಿಸುವುದರೊಳಗೆ ಕಳ್ಳ ಎಸ್ಕೇಪ್ ಆಗಿದ್ದಾನೆ. ಸೈಫ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ. ಈಗ ಅವರು ಸುಧಾರಿಸಿಕೊಳ್ಳುತ್ತಿದ್ದಾರೆ. ಸರ್ಜರಿ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ
ಎರಡೆರಡು ಹುದ್ದೆಗಳನ್ನು ನಿಭಾಯಿಸುವುದು ಕಷ್ಟವಾಗುತ್ತದೆ: ಪರಮೇಶ್ವರ್
ಎರಡೆರಡು ಹುದ್ದೆಗಳನ್ನು ನಿಭಾಯಿಸುವುದು ಕಷ್ಟವಾಗುತ್ತದೆ: ಪರಮೇಶ್ವರ್
ಕಟ್ಟಡದ 13ನೇ ಮಹಡಿಯಿಂದ ಮೂರು ಬಾರಿ ಜಿಗಿದರೂ ಬದುಕಿದ ಕಾರ್ಮಿಕ
ಕಟ್ಟಡದ 13ನೇ ಮಹಡಿಯಿಂದ ಮೂರು ಬಾರಿ ಜಿಗಿದರೂ ಬದುಕಿದ ಕಾರ್ಮಿಕ
39ನೇ ವಯಸ್ಸಿನಲ್ಲೂ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್
39ನೇ ವಯಸ್ಸಿನಲ್ಲೂ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್
ಸಾರ್ವಜನಿಕರು ಅಂತಿಮ ನಮನ ಸಲ್ಲಿಸಲು ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ
ಸಾರ್ವಜನಿಕರು ಅಂತಿಮ ನಮನ ಸಲ್ಲಿಸಲು ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ