‘ನಮ್ಮ ಪಾಡಿಗೆ ನಮ್ಮ ಬಿಟ್ಟು ಬಿಡಿ’; ಕೈ ಮುಗಿದು ಕೋರಿದ ಕರೀನಾ ಕಪೂರ್

ಸೈಫ್ ಅಲಿ ಖಾನ್ ಅವರು ಚಾಕುವಿನಿಂದ ಇರಿತಕ್ಕೆ ಒಳಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೀನಾ ಕಪೂರ್ ಅವರು ಪಾಪರಾಜಿಗಳ ಕೆಲಸಕ್ಕೆ ಸಿಟ್ಟಾಗಿದ್ದು, ಖಾಸಗಿತನಕ್ಕೆ ಗೌರವ ನೀಡುವಂತೆ ಮನವಿ ಮಾಡಿದ್ದಾರೆ. ಸೈಫ್ ಅವರ ಚೇತರಿಕೆಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ .

‘ನಮ್ಮ ಪಾಡಿಗೆ ನಮ್ಮ ಬಿಟ್ಟು ಬಿಡಿ’; ಕೈ ಮುಗಿದು ಕೋರಿದ ಕರೀನಾ ಕಪೂರ್
ಕರೀನಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Jan 21, 2025 | 10:58 AM

ಸೈಫ್ ಅಲಿ ಖಾನ್ ಅವರು ಸದ್ಯ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಕುವಿನಿಂದ ಇರಿತಕ್ಕೆ ಒಳಗಾದ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಕಳ್ಳ ಮಾಡಿದ ಅವಾಂತರದಿಂದ ಸೈಫ್ ಕುಟುಂಬ ಇಷ್ಟೆಲ್ಲ ಸಮಸ್ಯೆ ಎದುರಿಸಬೇಕಾಯಿತು. ಅವರಿಗೆ ಏನಾಗಿದೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಎಲ್ಲರಿಗೂ ಇದೆ. ಅವರ ಆರೋಗ್ಯದ ಬಗ್ಗೆ ಪದೇ ಪದೇ ಅಪ್​ಡೇಟ್ ಕೇಳಲಾಗುತ್ತಿದೆ. ಇದನ್ನು ಕೊಡಲು ಪಾಪರಾಜಿಗಳು ಕೂಡ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಕರೀನಾ ಕಪೂರ್ ಸಿಟ್ಟಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

ಕರೀನಾ ಕಪೂರ್ ಅವರು ಸದ್ಯ ಟೆನ್ಷನ್​ನಲ್ಲಿ ಇದ್ದಾರೆ. ಕುಟುಂಬಕ್ಕೆ ಈ ಪರಿಸ್ಥಿತಿ ಬಂದಿರುವುದರಿಂದ ಅವರು ಸಾಕಷ್ಟು ಆಘಾತದಲ್ಲಿ ಇದ್ದಾರೆ. ಅವರ ಕುಟುಂಬ ಕಷ್ಟದಲ್ಲಿ ಇದೆ. ಈ ಕಷ್ಟದ ಪರಿಸ್ಥಿತಿಯಲ್ಲಿ ಖಾಸಗಿತನಕ್ಕೆ ಗೌರವ ನೀಡಿ ಎಂದು ಕೋರಿದ್ದಾರೆ. ಆದರೆ, ಇದನ್ನು ಯಾರೂ ಪಾಲಿಸುತ್ತಿಲ್ಲ.

ಕರೀನಾ ಮನೆಗೆ ಆಟಿಕೆ ತರುತ್ತಿರುವುದು ವಿಡಿಯೋ ವೈರಲ್ ಆಗಿದೆ. ಈ ವಿಡಿಯೋನ ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ‘ತೈಮೂರ್ ಹಾಗೂ ಜೇ ಅಲಿಗೆ ಹೊಸ ಆಟಿಕೆ’ ಎಂದು ವಿಡಿಯೋಗೆ ಕ್ಯಾಪ್ಶನ್ ನೀಡಲಾಗಿತ್ತು. ಇದು ಕರೀನಾ ಗಮನಕ್ಕೆ ಬಂದಿದೆ. ‘ಇದನ್ನು ಈಗಲೇ ನಿಲ್ಲಿಸಿ. ನಿಮಗೆ ಹೃದಯ ಇದೆಯೇ? ನಮ್ಮನ್ನು ಒಂಟಿಯಾಗಿ ಇರಲು ಬಿಡಿ’ ಎಂದು ಕರೀನಾ ಸಿಟ್ಟಲ್ಲಿ ಬರೆದುಕೊಂಡಿದ್ದರು. ಇದಕ್ಕೆ ನಮಸ್ಕರಿಸುತ್ತಿರುವ ಎಮೋಜಿ ಕೂಡ ಹಾಕಿದ್ದಾರೆ. ಆ ಬಳಿಕ ಏನನ್ನಿಸಿತೋ ಏನೋ ನಂತರ ಅದನ್ನು ಡಿಲೀಟ್ ಮಾಡಿದ್ದಾರೆ.

ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ಮಕ್ಕಳಾದ ತೈಮೂರ್ ಹಾಗೂ ಜೇ ಅಲಿ ಖಾನ್ ಇತ್ತೀಚೆಗೆ ಆಸ್ಪತ್ರೆಗೆ ಬಂದು ತಂದೆಯ ಆರೋಗ್ಯ ವಿಚಾರಿಸಿದ್ದರು. ಇವರ ಜೊತೆ ಸೈಫ್ ಸಹೋದರಿ ಸೋಹಾ ಅಲಿ ಖಾನ್ ಕೂಡ ಆಗಮಿಸಿದ್ದರು. ಸೈಫ್ ತಾಯಿ ಶರ್ಮಿಳಾ ಟಾಗೋರ್ ಕೂಡ ಇತ್ತೀಚೆಗೆ ಆಗಮಿಸಿ ಮಗನ ಆರೋಗ್ಯ ವಿಚಾರಿಸಿದ್ದರು. ಇದನ್ನೂ ಓದಿ:  ಚಾಕು ಇರಿತದಿಂದ ಸೈಫ್ ಅಲಿ ಖಾನ್​ ಸ್ಥಿತಿ ಗಂಭೀರ; ನಟಿ ಕರೀನಾ ಕಪೂರ್ ಬಚಾವ್ ಆಗಿದ್ದು ಹೇಗೆ?

ಮೊಹಮದ್ ಶೈಫುಲ್ಲಾ ಇಸ್ಲಾಮ್ ಶಹಜಾದ್ ಎಂಬಾತ ಸೈಫ್ ಮೇಲೆ ದಾಳಿ ಮಾಡಿದವನು. ಅವನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಐದು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆತ ದಾಳಿ ಮಾಡಿದ್ದನ್ನು ಒಪ್ಪಿಕೊಡಿದ್ದಾನೆ.

ಸೈಫ್ ಅಲಿ ಖಾನ್ ಅವರು ಚೇತರಿಕೆಯ ಹಂತದಲ್ಲಿ ಇದ್ದಾರೆ. ಶೀಘ್ರವೇ ಅವರು ನಟನೆಗೆ ಮರಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಈಗಾಗಲೇ ಒಂದು ಆಪರೇಷನ್ ನಡೆಸಿದ್ದು, 35 ಲಕ್ಷ ರೂಪಾಯಿ ಬಿಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ