AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಲಸ ಮುಗಿಸಿ ರಾತ್ರಿ 11 ಗಂಟೆಗೆ ಮನೆಗೆ ಹೋದ್ರೆ ಅದು ಜೀವನವೇ ಅಲ್ಲ’: ಸೈಫ್ ಅಲಿ ಖಾನ್

ವೃತ್ತಿಜೀವನಕ್ಕೆ ಹೆಚ್ಚು ಮಹತ್ವ ನೀಡಿದರೆ ವೈಯಕ್ತಿಕ ಬದುಕು ಹಾಳಾಗುತ್ತದೆ. ನಟ ಸೈಫ್ ಅಲಿ ಖಾನ್ ಅವರಿಗೂ ಅಂತಹ ಅನುಭವ ಆಗಿದೆ. ಆ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಕೆಲಸದ ಸಲುವಾಗಿ ಖಾಸಗಿ ಬದುಕಿನಲ್ಲಿ ತಾವು ಹಲವು ತ್ಯಾಗಗಳನ್ನು ಮಾಡಿರುವುದಾಗಿ ಸೈಫ್ ಅಲಿ ಖಾನ್ ಹೇಳಿದ್ದಾರೆ.

‘ಕೆಲಸ ಮುಗಿಸಿ ರಾತ್ರಿ 11 ಗಂಟೆಗೆ ಮನೆಗೆ ಹೋದ್ರೆ ಅದು ಜೀವನವೇ ಅಲ್ಲ’: ಸೈಫ್ ಅಲಿ ಖಾನ್
Saif Ali Khan
ಮದನ್​ ಕುಮಾರ್​
|

Updated on: May 15, 2026 | 3:43 PM

Share

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ತಮ್ಮ ಹೊಸ ಸಿನಿಮಾ ‘ಕರ್ತವ್ಯ’ (Kartavya) ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರು ‘ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್’ ಸಂಸ್ಥೆಯ ಮೂಲಕ ನಿರ್ಮಿಸಿದ್ದಾರೆ. 2022ರಿಂದ ವರ್ಷಕ್ಕೆ ಒಂದೇ ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಸೈಫ್, ಇತ್ತೀಚಿನ ಸಂದರ್ಶನವೊಂದರಲ್ಲಿ ಕೆಲಸ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮಕ್ಕಳಾದ ತೈಮೂರ್ ಅಲಿ ಖಾನ್ ಮತ್ತು ಜಹಾಂಗೀರ್ ಅಲಿ ಖಾನ್ ಹುಟ್ಟಿದ ನಂತರ ತಮಗೆ ಕುಟುಂಬದ ಪ್ರಾಮುಖ್ಯತೆ ತಿಳಿಯಿತು ಎಂದು ಸೈಫ್ ಅಲಿ ಖಾನ್ (Saif Ali Khan) ಅವರು ಹೇಳಿದ್ದಾರೆ.

‘ಇಂಡಿಯಾ ಟುಡೇ’ ಜೊತೆ ಮಾತನಾಡಿದ ಸೈಫ್, ನಟರು ತಮ್ಮ ಅಸ್ತವ್ಯಸ್ತವಾಗಿರುವ ಶೂಟಿಂಗ್ ವೇಳಾಪಟ್ಟಿಯಿಂದಾಗಿ ಅನುಭವಿಸುವ ವೈಯಕ್ತಿಕ ನಷ್ಟಗಳ ಬಗ್ಗೆ ಮಾತನಾಡಿದರು. ‘ನನ್ನ ವೃತ್ತಿಜೀವನದ ಬೆಳವಣಿಗೆಗಾಗಿ ನಾನು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ತ್ಯಾಗಗಳನ್ನು ಮಾಡಿದ್ದೇನೆ. ನಟರಾಗಿ ನಮಗೆ ಸಿಗುವ ಬೆಂಬಲವನ್ನು ನಾವು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದಾರೆ.

ಇದಕ್ಕೆ ಗಿರಿಶಿಖರವನ್ನು ಹತ್ತುವ ಉದಾಹರಣೆ ನೀಡಿದ ಸೈಫ್ ಅಲಿ ಖಾನ್ ಅವರು, ‘ಮನೆ ಎಂಬುದು ನಮಗೆ ಬೇಸ್ ಕ್ಯಾಂಪ್ ಇದ್ದಂತೆ. ಅಲ್ಲಿಗೆ ಬಂದು ವಿಶ್ರಾಂತಿ ಪಡೆದು, ಮತ್ತೆ ಬೆಟ್ಟ ಹತ್ತಲು ಸಜ್ಜಾಗಬೇಕು. ಆದರೆ ಯಾರಾದರೂ ಬೆಟ್ಟ ಹತ್ತುವುದರಲ್ಲೇ ಹೆಚ್ಚು ಸಮಯ ಕಳೆದರೆ, ಆ ಬೇಸ್ ಕ್ಯಾಂಪ್ ಒಂದು ದಿನ ಇಲ್ಲವಾಗುತ್ತದೆ’ ಎಂದು ಎಚ್ಚರಿಸಿದ್ದಾರೆ. ನಟರು ತಮ್ಮ ಕುಟುಂಬದ ಹಲವು ಪ್ರಮುಖ ಕ್ಷಣಗಳನ್ನು ಮಿಸ್ ಮಾಡಿಕೊಳ್ಳುತ್ತಾರೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

‘ಈ ವಯಸ್ಸಿನಲ್ಲಿ ನಾನು ಕುಟುಂಬಕ್ಕೆ ಸಮಯ ನೀಡುವ ಬಗ್ಗೆ ಹೆಚ್ಚು ಜಾಗೃತನಾಗಿದ್ದೇನೆ. ತಡವಾಗಿ ಮಕ್ಕಳಾದ ನಂತರ, ಸಂಜೆ ಒಂದು ನಿರ್ದಿಷ್ಟ ಸಮಯಕ್ಕೆ ಮನೆಗೆ ತಲುಪಬೇಕು ಅನಿಸುತ್ತದೆ. ಬೆಳಗ್ಗೆ 9ರಿಂದ ರಾತ್ರಿ 9ರವರೆಗಿನ ಶಿಫ್ಟ್ ನನಗೆ ತುಂಬಾ ಕಿರಿಕಿರಿ ಉಂಟುಮಾಡುತ್ತದೆ. ಏಕೆಂದರೆ ಶೂಟಿಂಗ್ ಎಂದಿಗೂ 9ಕ್ಕೆ ಶುರುವಾಗಿ 9ಕ್ಕೆ ಮುಗಿಯುವುದಿಲ್ಲ. ಕೊನೆಯ ಶಾಟ್ ಮುಗಿಯುವಾಗ 9.30 ಆಗಿರುತ್ತದೆ. ಮನೆ ತಲುಪುವಾಗ ರಾತ್ರಿ 11 ಆಗಿರುತ್ತದೆ. ರಾತ್ರಿ 11 ಗಂಟೆಗೆ ಮನೆಗೆ ಸೇರಿದರೆ ಅದು ಜೀವನವೇ ಅಲ್ಲ. ಆದರೆ ನಾನು ಹಿಂದೆ ಇಂತಹ ತ್ಯಾಗಗಳನ್ನು ಮಾಡಿದ್ದೇನೆ’ ಎಂದು ಸೈಫ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಆದಿಪುರುಷ್’ ಸಿನಿಮಾ ನೋಡಿ ಸೈಫ್ ಅಲಿ ಖಾನ್ ಮಗನಿಗೂ ಬಂತು ಕೋಪ

ಸೈಫ್ ಅಲಿ ಖಾನ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಕರ್ತವ್ಯ’ ಸಿನಿಮಾ ಪ್ರಸ್ತುತ ನೆಟ್‌ಫ್ಲಿಕ್ಸ್ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಸಾರ ಆಗುತ್ತಿದೆ. ಈ ಚಿತ್ರದಲ್ಲಿ ಸೈಫ್ ಅಲಿ ಖಾನ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಪರಾಧವೊಂದನ್ನು ಭೇದಿಸುವ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಎದುರಾಗುವ ಕಷ್ಟಗಳು ಮತ್ತು ತಮ್ಮ ಕರ್ತವ್ಯದ ನಡುವೆ ಅವರು ಸಿಲುಕಿಕೊಳ್ಳುವ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಬೆಂಗಳೂರಿನಲ್ಲೊಂದು ವಿಚಿತ್ರ ಮನೆ ನೋಡಿದ್ರೆ ನೀವು ಶಾಕ್ ಆಗ್ತಿರಿ!
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಇನೋವಾ ಕಾರಿನಲ್ಲಿ ಬಂದು 7ಲಕ್ಷ ರೂ. ಮೌಲ್ಯದ ಸೀರೆ ಎಗರಿಸಿದ ಮಹಿಳಾ ಗ್ಯಾಂಗ್
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಮೋದಿ ಕರೆ ಬೆನ್ನಲ್ಲೇ ಬೆಂಗಾವಲು ವಾಹನ ತ್ಯಜಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಇನ್ನೂ ಹೆಚ್ಚಾಗುತ್ತಾ ಪೆಟ್ರೋಲ್, ಡೀಸೆಲ್ ಬೆಲೆ? ತಜ್ಞರು ಹೇಳೋದೇನು ನೋಡಿ
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಮಗ, ಸೊಸೆ-ಮೊಮ್ಮಕ್ಳು ಬೆಳಗಾಗೋದ್ರೊಳಗೆ ಸತ್ತೋದ್ರು: ತಾಯಿಯ ಕಣ್ಣೀರ ಮಾತು
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಬಸ್ಸಿನಲ್ಲಿ ಮೊಬೈಲ್ ಕಳವು ತಡೆಯಲು ಈ ಯುವಕನ ಐಡಿಯಾ ಫಾಲೋ ಮಾಡಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್