ಚಾಕು ಇರಿತದಿಂದ ಸೈಫ್ ಅಲಿ ಖಾನ್​ ಸ್ಥಿತಿ ಗಂಭೀರ; ನಟಿ ಕರೀನಾ ಕಪೂರ್ ಬಚಾವ್ ಆಗಿದ್ದು ಹೇಗೆ?

Kareena Kapoor: ಸೈಫ್ ಅಲಿ ಖಾನ್ ಅವರ ಮನೆಗೆ ದುಷ್ಕರ್ಮಿಗಳು ನುಗ್ಗಿ ಅವರಿಗೆ ಚಾಕು ಇರಿದಿದ್ದಾರೆ. ಆರು ಕಡೆ ಗಂಭೀರ ಗಾಯಗಳಾಗಿವೆ. ಆದರೆ ಕರೀನಾ ಕಪೂರ್ ಅವರು ಇದರಿಂದ ಬಚಾವ್ ಆಗಿದ್ದು ಹೇಗೆ? ಆ ಬಗ್ಗೆ ಮಾಹಿತಿ ಈ ಸ್ಟೋರಿಯಲ್ಲಿ ಇದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಮತ್ತು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಚಾಕು ಇರಿತದಿಂದ ಸೈಫ್ ಅಲಿ ಖಾನ್​ ಸ್ಥಿತಿ ಗಂಭೀರ; ನಟಿ ಕರೀನಾ ಕಪೂರ್ ಬಚಾವ್ ಆಗಿದ್ದು ಹೇಗೆ?
ಕರೀನಾ-ಸೈಫ್
Follow us
ರಾಜೇಶ್ ದುಗ್ಗುಮನೆ
|

Updated on: Jan 16, 2025 | 9:58 AM

ಸೈಫ್ ಅಲಿ ಖಾನ್ ಮನೆ ಒಳಗೆ ನುಗ್ಗಿದ ದುಷ್ಕರ್ಮಿಗಳು ನಟನಿಗೆ ಚಾಕು ಇರಿದಿದ್ದಾರೆ. ಆರು ಕಡೆಗಳಲ್ಲಿ ಗಂಭೀರ ಗಾಯಗಳಾಗಿವೆ. ಹಾಗಾದರೆ ಈ ಪ್ರಕರಣದಲ್ಲಿ ಅವರ ಪತ್ನಿ ಕರೀನಾ ಕಪೂರ್ ಹೇಗೆ ಸೇವ್ ಆದರು? ಅವರಿಗೆ ಏನು ಆಗಿಲ್ಲ ಏಕೆ ಎಂಬ ಪ್ರಶ್ನೆ ಮೂಡೋದು ಸಹಜ. ಅದಕ್ಕೆ ಉತ್ತರ ಸಿಕ್ಕಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳು ಹರಿದಾಡಿವೆ.

ಸೈಫ್ ಅಲಿ ಖಾನ್ ಅವರು ಮಾತ್ರ ಮನೆಯಲ್ಲಿ ಇದ್ದರು. ಕರೀನಾ ಕಪೂರ್ ಅವರು ಬುಧವಾರ (ಜನವರಿ 15) ರಾತ್ರಿ ಕರೀಷ್ಮಾ ಕಪೂರ್, ಸೋನಂ ಕಪೂರ್, ರಿಯಾ ಕಪೂರ್ ಜೊತೆ ಪಾರ್ಟಿಗೆ ತೆರಳಿದ್ದರು. ಕರೀನಾ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪಾರ್ಟಿ ಮಾಡುತ್ತಿರುವ ಫೋಟೋ ಕೂಡ ಹಂಚಿಕೊಂಡಿದ್ದರು. ಇದಕ್ಕೆ ‘ಗರ್ಲ್ಸ್​ ನೈಟ್​ ಇನ್’ ಎಂದು ಕ್ಯಾಪ್ಶನ್ ನೀಡಿದ್ದರು.  ಹೀಗಾಗಿ ಹಲ್ಲೆ ನಡೆಯುವ ಸಂದರ್ಭದಲ್ಲಿ ಅವರು ಮನೆಯಲ್ಲಿ ಇರಲಿಲ್ಲ. ಇದರಿಂದ ಅವರು ಬಚಾವ್ ಆಗಿದ್ದಾರೆ. ಇಲ್ಲದಿದ್ದರೆ ಅವರೂ ಗಾಯಗೊಳ್ಳುತ್ತಿದ್ದರೇನೋ.

ಗುರುವಾರ (ಜನವರಿ 16) ಮುಂಜಾನೆ 3ರಿಂದ 4 ಗಂಟೆ ಸುಮಾರಿಗೆ ಈ ಕಳ್ಳತನದ ಪ್ರಯತ್ನ ನಡೆದಿದೆ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಸೈಫ್ ಅಲಿ ಖಾನ್ ಮನೆ ಹಾಗೂ ಸುತ್ತ ಮುತ್ತ ಇರುವ ಪ್ರದೇಶಗಳ ಸಿಸಿಟಿವಿ ದೃಶ್ಯವ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಗಂಭೀರ ಗಾಯ

ಸೈಫ್ ಅಲಿ ಖಾನ್ ಅವರಿಗೆ ಬರೋಬ್ಬರಿ 4 ಕಡೆಗಳಲ್ಲಿ ಗಾಯಗಳಾಗಿವೆ. ಅವರ ಪರಿಸ್ಥಿತಿ ಗಂಭಿರವಾಗಿದೆ ಎನ್ನಲಾಗಿದೆ. ಬೆನ್ನು ಮೂಳೆ ಸಮೀಪ ಆಳವಾದ ಗಾಯವಾಗಿದ್ದು, ಅವರಿಗೆ ಸರ್ಜರಿ ಮಾಡಲಾಗುತ್ತಿದೆ. ಅವರು ಬೇಗ ಚೇತಿಸಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಗಲಾಟೆ

ಕಳ್ಳರು ನುಗ್ಗಿದಾಗ ಮನೆಗೆಲೆಸದವರು ಅವರನ್ನು ಹಿಡಿಯುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಸೈಫ್ ಎಚ್ಚರಗೊಂಡಿದ್ದಾರೆ. ಕಳ್ಳರನ್ನು ತಡೆಯುವ ಪ್ರಯತ್ನ ಮಾಡಿದಾಗ ಸೈಫರ್ ಅವರಿಗೆ  ಹಲವು ಬಾರಿ ಚುಚ್ಚಲಾಗಿದೆ. ಈ ಪ್ರಕರಣದಲ್ಲಿ ತಾಳ್ಮೆ ಇಂದ ಇರುವಂತೆ ಕುಟುಂಬದವರು ಅಭಿಮಾನಿಗಳ ಬಳಿ ಕೋರಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಸೈಫ್ ಅಲಿ ಖಾನ್​ಗೆ​ ಚಾಕು ಇರಿತ; ಆರು ಕಡೆಗಳಲ್ಲಿ ಗಾಯ

ದೌಡು

ಕರೀನಾ ಕಪೂರ್ ಅವರು ವಿಚಾರ ತಿಳಿಯುತ್ತಿದ್ದಂತೆ ಆಗಮಿಸಿದ್ದಾರೆ. ಸೈಫ್ ಅವರನ್ನು ನೇರವಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ದಾಳಿಯ ಹಿಂದೆ ಬೇರೆ ಏನಾದರೂ ಉದ್ದೇಶ ಇದೆಯೇ ಎಂಬ ಪ್ರಶ್ನೆ ಪೊಲೀಸರಿಗೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

BBL 2025: ಬೌಲ್ಡ್ ಆಗುವುದನ್ನು ತಪ್ಪಿಸಿ ಅರ್ಧಶತಕ ಸಿಡಿಸಿದ ಸ್ಟೀವ್ ಸ್ಮಿತ್
BBL 2025: ಬೌಲ್ಡ್ ಆಗುವುದನ್ನು ತಪ್ಪಿಸಿ ಅರ್ಧಶತಕ ಸಿಡಿಸಿದ ಸ್ಟೀವ್ ಸ್ಮಿತ್
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ