ಸೈಫ್ ಅಲಿ ಖಾನ್ಗೆ ಚಾಕು ಇರಿದ ವ್ಯಕ್ತಿ ಅರೆಸ್ಟ್; 30 ಗಂಟೆಗಳ ಬಳಿಕ ಬಲೆಗೆ ಬಿದ್ದ ಆರೋಪಿ
Saif Ali Khan: ಸೈಫ್ ಅಲಿ ಖಾನ್ ಅವರ ಮನೆಯಲ್ಲಿ ನಡೆದ ದರೋಡೆ ಮತ್ತು ಹಲ್ಲೆ ಪ್ರಕರಣದಲ್ಲಿ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸುಮಾರು 30 ಗಂಟೆಗಳ ಬಳಿಕ ಬಂಧನಕ್ಕೊಳಗಾದ ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದ. ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಕಳ್ಳ ಈಗ ಬಂಧನಕ್ಕೆ ಒಳಗಾಗಿದ್ದಾನೆ. ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅತ್ತ ಸೈಫ್ ಅಲಿ ಖಾನ್ ಅವರು ಹಲ್ಲೆಗೆ ಒಳಗಾಗಿರುವುದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಅವರು ಚೇತರಿಸಿಕೊಳ್ಳುವ ಹಂತದಲ್ಲಿ ಇದ್ದಾರೆ.
ಸದ್ಯ ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದಾರೆ. ಅಲ್ಲಿ ಆತನ ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಮಾಡಿದರ ಹಿಂದಿನ ಉದ್ದೇಶ ಏನು? ಆತ ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಆತ ಏನಾದರೂ ಪ್ರಮುಖ ವಿಚಾರ ರಿವೀಲ್ ಮಾಡುತ್ತಾನೋ ಎನ್ನುವ ಕುತೂಹಲ ಮೂಡಿದೆ.
Agent Vinod and Phantom – 2 in 1#SaifAliKhanAttacked pic.twitter.com/iwqoNBLKxJ
— Kashmiri Hindu (@BattaKashmiri) January 16, 2025
ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ವ್ಯಕ್ತಿಯ ಫೋಟೋವನ್ನು ಮುಂಬೈ ಪೊಲೀಸರು ಬಹಿರಗಂಪಡಿಸಿದ್ದರು. ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಅಪಾರ್ಟ್ಮೆಂಟ್ಗೆ ನುಗ್ಗಿದ್ದ. ಶಂಕಿತ ವ್ಯಕ್ತಿಯು ಟಿ-ಶರ್ಟ್ ಮತ್ತು ಜೀನ್ಸ್ ಧರಿಸಿದ್ದ. ಆತನ ಈಗ ತ್ವರಿತವಾಗಿ ಬಂಧಿಸಲಾಗಿದೆ.
ಸೈಫ್ ಅಲಿ ಖಾನ್ ಮನೆಯಲ್ಲಿ ಸರಿಯಾದ ಭದ್ರತೆ ಇರಲಿಲ್ಲ ಎನ್ನಲಾಗಿದೆ. ಫ್ಲ್ಯಾಟ್ನ ಹೊರ ಭಾಗದಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಿಲ್ಲ. ಹೀಗಾಗಿ, ಬಿಲ್ಡಿಂಗ್ಗೆ ಯಾರು ಬರುತ್ತಾರೆ ಅಥವಾ ಹೋಗುತ್ತಾರೆ ಎಂದು ಹೇಳಲು ಸಾಧ್ಯ ಇರಲಿಲ್ಲ. ಇನ್ನು, ಯಾರು ಬರುತ್ತಾರೆ ಹೋಗುತ್ತಾರೆ ಎಂಬುದನ್ನು ಬರೆದಿಡಲು ಅಲ್ಲಿ ಯಾವುದೇ ರಿಜಿಸ್ಟರ್ ಬುಕ್ ಕೂಡ ಇರಲಿಲ್ಲ. ಹೀಗಾಗಿ ಆತ ಎಮರ್ಜೆನ್ಸಿ ಎಕ್ಸಿಟ್ನ ಮೆಟ್ಟಿಲು ಹತ್ತಿಯೇ ಸೈಫ್ ಮನೆಗೆ ಹೋಗಿದ್ದ. ‘ಇದು ಸೈಫ್ ಸ್ಥಾನದಲ್ಲಿ ಇರುವ ಇತರ ಸೆಲೆಬ್ರಿಟಿಗಳಿಗೂ ವೇಕಪ್ ಕಾಲ್’ ಎಂದು ಪೊಲೀಸರು ಹೇಳಿದ್ದಾರೆ.
ಏನಿದು ಘಟನೆ?
ಜನವರಿ 16ರ ಬೆಳಿಗ್ಗೆ 2.30ರ ಸುಮಾರಿಗೆ ಸೈಫ್ ಅಲಿ ಖಾನ್ ಫ್ಲ್ಯಾಟ್ಗೆ ನುಗ್ಗಿದ ವ್ಯಕ್ತಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ಹಣ ಕೊಡುವುದಿಲ್ಲ ಎಂದ ಬಳಿಕ ಸೈಫ್ ಮೇಲೆ ಆತ ಆರು ಬಾರಿ ಚಾಕು ಇರಿದಿದ್ದ. ಇದು ದೊಡ್ಡ ಮಟ್ಟದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 11:27 am, Fri, 17 January 25