Saif Ali Khan: ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಸೈಫ್ ಅಲಿ ಖಾನ್​ಗೆ​ ಚಾಕು ಇರಿತ; ಆರು ಕಡೆಗಳಲ್ಲಿ ಗಾಯ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈ ಮನೆಯಲ್ಲಿ ದರೋಡೆ ಯತ್ನ ನಡೆದಿದ್ದು, ಈ ವೇಳೆ ಅವರ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಕಳ್ಳರು ಮನೆಗೆ ನುಗ್ಗಿದಾಗ ಸೈಫ್ ಅವರು ಪ್ರತಿರೋಧಿಸಿದ್ದರಿಂದ ಘಟನೆ ನಡೆದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Saif Ali Khan: ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಸೈಫ್ ಅಲಿ ಖಾನ್​ಗೆ​ ಚಾಕು ಇರಿತ; ಆರು ಕಡೆಗಳಲ್ಲಿ ಗಾಯ
ಸೈಫ್ ಅಲಿ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on:Jan 16, 2025 | 8:48 AM

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವುನಿಂದ ದಾಳಿ ಮಾಡಲಾಗಿದೆ. ಶ್ರೀಮಂತ ನಟ ಎಂಬ ಕಾರಣಕ್ಕೆ ಕೆಲವರು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಸದ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಸೈಫ್ ಅಲಿ ಖಾನ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಟುಂಬದವರ ಜೊತೆ ಮಲಗಿದ್ದರು. ಇಂದು (ಜನವರಿ 16) ಮುಂಜಾನೆ 2.30ರ ವೇಳೆಗೆ ಕಳ್ಳರು ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಎಲ್ಲರಿಗೂ ಎಚ್ಚರ ಆಗಿದೆ. ಆಗ ಸೈಫ್ ಅವರು ಕಳ್ಳರನ್ನು ತಡೆಯಲು ಹೋಗಿದ್ದು, ಈ ವೇಳೆ ಕಳ್ಳರು ಹಲ್ಲೆ ಮಾಡಿದ್ದಾರೆ. ತಕ್ಷಣ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸದ್ಯ ಕಳ್ಳರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ.

ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದಾರೆ. ‘ಕಳ್ಳರು 2-3 ಬಾರಿ ಹಲ್ಲೆ ಮಾಡಿದ್ದಾರೆ. ನಾವು ಇದನ್ನು ತನಿಖೆ ನಡೆಸುತ್ತಿದ್ದೇವೆ. ಮುಂಬೈ ಕ್ರೈಮ್ ಬ್ರ್ಯಾಂಚ್ ಕೂಡ ತನಿಖೆ ನಡೆಸುತ್ತಿದೆ. ಮುಂಜಾನೆ 3 ಗಂಟೆಗೆ ಸೈಫ್ ಅವರನ್ನು ಲೀವಾತಿ ಆಸ್ಪತ್ರೆಗೆ ಕರೆತರಲಾಗಿದೆ. ಅವರಿಗೆ ಆರು ಗಾಯಗಳಾಗಿದ್ದು, ಎರಡು ಕಡೆ ತುಂಬಾನೇ ಗಂಭೀರ ಗಾಯವಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಲ್ಮಾನ್, ಶಾರುಖ್​ ಖಾನ್ ಮಾತ್ರವಲ್ಲ ಸೈಫ್ ಅಲಿ ಖಾನ್​ಗೂ ಬಂದಿತ್ತು ಬೆದರಿಕೆ

ಬೆನ್ನಿನ ಭಾಗದಲ್ಲಿ ಕಳ್ಳರು ಇರಿದ ಚಾಕು ತುಂಬಾನೇ ದೊಡ್ಡ ಗಾಯವನ್ನೇ ಮಾಡಿದೆ ಎನ್ನಲಾಗಿದೆ. ಬೆನ್ನಿನ ಮೂಳೆಗೆ ತೊಂದರೆ ಆಗಿದೆಯೇ ಎನ್ನುವ ಬಗ್ಗೆ ಪರೀಕ್ಷೆ ನಡೆಯುತ್ತಿದೆ. ಸದ್ಯ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:28 am, Thu, 16 January 25

ರನ್ನಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ಚಕಿತರನ್ನಾಗಿಸಿದ ಡೊನೊವನ್ ಫೆರೇರಾ
ರನ್ನಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ಚಕಿತರನ್ನಾಗಿಸಿದ ಡೊನೊವನ್ ಫೆರೇರಾ
‘ಭವ್ಯಾ ಗೌಡ ಪರಿಚಯ ಮೊದಲೇ ಇತ್ತು’; ಕೊನೆಗೂ ಒಪ್ಪಿಕೊಂಡ ತ್ರಿವಿಕ್ರಮ್
‘ಭವ್ಯಾ ಗೌಡ ಪರಿಚಯ ಮೊದಲೇ ಇತ್ತು’; ಕೊನೆಗೂ ಒಪ್ಪಿಕೊಂಡ ತ್ರಿವಿಕ್ರಮ್
ನಂಜನಗೂಡು: ಹುಲಿ ವಿಡಿಯೋ ವೈರಲ್ ಬಗ್ಗೆ ಅರಣ್ಯ ಇಲಾಖೆ ಹೇಳಿದ್ದೇನು?
ನಂಜನಗೂಡು: ಹುಲಿ ವಿಡಿಯೋ ವೈರಲ್ ಬಗ್ಗೆ ಅರಣ್ಯ ಇಲಾಖೆ ಹೇಳಿದ್ದೇನು?
ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು