ಪ್ರಶಾಂತ್​ ನೀಲ್​ಗೆ ಹೆದರಿದ ಶಾರುಖ್? ಮುಂದಕ್ಕೆ ಹೋಗಲಿದೆ ‘ಡಂಕಿ’ ರಿಲೀಸ್

ಈ ಬಗ್ಗೆ ಟ್ರೇಡ್ ಅನಲಿಸ್ಟ್ ಮನೋಬಲ ವಿಜಯಬಾಲನ್ ಟ್ವೀಟ್ ಮಾಡಿದ್ದಾರೆ. ‘ಸಲಾರ್ vs ಡಂಕಿ ಸ್ಪರ್ಧೆ ಇಲ್ಲ. ಶಾರುಖ್ ಖಾನ್ ನಟನೆಯ ಡಂಕಿ ಸಿನಿಮಾ ಪೋಸ್ಟ್​ಪೋನ್ ಆಗೋ ಸಾಧ್ಯತೆ ಇದೆ’ ಎಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ಕುತೂಹಲ ಹೆಚ್ಚಿದೆ.

ಪ್ರಶಾಂತ್​ ನೀಲ್​ಗೆ ಹೆದರಿದ ಶಾರುಖ್? ಮುಂದಕ್ಕೆ ಹೋಗಲಿದೆ ‘ಡಂಕಿ’ ರಿಲೀಸ್
ಶಾರುಖ್​-ಪ್ರಭಾಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 13, 2023 | 10:57 AM

‘ಡಂಕಿ’ Vs ‘ಸಲಾರ್’ ಬಗ್ಗೆ ಜೋರಾಗಿ ಚರ್ಚೆ ಆಗುತ್ತಿದೆ. ಡಿಸೆಂಬರ್ 22ರಂದು ಈ ಎರಡೂ ಸಿನಿಮಾಗಳು ರಿಲೀಸ್ ಆಗಲಿವೆ. ಈ ಎರಡೂ ಚಿತ್ರಗಳ ಪೈಕಿ ಗೆಲ್ಲೋದು ಯಾರು ಎನ್ನುವ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಈ ಮಧ್ಯೆ ‘ಡಂಕಿ’ ಸಿನಿಮಾದ (Dunki Movie) ರಿಲೀಸ್ ದಿನಾಂಕ 2024ಕ್ಕೆ ಪೋಸ್ಟ್​ಪೋನ್​ ಆಗಲಿದೆ ಎಂದು ವರದಿ ಆಗಿದೆ. ಈ ಮಾತು ಕೇಳಿ ಪ್ರಭಾಸ್ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ‘ಸಲಾರ್’ ಸಿನಿಮಾ ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ.

2018ರಲ್ಲಿ ಶಾರುಖ್ ಖಾನ್ ನಟನೆಯ ‘ಜೀರೋ’ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್’ ಒಟ್ಟಿಗೆ ರಿಲೀಸ್ ಆಯಿತು. ‘ಕೆಜಿಎಫ್’ ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಬಿಡುಗಡೆ ಆಗಿ ಮೆಚ್ಚುಗೆ ಪಡೆಯಿತು. 40+ ಕೋಟಿ ರೂಪಾಯಿ ಗಳಿಕೆ ಮಾಡಿ ಈ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿತು. ‘ಕೆಜಿಎಫ್’ ಎದುರು ‘ಜೀರೋ’ ಚಿತ್ರಕ್ಕೆ ಸೋಲಾಯಿತು. ಈಗ ಮತ್ತೊಮ್ಮೆ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾ ಹಾಗೂ ಶಾರುಖ್ ಖಾನ್ ಮತ್ತೊಮ್ಮೆ ಮುಖಾಮುಖಿ ಆಗುತ್ತಿದ್ದಾರೆ.

ಈ ಬಗ್ಗೆ ಟ್ರೇಡ್ ಅನಲಿಸ್ಟ್ ಮನೋಬಲ ವಿಜಯಬಾಲನ್ ಟ್ವೀಟ್ ಮಾಡಿದ್ದಾರೆ. ‘ಸಲಾರ್ vs ಡಂಕಿ ಸ್ಪರ್ಧೆ ಇಲ್ಲ. ಶಾರುಖ್ ಖಾನ್ ನಟನೆಯ ಡಂಕಿ ಸಿನಿಮಾ ಪೋಸ್ಟ್​ಪೋನ್ ಆಗೋ ಸಾಧ್ಯತೆ ಇದೆ’ ಎಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ಕುತೂಹಲ ಹೆಚ್ಚಿದೆ.

ಶಾರುಖ್ ಖಾನ್ ನಟನೆಯ ‘ಪಠಾಣ್’ ಹಾಗೂ ‘ಜವಾನ್’ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಈ ಎರಡೂ ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿವೆ. ಇದರಿಂದ ಶಾರುಖ್ ಖಾನ್ ಅವರು ಫಾರ್ಮ್​​ಗೆ ಮರಳಿದ್ದಾರೆ. ಈಗ ‘ಡಂಕಿ’ ಸಿನಿಮಾ ಮೂಲಕ ಈ ವರ್ಷ ಹ್ಯಾಟ್ರಿಕ್ ಗೆಲುವು ಕಾಣುವ ಭರವಸೆಯಲ್ಲಿ ಅವರಿದ್ದಾರೆ. ಆದರೆ, ಇದು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಇದನ್ನೂ ಓದಿ:  ರಿವೀಲ್ ಆಯ್ತು ‘ಡಂಕಿ’ ಸಿನಿಮಾದ ಕಥೆ; ಶಾರುಖ್ ಖಾನ್ ಪಾತ್ರ ಹೇಗಿರಲಿದೆ?

‘ಡಂಕಿ’ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ನಿರ್ದೇಶನ ಇದೆ. ತಾಪ್ಸಿ ಪನ್ನು ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನು, ‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್, ಶ್ರುತಿ ಹಾಸನ್ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Fri, 13 October 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್