AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆ ಎದುರು ಗಲಾಟೆ; ಮರುದಿನವೇ ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿ ರಾಜಿ ಮಾಡಿಕೊಂಡ ಪಾಪರಾಜಿಗಳು

ನಟ ಸಲ್ಮಾನ್ ಖಾನ್ ಅವರ ಆಸ್ಪತ್ರೆಗೆ ಬಂದಿದ್ದಾಗ ಪಾಪರಾಜಿಗಳು ಕಿರುಚಾಡಿದ್ದರು. ಅವರ ವರ್ತನೆಗೆ ಸಲ್ಲು ಗರಂ ಆಗಿದ್ದರು. ಆದರೆ ಈಗ ಪಾಪರಾಜಿಗಳಿಗೆ ತಮ್ಮ ತಪ್ಪಿನ ಅರಿವಾಗಿದ್ದು, ಕ್ಷಮೆ ಕೇಳಿದ್ದಾರೆ. ಇದರಿಂದ ಸಲ್ಮಾನ್ ಖಾನ್ ಕೂಡ ಎಲ್ಲವನ್ನೂ ಮರೆತು ಎಂದಿನಂತೆ ನಗುತ್ತಾ ಪೋಸ್ ನೀಡಿದ್ದಾರೆ.

ಆಸ್ಪತ್ರೆ ಎದುರು ಗಲಾಟೆ; ಮರುದಿನವೇ ಸಲ್ಮಾನ್ ಖಾನ್ ಬಳಿ ಕ್ಷಮೆ ಕೇಳಿ ರಾಜಿ ಮಾಡಿಕೊಂಡ ಪಾಪರಾಜಿಗಳು
Ritesh Deshmukh, Salman Khan
ಮದನ್​ ಕುಮಾರ್​
|

Updated on: May 21, 2026 | 3:26 PM

Share

ಮುಂಬೈನ ಆಸ್ಪತ್ರೆಯೊಂದರ ಹೊರಗಡೆ ತಮ್ಮ ಖಾಸಗಿತನಕ್ಕೆ ಧಕ್ಕೆ ತಂದ ಪಾಪರಾಜಿಗಳ ಮೇಲೆ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ತೀವ್ರ ಆಕ್ರೋಶ ಹೊರಹಾಕಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದರೆ, ಈ ಘಟನೆ ನಡೆದ ಕೇವಲ ಒಂದೇ ದಿನದಲ್ಲಿ ಸಲ್ಲು ಭಾಯ್ ಹಳೆಯ ಮುನಿಸನ್ನು ಮರೆತು ಫೋಟೋಗ್ರಾಫರ್‌ಗಳ ಕ್ಷಮೆಯನ್ನು ಸ್ವೀಕರಿಸುವ ಮೂಲಕ ದೊಡ್ಡ ಗುಣ ಪ್ರದರ್ಶಿಸಿದ್ದಾರೆ. ಬುಧವಾರ (ಮೇ 20) ನಡೆದ ಕಾರ್ಯಕ್ರಮವೊಂದರಲ್ಲಿ ಸಲ್ಮಾನ್ ಮತ್ತು ಪಾಪರಾಜಿಗಳ (Paparazzi) ನಡುವೆ ಸೌಹಾರ್ದಯುತ ಮಾತುಕತೆ ನಡೆದಿದೆ.

ಬುಧವಾರ ರಾತ್ರಿ ಸಲ್ಮಾನ್ ಖಾನ್ ಅವರು ಮುಂಬೈನಲ್ಲಿ ನಡೆದ ‘ರಾಜಾ ಶಿವಾಜಿ’ ಸಿನಿಮಾದ ಸಕ್ಸಸ್ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಈ ಚಿತ್ರದಲ್ಲಿ ಸಲ್ಮಾನ್ ವಿಶೇಷ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ನಾಯಕ ಮತ್ತು ನಿರ್ದೇಶಕ ರಿತೇಶ್ ದೇಶ್‌ಮುಖ್ ಅವರೊಂದಿಗೆ ಸಲ್ಮಾನ್ ಅವರು ಕ್ಯಾಮೆರಾಗಳಿಗೆ ಪೋಸ್ ನೀಡಲು ಹೊರಬಂದಾಗ, ಅಲ್ಲಿ ನೆರೆದಿದ್ದ ಫೋಟೋಗ್ರಾಫರ್‌ಗಳೆಲ್ಲರೂ ಒಟ್ಟಾಗಿ ಸೂಪರ್‌ಸ್ಟಾರ್ ಬಳಿ ಕ್ಷಮೆ ಕೇಳಲು ಮುಂದಾಗಿದ್ದಾರೆ.

ಸಲ್ಮಾನ್ ಬರುತ್ತಿದ್ದಂತೆ ಸುತ್ತುವರಿದ ಪಾಪರಾಜಿಗಳು, ‘ನಮ್ಮನ್ನು ಕ್ಷಮಿಸಿ ಭಾಯ್’ ಎನ್ನುತ್ತಾ ಗದ್ದಲ ಸೃಷ್ಟಿಸಿದರು. ಇದನ್ನು ಗಮನಿಸಿದ ಸಲ್ಮಾನ್, ಫೋಟೋಗ್ರಾಫರ್ ಒಬ್ಬರನ್ನು ಹತ್ತಿರ ಬರಲು ಬಿಡುವಂತೆ ತಮ್ಮ ಸೆಕ್ಯೂರಿಟಿ ತಂಡಕ್ಕೆ ಸೂಚಿಸಿದರು. ಬಳಿಕ ಏನಾಗುತ್ತಿದೆ ಎಂದು ವಿಚಾರಿಸಿದಾಗ, ಅವರೆಲ್ಲರೂ ಕ್ಷಮೆ ಕೇಳುತ್ತಿರುವುದು ಸಲ್ಮಾನ್‌ಗೆ ಮನವರಿಕೆಯಾಗಿದೆ. ತಕ್ಷಣವೇ ಸಲ್ಮಾನ್ ಸನ್ನೆ ಮಾಡುತ್ತಾ, ‘ಎಲ್ಲವೂ ಸರಿ ಹೋಗಿದೆ’ ಎಂದು ಸಿಗ್ನಲ್ ನೀಡಿದ್ದಾರೆ.

ಈ ಸಂದರ್ಭದ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಫೋಟೋಗ್ರಾಫರ್ ಒಬ್ಬರು ‘ಇವತ್ತು ಯಾರೂ ಕಿರುಚಬೇಡಿ, ಲವ್ ಯೂ ಭಾಯ್’ ಎನ್ನುವುದು ಕೇಳಿಸುತ್ತದೆ. ಅದಕ್ಕೆ ಸಲ್ಮಾನ್ ನಗುತ್ತಾ, ‘ಹಾ, ಈ ಜಾಗ ಕಿರುಚಾಡಲು ಸರಿಯಾಗಿದೆ’ ಎಂದು ಉತ್ತರಿಸಿದ್ದಾರೆ. ನಂತರ ಪಾಪರಾಜಿಗಳು ಮಂಗಳವಾರ ರಾತ್ರಿಯ ತಮ್ಮ ನಡವಳಿಕೆಗೆ ಮತ್ತೊಮ್ಮೆ ಕ್ಷಮೆಯಾಚಿಸಿದಾಗ, ಸಲ್ಮಾನ್ ತಮಾಷೆಯಾಗಿ, ‘ಸ್ವಲ್ಪ ಜೋರಾಗಿ ಹೇಳಿ, ನಿಮ್ಮ ಧ್ವನಿ ಸರಿಯಾಗಿ ಕೇಳಿಸುತ್ತಿಲ್ಲ’ ಎಂದು ಕಾಲೆಳೆದಿದ್ದಾರೆ. ಸಲ್ಮಾನ್ ಅವರ ಈ ಹಾಸ್ಯ ಪ್ರಜ್ಞೆ ಕಂಡು ಪಕ್ಕದಲ್ಲೇ ಇದ್ದ ರಿತೇಶ್ ದೇಶ್‌ಮುಖ್ ಕೂಡ ಜೋರಾಗಿ ನಕ್ಕಿದ್ದಾರೆ.

ಇದನ್ನೂ ಓದಿ: ತಮ್ಮ ನೋವನ್ನು ಆನಂದಿಸಿದವರಿಗೆ ಎಚ್ಚರಿಸಿದ ಸಲ್ಮಾನ್ ಖಾನ್

ಸಲ್ಮಾನ್ ಕೋಪಕ್ಕೆ ಕಾರಣವೇನು? ಮಂಗಳವಾರ ರಾತ್ರಿ ಮುಂಬೈನ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಆಪ್ತರನ್ನು ನೋಡಲು ಸಲ್ಮಾನ್ ಖಾನ್ ಹೋಗಿದ್ದರು. ಈ ವೇಳೆ ಪಾಪರಾಜಿಗಳು ಅವರನ್ನು ಬೆನ್ನಟ್ಟಿ, ಆಸ್ಪತ್ರೆಯ ಆವರಣದಲ್ಲೇ ಸಲ್ಮಾನ್ ಅವರ ಮುಂಬರುವ ‘ಮಾತೃಭೂಮಿ’ ಚಿತ್ರದ ಹೆಸರನ್ನು ಜೋರಾಗಿ ಕೂಗುತ್ತಾ ಗಲಾಟೆ ಮಾಡಿದ್ದರು. ಇದರಿಂದ ತೀವ್ರ ಅಸಮಾಧಾನಗೊಂಡ ಸಲ್ಮಾನ್, ‘ನಿಮಗೆ ಹುಚ್ಚು ಹಿಡಿದಿದೆಯೇ?’ ಎಂದು ತಲೆಗೆ ಕೈ ಮುಟ್ಟಿ ಕೋಪದಿಂದ ಪ್ರಶ್ನಿಸಿದ್ದರು. ಅಷ್ಟೇ ಅಲ್ಲದೆ, ‘ನಿಮ್ಮ ಕುಟುಂಬದವರು ಯಾರಾದರೂ ಆಸ್ಪತ್ರೆಗೆ ದಾಖಲಾಗಿದ್ದಾಗ ಬೇರೆಯವರು ಹೀಗೆ ಮಾಡಿದರೆ ನಿಮಗೆ ಹೇಗನಿಸುತ್ತದೆ?’ ಎಂದು ಖಾರವಾಗಿ ಕ್ಲಾಸ್ ತಗೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?